T20 World Cup 2024: ಅರ್ಶ್‌ದೀಪ್ ಮಾರಕ ಬೌಲಿಂಗ್; ಭಾರತಕ್ಕೆ ಸಾಧಾರಣ ಗುರಿ ನೀಡಿದ ಯುಎಸ್ಎ
ಬುಧವಾರ, ಜೂನ್ 12ರಂದು ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಎ ಗುಂಪಿನ ಪಂದ್ಯದಲ್ಲಿ ಭಾರತ ತಂಡದ ಮಾರಕ ಬೌಲಿಂಗ್ ಪ್ರದರ್ಶನಕ್ಕೆ ತತ್ತರಿಸಿದ ಯುಎಸ್ಎ (ಅಮೆರಿಕ) ತಂಡವು ಸಾಧಾರಣ ಮೊತ್ತ ಕಲೆಹಾಕಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಯುಎಸ್ಎ ತಂಡ ಸ್ಟೀವನ್ ಟೇಲರ್ ಅವರ 24 ರನ್ ಮತ್ತು ನಿತೀಶ್ ಕುಮಾರ್ ಅವರ 27 ರನ್‌ಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿದ್ದು, ಭಾರತ ತಂಡಕ್ಕೆ 111 ರನ್‌ಗಳ ಕಡಿಮೆ ಗುರಿ ನೀಡಿದೆ.

ಯುಎಸ್ಎ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಶಯಾನ್ ಜಹಾಂಗೀರ್ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲಿಯೇ ಅರ್ಶ್‌ದೀಪ್ ಸಿಂಗ್ ಬೌಲಿಂಗ್‌ನಲ್ಲಿ ಎಲ್‌ಬಿಡಬ್ಲ್ಯು ಆಗಿ ಔಟಾದರು. ನಂತರ ಬಂದ ಆಂಡ್ರೀಸ್ ಗೌಸ್ ಕೇವಲ 2 ರನ್ ಗಳಿಸಿ ಅದೇ ಓವರ್‌ನಲ್ಲಿ ವಿಕೆಟ್ ಒಪ್ಪಿಸಿದರು.
ನಂತರ ಬಂದ ಹಂಗಾಮಿ ನಾಯಕ ಆರೋನ್ ಜೋನ್ಸ್ 22 ಎಸೆತಗಳಲ್ಲಿ 11 ರನ್ ಗಳಿಸಿ ಪೆವಿಲಿಯನ್ ಸೇರಿದರು. ಆ ಬಳಿಕ ಆರಂಭಿಕ ಬ್ಯಾಟರ್ ಸ್ಟೀವನ್ ಟೇಲರ್ 30 ಎಸೆತಗಳಲ್ಲಿ 2 ಸಿಕ್ಸರ್‌ಗಳ ಮೂಲಕ 24 ರನ್ ಗಳಿಸಿ ಔಟಾದರು.

ಮಧ್ಯಮ ಕ್ರಮಾಂಕದಲ್ಲಿ ನಿತೀಶ್ ಕುಮಾರ್ 23 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 27 ರನ್ ಬಾರಿಸಿದರೆ, ಕೋರಿ ಆಂಡರ್ಸನ್ 12 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 14 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಂತರ ಬಂದ ಹರ್ಮೀತ್ ಸಿಂಗ್ 10 ಎಸೆತಗಳಲ್ಲಿ 10 ರನ್ ಗಳಿಸಿದರು.
ಕೊನೆಯಲ್ಲಿ ಶಾಡ್ಲಿ ವ್ಯಾನ್ ಶಾಲ್ಕ್ವಿಕ್ 10 ರನ್, ಜಸ್‌ದೀಪ್ ಸಿಂಗ್ 2 ರನ್ ಗಳಿಸಿ ಯುಎಸ್ಎ ತಂಡದ ಮೊತ್ತವನ್ನು 110ರ ಗಡಿ ಮುಟ್ಟಿಸಿದರು.
ಬೌಲಿಂಗ್‌ನಲ್ಲಿ ಭಾರತ ತಂಡದ ಪರ ಅರ್ಶ್‌ದೀಪ್ ಸಿಂಗ್ 4 ಓವರ್‌ಗಳಲ್ಲಿ 9 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ಹಾರ್ದಿಕ್ ಪಾಂಡ್ಯ 4 ಓವರ್‌ಗಳಲ್ಲಿ 14 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಅಕ್ಷರ್ ಪಟೇಲ್ 3 ಓವರ್‌ಗಳಲ್ಲಿ 24 ರನ್ ನೀಡಿ 1 ವಿಕೆಟ್ ತಮ್ಮದಾಗಿಸಿಕೊಂಡರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications