T20 World Cup 2024: ಭಾರತ vs ಅಫ್ಘಾನಿಸ್ತಾನ ಸೂಪರ್ 8 ಪಂದ್ಯದ ಪಿಚ್, ಹವಾಮಾನ ವರದಿ!
ಜೂನ್ 19 ಬುಧವಾರ, ಟಿ20 ವಿಶ್ವಕಪ್ 2024ರ ಟೂರ್ನಿಯ ಮೇಲೆ ಮಳೆ ಪ್ರಭಾವ ಜೋರಾಗಿದೆ. ಕಳೆದ ಹಲವು ಗುಂಪು ಹಂತದ ಪಂದ್ಯಗಳು ಮಳೆಯಿಂದಾಗಿ ರದ್ದಾಗಿದ್ದು, ಬಲಿಷ್ಠ ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ.
ಅಮೆರಿಕದ ಫ್ಲೋರಿಡಾದಲ್ಲಿ 4 ಪಂದ್ಯಗಳಲ್ಲಿ 3 ಸಂಪೂರ್ಣವಾಗಿ ಮಳೆಯಿಂದಾಗಿ ರದ್ದಾಗಿದ್ದವು. ಇದೇ ವೇಳೆ ಮತ್ತೊಂದೆಡೆ ವೆಸ್ಟ್ ಇಂಡೀಸ್‌ನಲ್ಲಿ ಕೆಲವು ಪಂದ್ಯಗಳ ಮೇಲೆ ಮಳೆಯು ಸಾಕಷ್ಟು ಪ್ರಭಾವ ಬೀರಿತು.

ಇದೀಗ ಗ್ರೂಪ್ ಸುತ್ತಿನ ಬಳಿಕ ಟೂರ್ನಿ ಸೂಪರ್-8 ಆರಂಭವಾಗಲಿದೆ. ಇಂತಹ ಪರಿಸ್ಥಿತಿಯಲ್ಲಿ ಹವಾಮಾನ ಮುನ್ಸೂಚನೆಯು ಬಹಳ ಪ್ರಮುಖವಾಗಿದೆ. ಟೀಮ್ ಇಂಡಿಯಾದ ಪ್ರಮುಖ ಪಂದ್ಯಗಳಿಗೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದ್ದು, ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಸೂಪರ್-8 ರಲ್ಲಿ ಗುರುವಾರ (ಜೂನ್ 20) ಅಫ್ಘಾನಿಸ್ತಾನ ವಿರುದ್ಧ ಆಡಲಿದೆ.
ಉಭಯ ತಂಡಗಳ ಹೆಡ್-ಟು-ಹೆಡ್
ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಇದುವರೆಗೆ 8 ಟಿ20 ಪಂದ್ಯಗಳು ನಡೆದಿವೆ. ಟೀಮ್ ಇಂಡಿಯಾ 7 ಪಂದ್ಯಗಳನ್ನು ಗೆದ್ದಿದೆ. ಟಿ20 ಮಾದರಿಯಲ್ಲಿ ಅಫ್ಘಾನಿಸ್ತಾನ ಇನ್ನೂ ಭಾರತವನ್ನು ಸೋಲಿಸಿಲ್ಲ. ಒಂದು ಪಂದ್ಯದಲ್ಲಿ ಫಲಿತಾಂಶ ಬಂದಿಲ್ಲ.

ಇದೀಗ ಭಾರತ ತನ್ನ ಆಟಗಾರರ ಪೂರ್ಣ ಬಲದೊಂದಿಗೆ ಅಫ್ಘಾನಿಸ್ತಾನ ವಿರುದ್ಧ ಗೆಲುವು ಸಾಧಿಸಲು ಸಜ್ಜಾಗಿದೆ. ಇಲ್ಲಿಯವರೆಗೆ ಬೆಂಚ್ ಕಾಯುತ್ತಿದ್ದ ಕುಲದೀಪ್ ಯಾದವ್ ಪ್ಲೇಯಿಂಗ್-11ರಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಿದೆ.
ಭಾರತ-ಅಫ್ಘಾನಿಸ್ತಾನ ಪಂದ್ಯದ ಹವಾಮಾನ ವರದಿ
ಭಾರತೀಯ ಕ್ರಿಕೆಟ್ ಅಭಿಮಾನಿಗಳು ಹವಾಮಾನದ ಬಗ್ಗೆ ತುಂಬಾ ಚಿಂತಿತರಾಗಿದ್ದಾರೆ. ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿರುವ ಕೆನ್ಸಿಂಗ್ಟನ್ ಓವಲ್ ಸ್ಟೇಡಿಯಂನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯವನ್ನು ಆಯೋಜಿಸಲಾಗಿದೆ.
ಈ ಪಂದ್ಯದಲ್ಲಿ ಮಳೆಯಾಗುವ ಸಾಧ್ಯತೆ ತೀರಾ ಕಡಿಮೆ ಇರುವುದು ಸಂತಸದ ಸಂಗತಿ ಆಗಿದೆ. ಅಕ್ಯುವೆದರ್ ಪ್ರಕಾರ, ಸ್ಥಳೀಯ ಕಾಲಮಾನ ಬೆಳಗ್ಗೆ 10.30ಕ್ಕೆ ಆರಂಭವಾಗಲಿರುವ ಪಂದ್ಯದಲ್ಲಿ ಶೇ.44ರಷ್ಟು ಮಳೆಯಾಗುವ ಸಾಧ್ಯತೆ ಇದೆ.
ಕೆನ್ಸಿಂಗ್ಟನ್ ಓವಲ್‌ನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ತಾಪಮಾನವು ಸುಮಾರು 31 ಡಿಗ್ರಿ ಸೆಲ್ಸಿಯಸ್ ಮತ್ತು ತೇವಾಂಶವು ಶೇಕಡಾ 75 ರಷ್ಟಿರಲಿದೆ ಎಂದು ನಿರೀಕ್ಷಿಸಲಾಗಿದೆ.
ಪಿಚ್ ವರದಿ
ಸ್ಟೇಡಿಯಂನ ಬೌಂಡರಿ ಉದ್ದವು ಸರಿಸುಮಾರು 64-65 ಮೀಟರ್‌ಗಳಿದ್ದು, ಎರಡೂ ಬದಿಗಳಲ್ಲಿನ ಗಡಿಗಳು 67-68 ಮೀಟರ್‌ಗಳಿವೆ. ಈ ಪಿಚ್ ಹೊಸ ಚೆಂಡಿನಲ್ಲಿ ಬೌಲಿಂಗ್ ಮಾಡುವ ಬೌಲರ್‌ಗಳಿಗೆ ಅನುಕೂಲಕರವಾಗಿದೆ.
ಮಧ್ಯಮ ಓವರ್‌ಗಳಲ್ಲಿ ಸ್ಪಿನ್ ಬೌಲರ್‌ಗಳು ಈ ಪಿಚ್‌ನಿಂದ ಸಾಕಷ್ಟು ಸಹಾಯ ಪಡೆಯಬಹುದು. ಈ ಮೈದಾನದಲ್ಲಿ ಮೊದಲು ಬ್ಯಾಟ್ ಮಾಡುವ ತಂಡಕ್ಕೆ ಅನುಕೂಲಕರವಾಗಿದೆ.
ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್- 11
ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಶ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್ / ಕುಲದೀಪ್ ಯಾದವ್ .
ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ಗುಲ್ಬದಿನ್ ನೈಬ್, ಅಜ್ಮತುಲ್ಲಾ ಉಮರ್ಜಾಯ್, ಮೊಹಮ್ಮದ್ ನಬಿ, ನಜಿಬುಲ್ಲಾ ಝದ್ರಾನ್, ಕರೀಂ ಜನತ್, ರಶೀದ್ ಖಾನ್ (ನಾಯಕ), ನೂರ್ ಅಹ್ಮದ್, ನವೀನ್ ಉಲ್ ಹಕ್, ಫಜಲ್ಹಕ್ ಫಾರೂಕಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications