Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

T20 World Cup 2024: ಭಾರತ vs ಅಫ್ಘಾನಿಸ್ತಾನ ಸೂಪರ್‌-8 ಪಂದ್ಯದ ಟಾಸ್‌ ವರದಿ, ಪ್ಲೇಯಿಂಗ್‌

ಜೂನ್ 20 ಗುರುವಾರ, ವೆಸ್ಟ್‌ ಇಂಡೀಸ್‌ನ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆಯುತ್ತಿರುವ 2024ರ ಐಸಿಸಿ ಟಿ20 ವಿಶ್ವಕಪ್‌ ಪಂದ್ಯಾವಳಿಯ ಸೂಪರ್ 8ರ ತಮ್ಮ ಆರಂಭಿಕ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಮತ್ತು ರಶೀದ್ ಖಾನ್ ನಾಯಕತ್ವದ ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಿವೆ.

ಮೊದಲು ಟಾಸ್‌ ಗೆದ್ದ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ರಶೀದ್ ಖಾನ್ ಮುನ್ನೆಡೆಸುತ್ತಿರುವ ಅಫ್ಘಾನಿಸ್ತಾನ ತಂಡವು ಬೌಲಿಂಗ್‌ ಮಾಡಲಿದೆ.

T20 World Cup 2024 India vs Afghanistan match toss report

ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಇದುವರೆಗೆ 8 ಟಿ20 ಪಂದ್ಯಗಳು ನಡೆದಿವೆ. ಟೀಮ್‌ ಇಂಡಿಯಾ 7 ಪಂದ್ಯಗಳನ್ನು ಗೆದ್ದಿದೆ. ಟಿ20 ಮಾದರಿಯಲ್ಲಿ ಅಫ್ಘಾನಿಸ್ತಾನ ಇನ್ನೂ ಭಾರತವನ್ನು ಸೋಲಿಸಿಲ್ಲ. ಒಂದು ಪಂದ್ಯದಲ್ಲಿ ಫಲಿತಾಂಶ ಬಂದಿಲ್ಲ.

ಇಂದಿನ ಪಂದ್ಯದಲ್ಲಿ ಟೀಮ್‌ ಇಂಡಿಯಾವನ್ನು ಕಟ್ಟಿ ಹಾಕಲು ಅಫ್ಘಾನಿಸ್ತಾನ ತಂತ್ರ ರೂಪಿಸಿದೆ. ಇತ್ತ ಟೀಮ್‌ ಇಂಡಿಯಾ ಕೂಡ ಗೆಲುವಿನ ನಿರೀಕ್ಷೆಯಲ್ಲಿದೆ.

ಭಾರತ vs ಅಫ್ಘಾನಿಸ್ತಾನ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ

ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ 2024ರ ಟಿ20 ವಿಶ್ವಕಪ್‌ನ ಸಂಪೂರ್ಣ ಪ್ರಸಾರ ಹಕ್ಕುಗಳನ್ನು ಹೊಂದಿದೆ. ಹೀಗಾಗಿ ಭಾರತ ಮತ್ತು ಅಫ್ಘಾನಿಸ್ತಾನ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರವಾಗಲಿದ್ದರೆ, ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್ಸ್ಟಾರ್‌ನಲ್ಲಿ ಲಭ್ಯವಿರುತ್ತದೆ.

ಭಾರತ vs ಅಫ್ಘಾನಿಸ್ತಾನ ಪ್ಲೇಯಿಂಗ್‌-11

ಭಾರತ ತಂಡ: ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್(ವಿ.ಕೀ), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.

ಅಫ್ಘಾನಿಸ್ತಾನ ತಂಡ: ರಹಮಾನುಲ್ಲಾ ಗುರ್ಬಾಜ್(w), ಇಬ್ರಾಹಿಂ ಝದ್ರಾನ್, ಹಜರತುಲ್ಲಾ ಝಜೈ, ಗುಲ್ಬದಿನ್ ನೈಬ್, ನಜೀಬುಲ್ಲಾ ಝದ್ರಾನ್, ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ರಶೀದ್ ಖಾನ್(ಸಿ), ನೂರ್ ಅಹ್ಮದ್, ನವೀನ್-ಉಲ್-ಹಕ್, ಫಜಲ್ಹಕ್ ಫಾರೂಕಿ.

Story first published: Thursday, June 20, 2024, 19:42 [IST]
Other articles published on Jun 20, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+