T20 World Cup 2024: ಭಾರತ ಎದುರು ಆಸ್ಟ್ರೇಲಿಯಾ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ; ಪಿಚ್ ವರದಿ, ಸಂಭಾವ್ಯ ಪ್ಲೇಯಿಂಗ್-11
ಜೂನ್ 24 ಸೋಮವಾರ, ಟಿ20 ವಿಶ್ವಕಪ್ 2024 ರಲ್ಲಿ ಇಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಸೂಪರ್-8 ರ ಕೊನೆಯ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಉಭಯ ತಂಡಗಳು ಯಾವುದೇ ಸಂದರ್ಭದಲ್ಲೂ ಗೆಲುವು ಸಾಧಿಸಲಿವೆ.
ರೋಹಿತ್ ಶರ್ಮಾ ಅವರು ಮುನ್ನೆಡೆಸುತ್ತಿರುವ ಭಾರತ ತಂಡವು ಸೆಮಿ-ಫೈನಲ್‌ಗಾಗಿ ಸೂಪರ್-8 ರಲ್ಲಿ ತನ್ನ ಸ್ಥಾನವನ್ನು ಗೆದ್ದು ಅಗ್ರಸ್ಥಾನವನ್ನು ಭದ್ರಪಡಿಸಿಕೊಳ್ಳುವ ನಿರೀಕ್ಷೆಯಲ್ಲಿದೆ. ಆಗ ಟೀಮ್ ಇಂಡಿಯಾ ಸೆಮಿಫೈನಲ್‌ನಲ್ಲಿ ಬಿ ಗುಂಪಿನ ಎರಡನೇ ಸ್ಥಾನದಲ್ಲಿರುವ ತಂಡವನ್ನು ಎದುರಿಸಲಿದೆ. ಒಂದು ವೇಳೆ ಮಳೆ ಸೆಮಿಫೈನಲ್ ಪಂದ್ಯ ಮಳೆಯಿಂದ ರದ್ದಾದರೆ ಅದರ ಸಂಪೂರ್ಣ ಲಾಭ ಭಾರತಕ್ಕೆ ಸಿಗಲಿದೆ.

ಮತ್ತೊಂದೆಡೆ ಭಾರತದ ಎದುರು ಮಿಚೆಲ್ ಮಾರ್ಷ್ ನಾಯಕತ್ವದ ಆಸ್ಟ್ರೇಲಿಯಾಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಭಾರತದ ವಿರುದ್ಧ ಆಸ್ಟ್ರೇಲಿಯಾಆ ಸೋತರೆ ಟೂರ್ನಿಯಿಂದ ಹೊರಗುಳಿಯುವ ಎಲ್ಲಾ ಸಾಧ್ಯತೆಗಳು ಹೆಚ್ಚಾಗಿವೆ. ಇತ್ತ ಅಫ್ಘಾನಿಸ್ತಾನ ತನ್ನ ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ಸೆಮಿಫೈನಲ್‌ಗೆ ಅರ್ಹತೆ ಪಡೆಯಬಹುದು.
ಭಾರತ vs ಆಸ್ಟ್ರೇಲಿಯಾ ಹೆಡ್ ಟು ಹೆಡ್
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಟಿ20 ಪಂದ್ಯಗಳ ಬಹಳ ರೋಚಕತೆಯಿಂದ ಕೂಡಿರುತ್ತವೆ.
ಇದುವರೆಗೆ ಉಭಯ ತಂಡಗಳ ನಡುವೆ 31 ಟಿ20 ಪಂದ್ಯಗಳು ನಡೆದಿವೆ. ಇದರಲ್ಲಿ ಕಾಂಗರೂ ಪಡೆ ವಿರುದ್ಧ ಭಾರತ ತಂಡ ಮೇಲುಗೈ ಸಾಧಿಸಿದೆ.
ಭಾರತ 19 ಪಂದ್ಯಗಳನ್ನು ಗೆದ್ದಿದ್ದರೆ, ಆಸ್ಟ್ರೇಲಿಯಾ 11 ಪಂದ್ಯಗಳನ್ನು ಗೆದ್ದಿದೆ. ಆದರೆ, ಒಂದು ಪಂದ್ಯವನ್ನು ರದ್ದುಗೊಳಿಸಲಾಗಿದೆ. ಇನ್ನು ಟಿ20 ವಿಶ್ವಕಪ್‌ನಲ್ಲಿಇಲ್ಲಿಯವರೆಗೆ ಉಭಯ ತಂಡಗಳ ನಡುವೆ 5 ಪಂದ್ಯಗಳು ನಡೆದಿದ್ದು, ಇದರಲ್ಲಿ ಭಾರತ 3 ಮತ್ತು ಆಸ್ಟ್ರೇಲಿಯಾ 2 ಪಂದ್ಯಗಳನ್ನು ಗೆದ್ದಿದೆ.
ಡ್ಯಾರೆನ್ ಸಾಮಿ ಸ್ಟೇಡಿಯಂನ ಪಿಚ್ ವರದಿ
ವೆಸ್ಟ್ ಇಂಡೀಸ್‌ನ ಡ್ಯಾರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನ ಪಿಚ್ ಬ್ಯಾಟಿಂಗ್‌ಗೆ ಉತ್ತಮವಾಗಿದೆ. ಬ್ಯಾಟರ್‌ಗಳಿಗೆ ಈ ಟೂರ್ನಿಯ ಅತ್ಯುತ್ತಮ ಪಿಚ್ ಆಗಿದೆ. ಈ ಸ್ಟೇಡಿಯಂನಲ್ಲಿ ಇದುವರೆಗೆ ಆಡಿದ 4 ಪಂದ್ಯಗಳ 8 ಇನ್ನಿಂಗ್ಸ್‌ಗಳಲ್ಲಿ 6 ಬಾರಿ 180ಕ್ಕೂ ಹೆಚ್ಚು ಸ್ಕೋರ್ ಮಾಡಲಾಗಿದೆ.
2024ರ ಟಿ20 ವಿಶ್ವಕಪ್‌ನ 218 ರನ್‌ಗಳ ಗರಿಷ್ಠ ಸ್ಕೋರ್ ಕೂಡ ಇದೇ ಮೈದಾನದಲ್ಲಿ ಬಂದಿತ್ತು. ಬ್ಯಾಟಿಂಗ್‌ಗೆ ಉತ್ತಮವಾದ ಪಿಚ್‌ನಿಂದಾಗಿ ಹೆಚ್ಚಿನ ಸ್ಕೋರಿಂಗ್ ಪಂದ್ಯವನ್ನು ಇಲ್ಲಿ ಕಾಣಬಹುದು. ಇಂದು ಕೂಡ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯದಲ್ಲಿ ರನ್ ಹೊಳೆ ಹರಿಯವ ಸಾಧ್ಯತೆವಿದೆ.
ಭಾರತ vs ಆಸ್ಟ್ರೇಲಿಯಾ ಪ್ಲೇಯಿಂಗ್-11
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಅಕ್ಷರ್ ಪಟೇಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಅರ್ಷ್ದೀಪ್ ಸಿಂಗ್, ಕುಲದೀಪ್ ಯಾದವ್.
ಆಸ್ಟ್ರೇಲಿಯಾ ತಂಡ: ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications