Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs BAN: ಭಾರತ vs ಬಾಂಗ್ಲಾದೇಶ ಹೈವೋಲ್ಟೇಜ್‌ ಪಂದ್ಯದ ಟಾಸ್‌ ವರದಿ, ಪ್ಲೇಯಿಂಗ್‌-11

ಜೂನ್‌ 22 ಶನಿವಾರ, 2024ರ ಟಿ20 ವಿಶ್ವಕಪ್‌ನ ಸೂಪರ್‌-8ರ ಹೈವೋಲ್ಟೇಜ್‌ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮಖಿಯಾಗಿವೆ.ಆಂಟಿಗುವಾದ ಸರ್‌ ವಿವಿಯನ್‌ ರಿಚರ್ಡ್ಸ್‌ ಕ್ರೀಡಾಂಗಣದಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯ ಆರಂಭವಾಗಿದೆ.

ಇಂದಿನ ಪಂದ್ಯದಲ್ಲ ಮೊದಲು ಟಾಸ್‌ ಗೆದ್ದ ಬಾಂಗ್ಲಾದೇಶ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂಟೊ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ರೋಹಿತ್‌ ಶರ್ಮಾ ಅವರು ಮನ್ನೆಡೆಸುತ್ತಿರುವ ಭಾರತ ಮೊದಲು ಬ್ಯಾಟಿಂಗ್‌ ಮಾಡಲಿದೆ.

T20 World Cup 2024 India vs Bangladesh match Toss Report

ಈ ಪಂದ್ಯವನ್ನು ಗೆಲ್ಲುವುದು ಭಾರತಕ್ಕೆ ಅತ್ಯಂತ ಮಹತ್ವದ್ದಾಗಿದೆ. ಈ ಪಂದ್ಯದ ಗೆಲುವಿನೊಂದಿಗೆ ಭಾರತದ ಸೆಮಿಫೈನಲ್ ಟಿಕೆಟ್ ಖಚಿತವಾಗಲಿದೆ. ಟೂರ್ನಿಯಲ್ಲಿ ಇದುವರೆಗೆ ಸೋಲನುಭವಿಸದ ಟೀಮ್‌ ಇಂಡಿಯಾ ಇಂದಿನ ಪಂದ್ಯಕ್ಕೆ ನೆಚ್ಚಿನ ತಂಡವಾಗಿದೆ.

ಆದಾಗ್ಯೂ, ಬಾಂಗ್ಲಾದೇಶವನ್ನು ಲಘುವಾಗಿ ತೆಗೆದುಕೊಳ್ಳಲುವಂತಿಲ್ಲ. ಎರಡು ತಂಡಗಳ ನಡುವಿನ ದಾಖಲೆಗಳನ್ನ ನೋಡುವುದಾದರೆ, ಎರಡೂ ತಂಡಗಳು 13 ಟಿ20 ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗಿವೆ. ಈ ಅವಧಿಯಲ್ಲಿ ಟೀಮ್‌ ಇಂಡಿಯಾ 12 ಬಾರಿ ಗೆದ್ದಿದೆ.

ಬಾಂಗ್ಲಾದೇಶ ಒಮ್ಮೆ ಮಾತ್ರ ಪಂದ್ಯವನ್ನು ಗೆದ್ದಿದೆ. ಇಂದಿನ ಪಂದ್ಯದಲ್ಲಿ ಭಾರತದ ಬಲಿಷ್ಠ ಬ್ಯಾಟಿಂಗ್ ಪಡೆ ಬಾಂಗ್ಲಾದೇಶದ ವೇಗದ ಬೌಲಿಂಗ್ ದಾಳಿಯನ್ನು ಎದುರಿಸಲಿದೆ. ಇಂದು ಉಭಯ ತಂಡಗಳ ನಡುವೆ ಕಠಿಣ ಪಂದ್ಯ ನಡೆಯುವ ನಿರೀಕ್ಷೆ ಇದೆ.

ಭಾರತ vs ಬಾಂಗ್ಲಾದೇಶ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ

ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ 2024ರ ಟಿ20 ವಿಶ್ವಕಪ್‌ನ ಸಂಪೂರ್ಣ ಪ್ರಸಾರ ಹಕ್ಕುಗಳನ್ನು ಹೊಂದಿದೆ. ಹೀಗಾಗಿ ಭಾರತ ಮತ್ತು ಬಾಂಗ್ಲಾದೇಶ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರವಾಗಲಿದ್ದರೆ, ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್ಸ್ಟಾರ್‌ನಲ್ಲಿ ಲಭ್ಯವಿರುತ್ತದೆ.

ಭಾರತ vs ಬಾಂಗ್ಲಾದೇಶ ಪ್ಲೇಯಿಂಗ್‌-11

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್‌ ಕೀಪರ್‌), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಅರ್ಶ್ದೀಪ್ ಸಿಂಗ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ.

ಬಾಂಗ್ಲಾದೇಶ ತಂಡ: ತಂಝಿದ್ ಹಸನ್, ಲಿಟ್ಟನ್ ದಾಸ್ (ವಿಕೆಟ್‌ ಕೀಪರ್‌), ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ತೌಹಿದ್ ಹೃದಯೋಯ್, ಶಾಕಿಬ್ ಅಲ್ ಹಸನ್, ಮಹ್ಮುದುಲ್ಲಾ, ಜಾಕರ್ ಅಲಿ, ರಿಶಾದ್ ಹೊಸೈನ್, ಮಹೇದಿ ಹಸನ್, ತಂಝಿಮ್ ಹಸನ್ ಸಾಕಿಬ್, ಮುಸ್ತಫಿಜುರ್ ರೆಹಮಾನ್.

Story first published: Saturday, June 22, 2024, 19:47 [IST]
Other articles published on Jun 22, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+