For Quick Alerts
ALLOW NOTIFICATIONS  
For Daily Alerts
 

T20 World Cup 2024: ಇಂಗ್ಲೆಂಡ್‌ ವಿರುದ್ಧ ಸೇಡಿನ ಸಮರಕ್ಕೆ ಸಜ್ಜಾದ ಭಾರತ; ಪಿಚ್ ವರದಿ, ಹವಾಮಾನ, ಸಂಭಾವ್ಯ ಪ್ಲೆಯಿಂಗ್‌-11

ಜೂನ್‌ 27 ಗುರುವಾರ, ಭಾರತ ಮತ್ತು ಇಂಗ್ಲೆಂಡ್ ನಡುವಿನ ಐಸಿಸಿ ಟಿ20 ವಿಶ್ವಕಪ್ 2024ರ ಎರಡನೇ ಸೆಮಿಫೈನಲ್ ಪಂದ್ಯ ಗಯಾನದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ನಡೆಯಲಿದೆ.

ಈ ಹೈವೋಲ್ಟೇಜ್ ಪಂದ್ಯದ ನೇರ ಪ್ರಸಾರವನ್ನು ಸಂಜೆ 6 ಗಂಟೆಯಿಂದ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು ಮತ್ತು ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ನೋಡಬಹುದಾಗಿದೆ.

T20 World Cup 2024 India vs England Match Pitch Report Weather Possible Playing-11

ಟಿ20 ವಿಶ್ವಕಪ್ ಟೂರ್ನಿಯ ಗುಂಪು ಮತ್ತು ಸೂಪರ್‌-8ರಲ್ಲಿ ರೋಹಿತ್‌ ಶರ್ಮಾ ಮುನ್ನೆಡೆಸುತ್ತಿರುವ ಭಾರತ ತನ್ನ ಎಲ್ಲಾ ಪಂದ್ಯಗಳನ್ನು ಗೆದ್ದು ಸೆಮಿಫೈನಲ್‌ಗೆ ಬಂದಿದೆ. ಆದರೆ ಜೋಸ್‌ ಬಟ್ಲರ್‌ ನಾಯಕತ್ವದ ಇಂಗ್ಲೆಂಡ್ ಗುಂಪು ಹಂತ ಮತ್ತು ಸೂಪರ್ -8 ಹಂತದಿಂದ ಹೊರಬಂದ ನಂತರ ಸೆಮಿಫೈನಲ್‌ಗೆ ಪ್ರವೇಶಿಸಿದೆ.

ಸೋಲಿನ ಸೇಡಿಗೆ ಸಜ್ಜಾದ ಟೀಮ್‌ ಇಂಡಿಯಾ

ಟಿ20 ವಿಶ್ವಕಪ್ 2022ರಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಸೆಮಿಫೈನಲ್‌ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರೋಹಿತ್ ಶರ್ಮಾ ಪಡೆ 168 ರನ್ ಗಳಿಸಿತು.

ಈ ಗುರಿ ಬೆನ್ನಟ್ಟಿದ್ದ ಇಂಗ್ಲೆಂಡ್ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ ಭಾರತದ ಟ್ರೋಫೀ ಗೆಲ್ಲುವ ಕನಸಿಗೆ ಅಡ್ಡಿಯಾಗಿತ್ತು. ಇದೀಗ ಇಂಗ್ಲೆಂಡ್‌ನ ಸೋಲಿಗೆ ಸೇಡು ತೀರಿಸಿಕೊಳ್ಳಲು ಟೀಮ್‌ ಇಂಡಿಯಾ ಸಜ್ಜಾಗಿದೆ.

ಇದಕ್ಕೂ ಮುನ್ನ ಭಾರತ ಮತ್ತು ಇಂಗ್ಲೆಂಡ್ ಹೆಡ್‌-ಟು ಹೆಡ್‌, ಪಿಚ್, ಹವಾಮಾನ ವರದಿ ಮತ್ತು ಪ್ಲೇಯಿಂಗ್‌-11 ಬಗ್ಗೆ ಇಲ್ಲಿದೆ ಮಾಹಿತಿ.

ಭಾರತ vs ಇಂಗ್ಲೆಂಡ್‌ ಹೆಡ್‌-ಟು-ಹೆಡ್‌

ಭಾರತ ಮತ್ತು ಇಂಗ್ಲೆಂಡ್ ನಡುವೆ ಇಲ್ಲಿಯವರೆಗೆ ಒಟ್ಟು 23 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿವೆ. ಟೀಮ್‌ ಇಂಡಿಯಾ 12 ಪಂದ್ಯಗಳನ್ನು ಗೆದ್ದಿದ್ದರೆ, ಇಂಗ್ಲೆಂಡ್ 11 ಪಂದ್ಯಗಳಲ್ಲಿ ಭಾರತವನ್ನು ಸೋಲಿಸಿದೆ.

ಟಿ20 ವಿಶ್ವಕಪ್ ಇತಿಹಾಸದಲ್ಲಿ ಈ ಎರಡು ತಂಡಗಳ ನಡುವೆ ಒಟ್ಟು 4 ಟಿ20 ಪಂದ್ಯಗಳು ನಡೆದಿವೆ.ಉಭಯ ತಂಡಗಳು ತಲಾ 2 ಪಂದ್ಯಗಳನ್ನು ಗೆದ್ದಿದ್ದಾರೆ. ಈ ಅಂಕಿ-ಅಂಶಗಳ ಪ್ರಕಾರ ಎರಡೂ ತಂಡಗಳು ಬಹುತೇಕ ಸಮಾನ ಮೇಲುಗೈ ಹೊಂದಿವೆ.

ಇಂತಹ ಪರಿಸ್ಥಿತಿಯಲ್ಲಿ ಭಾರತವು ಸೆಮಿಫೈನಲ್‌ನಲ್ಲಿ ಗೆಲುವು ದಾಖಲಿಸುವ ಮೂಲಕ ತನ್ನ ಅಂಕಿ-ಅಂಶಗಳನ್ನು ಮತ್ತಷ್ಟು ಸುಧಾರಿಸುವ ನಿರೀಕ್ಷೆಯಲ್ಲಿದೆ.

ಪಿಚ್ ವರದಿ

ವೆಸ್ಟ್‌ ಇಂಡೀಸ್‌ನ ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂ ಪಿಚ್‌ನಲ್ಲಿ ವೇಗದ ಬೌಲರ್‌ಗಳಿಗೆ ಹೊಸ ಚೆಂಡಿನಲ್ಲಿ ಪರಿಣಾಮಕಾರಿಯಾಗಿ ಬೌಲಿಂಗ್‌ ಮಾಡಲು ಅನುಕೂಲಕರವಾಗಿದೆ.
ಇದಾದ ಬಳಿಕ ಚೆಂಡು ಹಳೆಯದಾದರೆ ಪಿಚ್ ನಿಧಾನವಾಗುತ್ತದೆ. ಆಗ ಸ್ಪಿನ್ನರ್‌ಗಳು ವಿಕೆಟ್‌ಗಳನ್ನು ಕಬಳಿಸುವ ಸನ್ನಿವೇಶ ಕೂಡವಿದೆ.

ಈ ಪಿಚ್‌ನಲ್ಲಿ ಬ್ಯಾಟರ್‌ಗಳು ರನ್ ಗಳಿಸಲು ಸಾಕಷ್ಟು ಪ್ರಯಾಸಪಟ್ಟಿದ್ದಾರೆ. ಆದರೆ ಒಮ್ಮೆ ಬ್ಯಾಟರ್‌ಗಳು ಪಿಚ್‌ ಹೊಂದಿಕೊಂಡರೆ ದೊಡ್ಡ ಸ್ಕೋರ್ ಮಾಡಬಹುದು.

ಇಲ್ಲಿ ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 125 ರಿಂದ 130 ರ ನಡುವೆ ಇದೆ. ಈ ಪಿಚ್‌ನ ಗರಿಷ್ಠ ಸ್ಕೋರ್ 191 ಮತ್ತು ಕಡಿಮೆ ಸ್ಕೋರ್ 39. ಈ ಪಿಚ್‌ನಲ್ಲಿ 18 ಪಂದ್ಯಗಳು ನಡೆದಿದ್ದು, ಮೊದಲ ಇನಿಂಗ್ಸ್‌ನಲ್ಲಿ ಆಡುತ್ತಿರುವ ತಂಡ 6 ರಲ್ಲಿ ಗೆದ್ದಿದ್ದರೆ, ಎರಡನೇ ಇನ್ನಿಂಗ್ಸ್ ಆಡುತ್ತಿರುವ ತಂಡ 9 ಪಂದ್ಯಗಳನ್ನು ಗೆದ್ದಿದೆ.

ಹವಾಮಾನ ವರದಿ

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಪಂದ್ಯದ ಮೇಲೆ ಮಳೆಯ ಛಾಯೆ ಆವರಿಸಿದೆ. ಹವಾಮಾನ ಇಲಾಖೆಯ ವರದಿಗಳ ಪ್ರಕಾರ ಈ ಪಂದ್ಯದಲ್ಲಿ ಶೇ.70ರಷ್ಟು ಮಳೆಯಾಗುವ ಸಾಧ್ಯತೆ ಇದೆ.

ಇದರೊಂದಿಗೆ ಪಂದ್ಯದ ವೇಳೆ ಬಲವಾದ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಈ ಪಂದ್ಯದ ವೇಳೆ ಗಯಾನಾದಲ್ಲಿ ತಾಪಮಾನ ಸುಮಾರು 31 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಅಕ್ಯುವೆದರ್ ಪ್ರಕಾರ, ಗಯಾನಾದಲ್ಲಿ ಬೆಳಿಗ್ಗೆ 10 ಗಂಟೆಗೆ 66%, 11 ಗಂಟೆಗೆ 75% ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಮಧ್ಯಾಹ್ನ 12 ಗಂಟೆಗೆ ಶೇ.49, ಮಧ್ಯಾಹ್ನ 1 ಗಂಟೆಗೆ ಶೇ.34 ಹಾಗೂ ಮಧ್ಯಾಹ್ನ 2 ಗಂಟೆಗೆ ಶೇ.51ರಷ್ಟು ಮಳೆಯಾಗುವ ಸಾಧ್ಯತೆ ಇದ್ದು, ಇದರಿಂದ ಪಂದ್ಯ ರದ್ದಾಗುವ ಸಂಭವಿದೆ.

ಒಂದು ವೇಳೆ ಮಳೆಯಿಂದಾಗಿ ಪಂದ್ಯ ರದ್ದಾದರೆ ಸೂಪರ್-8 ಹಂತದಲ್ಲಿ ಅಗ್ರಸ್ಥಾನದಲ್ಲಿರುವ ಭಾರತ ತಂಡ ಫೈನಲ್ ಪ್ರವೇಶಿಸಲಿದೆ. ಏಕೆಂದರೆ ಸೆಮಿಫೈನಲ್-2 ಕ್ಕೆ ಯಾವುದೇ ಮೀಸಲು ದಿನವನ್ನು ಇರಿಸಲಾಗಿಲ್ಲ.

ಭಾರತ vs ಇಂಗ್ಲೆಂಡ್‌ ಸಂಭ್ಯಾವ ಪ್ಲೇಯಿಂಗ್‌-11

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ ಮತ್ತು ಅರ್ಷದೀಪ್ ಸಿಂಗ್.

ಇಂಗ್ಲೆಂಡ್ ತಂಡ: ಫಿಲ್ ಸಾಲ್ಟ್, ಜೋಸ್ ಬಟ್ಲರ್ (ನಾಯಕ ಮತ್ತು ವಿಕೆಟ್ ಕೀಪರ್), ಜಾನಿ ಬೈರ್‌ಸ್ಟೋವ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್, ಕ್ರಿಸ್ ಜೋರ್ಡಾನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ರೀಸ್ ಟೋಪ್ಲಿ.

Story first published: Thursday, June 27, 2024, 7:07 [IST]
Other articles published on Jun 27, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+