Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

T20 World Cup 2024: ಭಾರತ vs ಇಂಗ್ಲೆಂಡ್ ಸೆಮಿಫೈನಲ್ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ

ಗುರುವಾರ, ಜೂನ್ 27ರಂದು ಗಯಾನಾದ ಪ್ರಾವಿಡೆನ್ಸ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಐಸಿಸಿ ಟಿ20 ವಿಶ್ವಕಪ್‌ನ ರೋಚಕ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿವೆ.

ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

T20 World Cup 2024 India vs England Semifinal Match Toss Report And Playing 11 Details

ಗಯಾನಾದಲ್ಲಿ ಸುರಿದ ಮಳೆಯಿಂದಾಗಿ ಟಾಸ್ ವಿಳಂಬವಾಗಿದ್ದು, ಹೀಗಾಗಿ ಪಂದ್ಯವು ಒಂದು ಗಂಟೆ ತಡವಾಗಿ ಆರಂಭವಾಗಿದೆ. ಆದರೂ, ಪಂದ್ಯಕ್ಕೆ ಮಳೆ ಅಡ್ಡಿ ಮುಂದುವರೆಯುವ ಸಾಧ್ಯತೆ ಇದೆ.

ಒಂದು ವೇಳೆ ಮಳೆಯು ಪಂದ್ಯಕ್ಕೆ ಅಡ್ಡಿಪಡಿಸಿದರೆ, ಈ ಸೆಮಿಫೈನಲ್ ಪಂದ್ಯಕ್ಕೆ ಒಟ್ಟು 250 ನಿಮಿಷಗಳ ಹೆಚ್ಚುವರಿ ಸಮಯವನ್ನು ನಿಗದಿಪಡಿಸಲಾಗಿದೆ. ಈ ಸೆಮಿಫೈನಲ್ ಪಂದ್ಯಕ್ಕೆ ಯಾವುದೇ ಮೀಸಲು ದಿನವಿಲ್ಲ. ಒಂದು ವೇಳೆ ಪಂದ್ಯವು ರದ್ದುಗೊಂಡರೆ, ಸೂಪರ್ 8ರ ಹಂತದಲ್ಲಿ ಭಾರತ ಉತ್ತಮ ಫಲಿತಾಂಶದ ಆಧಾರದ ಮೇಲೆ ಫೈನಲ್‌ಗೆ ಪ್ರವೇಶಿಸಲಿದೆ.

ಭಾರತ vs ಇಂಗ್ಲೆಂಡ್ ಸೆಮಿಫೈನಲ್ ಪಂದ್ಯದ ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ

ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ 2024ರ ಟಿ20 ವಿಶ್ವಕಪ್‌ನ ಸಂಪೂರ್ಣ ಪ್ರಸಾರ ಹಕ್ಕುಗಳನ್ನು ಹೊಂದಿದೆ. ಹೀಗಾಗಿ ಭಾರತ vs ಇಂಗ್ಲೆಂಡ್ ನಡುವಿನ ಸೆಮಿಫೈನಲ್ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರವಾಗಲಿದ್ದರೆ, ಇಡೀ ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಲಭ್ಯವಿರುತ್ತದೆ.

ಟಿ20 ವಿಶ್ವಕಪ್‌ 2024 ಸೆಮಿಫೈನಲ್: ಭಾರತ vs ಇಂಗ್ಲೆಂಡ್ ಆಡುವ 11ರ ಬಳಗ

ಇಂಗ್ಲೆಂಡ್: ಫಿಲಿಪ್ ಸಾಲ್ಟ್, ಜೋಸ್ ಬಟ್ಲರ್ (ನಾಯಕ/ವಿಕೆಟ್ ಕೀಪರ್), ಜಾನಿ ಬೈರ್‌ಸ್ಟೋವ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್, ಕ್ರಿಸ್ ಜೋರ್ಡಾನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ರೀಸ್ ಟೋಪ್ಲೆ.

ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಶ್‌ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.

Story first published: Thursday, June 27, 2024, 21:01 [IST]
Other articles published on Jun 27, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+