T20 World Cup 2024: ಭಾರತ vs ಐರ್ಲೆಂಡ್ ಪಂದ್ಯದ ವಿವರ; ಹೆಡ್-ಟು-ಹೆಡ್ ದಾಖಲೆ, ಸಂಭಾವ್ಯ ಆಡುವ 11ರ ಬಳಗ
ಬುಧವಾರ, ಜೂನ್ 5ರಂದು ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಟಿ20 ವಿಶ್ವಕಪ್ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಭಾರತ ತನ್ನ ಅಭಿಯಾನವನ್ನು ಆರಂಭಿಸಲಿದೆ.
ಬಾಂಗ್ಲಾದೇಶದ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ನಂತರ, ಮುಖ್ಯ ಪಂದ್ಯಾವಳಿಯಲ್ಲಿ ಟೀಮ್ ಇಂಡಿಯಾ ಸೂಪರ್ 8ರ ಹಂತ ತಲುಪಲು ಪ್ರತಿ ಗೆಲುವು ಮುಖ್ಯವಾಗಿದೆ.

ಇನ್ನು ಐರ್ಲೆಂಡ್ ವಿರುದ್ಧ ಆಡಿದಾಗಲೆಲ್ಲಾ ಸೋಲನ್ನು ಎದುರಿಸದ ಭಾರತ ಕ್ರಿಕೆಟ್ ತಂಡಕ್ಕೆ ಇದು 2024ರ ಟಿ20 ವಿಶ್ವಕಪ್ ಪಂದ್ಯದಲ್ಲಿ ಸುಲಭವಾಗಿ ಗೆಲ್ಲುವ ನೆಚ್ಚಿನ ತಂಡವಾಗಿದೆ.
ಟಿ20 ಕ್ರಿಕೆಟ್‌ನಲ್ಲಿ ಭಾರತ vs ಐರ್ಲೆಂಡ್ ದಾಖಲೆಗಳು
ಭಾರತ ಮತ್ತು ಐರ್ಲೆಂಡ್ ತಂಡಗಳು ಈವರಗೆ ಏಳು ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಐರ್ಲೆಂಡ್ ವಿರುದ್ಧ ಭಾರತವು ಶೇಕಡಾ 100 ಗೆಲುವಿನ ದಾಖಲೆಯೊಂದಿಗೆ ಏಕಪಕ್ಷೀಯವಾಗಿ ಪ್ರಾಬಲ್ಯ ಸಾಧಿಸಿದೆ. "ಮೆನ್ ಇನ್ ಬ್ಲೂ' ವಿರುದ್ಧ ಐರ್ಲೆಂಡ್ ಇನ್ನೂ ಗೆಲುವು ದಾಖಲಿಸಿಲ್ಲ.
ಟಿ20 ವಿಶ್ವಕಪ್‌ನಲ್ಲಿ ಭಾರತ vs ಐರ್ಲೆಂಡ್ ಮುಖಾಮುಖಿ
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಉಭಯ ತಂಡಗಳು ಕೇವಲ ಒಂದು ಪಂದ್ಯವನ್ನಾಡಿವೆ. ಅಚ್ಚರಿಯಿಲ್ಲದ ರೀತಿಯಲ್ಲಿ ಈ ಪಂದ್ಯವನ್ನು ಭಾರತ ತಂಡ ಗೆದ್ದುಕೊಂಡಿತು.

ಏಕದಿನ ಕ್ರಿಕೆಟ್‌ನಲ್ಲಿ ಭಾರತ vs ಐರ್ಲೆಂಡ್ ಮುಖಾಮುಖಿ
ಮತ್ತೊಂದೆಡೆ, ಭಾರತ ಮತ್ತು ಐರ್ಲೆಂಡ್ ತಂಡಗಳು ಈವರೆಗೆ ಮೂರು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಪರಸ್ಪರರ ವಿರುದ್ಧ ಆಡಿವೆ. ಈ ಪಂದ್ಯಗಳಲ್ಲಿಯೂ ಫಲಿತಾಂಶ ಭಿನ್ನವಾಗಿಲ್ಲ. ಆಡಿದ ಮೂರೂ ಪಂದ್ಯಗಳನ್ನು ಗೆದ್ದಿರುವ ಭಾರತ ಬಲಾಢ್ಯ ತಂಡವಾಗಿದೆ.
ಭಾರತ vs ಐರ್ಲೆಂಡ್ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ
ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ 2024ರ ಟಿ20 ವಿಶ್ವಕಪ್‌ನ ಸಂಪೂರ್ಣ ಪ್ರಸಾರ ಹಕ್ಕುಗಳನ್ನು ಹೊಂದಿದೆ. ಹೀಗಾಗಿ ಭಾರತ vs ಐರ್ಲೆಂಡ್ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರವಾಗಲಿದ್ದರೆ, ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಲಭ್ಯವಿರುತ್ತದೆ.
ಟಿ20 ವಿಶ್ವಕಪ್ 2024: ಭಾರತದ ತಂಡದ ಆಡುವ 11ರ ಬಳಗ
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಅರ್ಶ್‌ದೀಪ್ ಸಿಂಗ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications