T20 World Cup 2024:ಪಾಕಿಸ್ತಾನ ಮ್ಯಾಜಿಕ್ ಬೌಲಿಂಗ್ ದಾಳಿಗೆ ಟೀಮ್ ಇಂಡಿಯಾ ಆಲೌಟ್ ; ಕುಸಿದ ಭಾರತಕ್ಕೆ ರಿಷಬ್ ಪಂತ್ ಆಸರೆ
ಜೂನ್ 9 ಭಾನುವಾರ, ಅಮೆರಿಕಾದ ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಐಸಿಸಿ ಟಿ20 ವಿಶ್ವಕಪ್‌ನ 19ನೇ ಪಂದ್ಯದಲ್ಲಿ ಪಾಕಿಸ್ತಾನ ಎದುರು ಭಾರತ ಸಾಧರಣ ಮೊತ್ತ ಕಲೆ ಹಾಕಿದೆ.
ಪಾಕಿಸ್ತಾನ ಪರ ಮ್ಯಾಜಿಕ್ ಬೌಲಿಂಗ್ ಪ್ರದರ್ಶನ ಮಾಡಿದ ನಸೀಮ್ ಶಾ ಟೀಮ್ ಇಂಡಿಯಾ ಬ್ಯಾಟರ್‌ಗಳನ್ನು ರನ್ ಹೊಡೆಯದಂತೆ ಕಟ್ಟಿ ಹಾಕಿದರು. ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದ ರಿಷಬ್ ಪಂತ್ ಕುಸಿದ ಭಾರತಕ್ಕೆ ನೆರವಾದರು.

ನಿಗದಿತ 20 ಓವರ್‌ಗಳಲ್ಲಿ ಭಾರತ 7 ವಿಕೆಟ್‌ಗಳನ್ನು ಕಳೆದುಕೊಂಡು 119 ರನ್‌ಗಳನ್ನು ಗಳಿಸಿದೆ. ಹೀಗಾಗಿ ಪಾಕಿಸ್ತಾನ ಗೆಲುವಿಗೆ 120 ರನ್‌ಗಳ ಅವಶ್ಯಕತೆ ಇದೆ.
ಟಾಸ್ ಸೋತು ಬ್ಯಾಟಿಂಗ್‌ಗಿಳಿದ ಟೀಮ್ ಇಂಡಿಯಾ ಪರ ನಾಯಕ ರೋಹತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇನ್ನಿಂಗ್ಸ್ ಆರಂಭಿಸಿದರು. ಆದರೆ ಈ ಜೋಡಿ ಉತ್ತಮ ಅಡಿಪಾಯ ಹಾಕುವಲ್ಲಿ ಎಡುವಿತು.
ವಿರಾಟ್ ಕೊಹ್ಲಿ ಕೇವಲ 4 ರನ್ ಗಳಿಸಿ ಔಟ್ ಆದರೆ, ರೋಹಿತ್ ಶರ್ಮಾ 13 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಮೂರನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದ ರಿಷಬ್ ಪಂತ್ ಮತ್ತು ಅಕ್ಸರ್ ಪಟೇಲ್ ನಿಧಾನವಾಗಿ ರನ್ ಕಲೆ ಹಾಕಿದರು.
ಉತ್ತಮವಾಗಿ ಆಡುತ್ತಿದ್ದ ಅಕ್ಸರ್ ಪಟೇಲ್ 20 ರನ್‌ಗಳಿಗೆ ವಿಕೆಟ್ ಕಳೆದುಕೊಂಡರು. ಬಳಿಕ ಬಂದ ಯಾವುದೇ ಟೀಮ್ ಇಂಡಿಯಾ ಬ್ಯಾಟರ್‌ಗಳು ಪಾಕಿಸ್ತಾನ ಬೌಲಿಂಗ್ ದಾಳಿಯನ್ನು ಸಮರ್ಥ ಎದುರಿಸುವಲ್ಲಿ ವಿಫಲವಾದರು.
ಸೂರ್ಯಕುಮಾರ್ ಯಾದವ್ (7), ಶಿವಂ ದುಬೆ(3) ಹಾರ್ದಿಕ್ ಪಾಂಡ್ಯ (7) ರವೀಂದ್ರ ಜಡೇಜಾ (0) ಮತ್ತು ಜಸ್ಪ್ರೀತ್ ಬುಮ್ರಾ ಶೂನ್ಯಕ್ಕೆ ಔಟ್ ಆದರು. ಆದರೆ ಟೀಮ್ ಇಂಡಿಯಾ ಪರ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ ರಿಷಬ್ ಪಂತ್ 31 ಎಸೆತಗಳಲ್ಲಿ 42 ರನ್ ಹೊಡೆದು ನೆರವಾದರು.
ಕೊನೆಯಲ್ಲಿ 9 ರನ್ ಗಳಿಸಿದ ಅರ್ಷದೀಪ್ ಸಿಂಗ್ ರನೌಟ್ ಆದರು. ಈ ಮೂಲಕ ಪಾಕಿಸ್ತಾನ ಎದುರು ಟೀಮ್ ಇಂಡಿಯಾ ಆಲೌಟ್ ಆಯಿತು.
ಪಾಕಿಸ್ತಾನ ಪರ ಹ್ಯಾರಿಸ್ ರೌಫ್ ಮತ್ತು ನಸೀಮ್ ಶಾ ತಲಾ 3 ವಿಕೆಟ್ ಕಬಳಿಸಿ ಸಂಭ್ರಮಿಸಿದರೆ, ಮೊಹಮ್ಮದ್ ಅಮೀರ್ 2 ಹಾಗು ಶಾಹೀನ್ ಅಫ್ರಿದಿ 1 ವಿಕೆಟ್ ಪಡೆದರು.
ಭಾರತ vs ಪಾಕಿಸ್ತಾನ ಆಡುವ 11ರ ಬಳಗ
ಭಾರತ ತಂಡ : ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್(ವಿ.ಕೀ), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.
ಪಾಕಿಸ್ತಾನ ತಂಡ : ಮೊಹಮ್ಮದ್ ರಿಜ್ವಾನ್ (ವಿ.ಕೀ), ಬಾಬರ್ ಅಜಮ್ (ನಾಯಕ), ಉಸ್ಮಾನ್ ಖಾನ್, ಫಖರ್ ಜಮಾನ್, ಶಾದಾಬ್ ಖಾನ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಮ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ನಸೀಮ್ ಶಾ, ಮೊಹಮ್ಮದ್ ಅಮೀರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications