T20 World Cup 2024: ಭಾರತ-ಪಾಕಿಸ್ತಾನ ರಣರೋಚಕ ಕಾದಾಟ; ಟಾಸ್ ವರದಿ, ಆಡುವ 11ರ ಬಳಗ
ಜೂನ್ 9 ಭಾನುವಾರ, ಬಹುನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್‌ನ ಗುಂಪು ಹಂತದ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಣಸಾಡುತ್ತಿವೆ. ಅಮೆರಿಕಾದ ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ಆರಂಭವಾಗಿದೆ.
ಈ ಮೆಗಾಫೈಟ್‌ನಲ್ಲಿ ಮೊದಲು ಟಾಸ್ ಗೆದ್ದ ಪಾಕಿಸ್ತಾನ ನಾಯಕ ಬಾಬರ್ ಅಜಮ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡದ ಬ್ಯಾಟಿಂಗ್ ಮಾಡಲಿದೆ.

ಟಿ20 ವಿಶ್ವಕಪ್ 2024ರಲ್ಲಿ ಐರ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಗೆದ್ದು ತನ್ನ ಅಭಿಯಾನ ಆರಂಭಿಸಿದರೆ, ಯುಎಸ್‌ಎ ವಿರುದ್ಧ ಪಾಕಿಸ್ತಾನ ಸೋಲು ಕಂಡಿದೆ. ಇಂದು ಉಭಯ ತಂಡಗಳ ನಡುವೆ ಗೆಲುವಿಗಾಗಿ ಪ್ರಬಲ ಪೈಪೋಟಿ ಏರ್ಪಟಿದೆ. ಈವರೆಗೆ ನಡೆದಿರುವ ಟಿ20 ವಿಶ್ವಕಪ್ ಪಂದ್ಯಗಳಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದು ಪ್ರಾಬಲ್ಯ ಸಾಧಿಸಿದೆ.
ಭಾರತ vs ಪಾಕಿಸ್ತಾನ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ
ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ 2024ರ ಟಿ20 ವಿಶ್ವಕಪ್‌ನ ಸಂಪೂರ್ಣ ಪ್ರಸಾರ ಹಕ್ಕುಗಳನ್ನು ಹೊಂದಿದೆ. ಹೀಗಾಗಿ ಭಾರತ ಮತ್ತು ಪಾಕಿಸ್ತಾನ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರವಾಗಲಿದ್ದರೆ, ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್ಸ್ಟಾರ್‌ನಲ್ಲಿ ಲಭ್ಯವಿರುತ್ತದೆ.
ಭಾರತ vs ಪಾಕಿಸ್ತಾನ ಆಡುವ 11ರ ಬಳಗ
ಭಾರತ ತಂಡ : ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್(ವಿ.ಕೀ), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್
ಪಾಕಿಸ್ತಾನ ತಂಡ : ಮೊಹಮ್ಮದ್ ರಿಜ್ವಾನ್ (ವಿ.ಕೀ), ಬಾಬರ್ ಅಜಮ್ (ನಾಯಕ), ಉಸ್ಮಾನ್ ಖಾನ್, ಫಖರ್ ಜಮಾನ್, ಶಾದಾಬ್ ಖಾನ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಮ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ನಸೀಮ್ ಶಾ, ಮೊಹಮ್ಮದ್ ಅಮೀರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications