ಶನಿವಾರ, ಜೂನ್ 29ರಂದು ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿರುವ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆಯಲಿರುವ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯ ಫೈನಲ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಪರಸ್ಪರ ಮುಖಾಮುಖಿಯಾಗುತ್ತಿವೆ.
ಐಸಿಸಿ ಟಿ20 ವಿಶ್ವಕಪ್‌ನ ಫೈನಲಿಸ್ಟ್‌ಗಳಿಬ್ಬರೂ ಮೊದಲ ಬಾರಿಗೆ ಅಜೇಯವಾಗಿರುವುದು ಈ ಫೈನಲ್ ಪಂದ್ಯವು ಐತಿಹಾಸಿಕ ಮಹತ್ವವನ್ನು ಹೊಂದಿದೆ.

ತಮ್ಮ ಸೆಮಿಫೈನಲ್ ಜಿಂಕ್ಸ್ ಅನ್ನು ಮುರಿದ ನಂತರ ದಕ್ಷಿಣ ಆಫ್ರಿಕಾ ತಮ್ಮ ಮೊದಲ ಐಸಿಸಿ ವಿಶ್ವಕಪ್ ಫೈನಲ್‌ನಲ್ಲಿ ಆಡುತ್ತಿದ್ದಾರೆ. 1992ರಿಂದ ಐಸಿಸಿ ಪಂದ್ಯಾವಳಿಗಳಲ್ಲಿ ದಕ್ಷಿಣ ಆಫ್ರಿಕಾ 7 ಸೆಮಿಫೈನಲ್‌ಗಳಲ್ಲಿ ಸೋಲು ಅನುಭವಿಸಿತ್ತು.
ಆದರೆ, ಟ್ರಿನಿಡಾಡ್‌ನ ತರೌಬಾದಲ್ಲಿರುವ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸಿದ ಬಳಿಕ ದಕ್ಷಿಣ ಆಫ್ರಿಕಾ ಮಾನಸಿಕ ಅಡಚಣೆಯಿಂದ ಮುಕ್ತರಾದರು.

ನಾಕೌಟ್ ಪಂದ್ಯಗಳಲ್ಲಿ ಹಲವು ವರ್ಷಗಳಿಂದ ಹೃದಯ ವಿದ್ರಾವಕ ಎದುರಿಸಿದ್ದ ಲೆಜೆಂಡ್ ಬೌಲರ್ ಡೇಲ್ ಸ್ಟೇಯ್ನ್ ಅವರು ಸೆಮಿಫೈನಲ್ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ದಕ್ಷಿಣ ಆಫ್ರಿಕಾ ಪ್ರಾಬಲ್ಯ ಸಾಧಿಸಿದ ನಂತರ ಅವರ 41ನೇ ಜನ್ಮದಿನದಂದು ಅತ್ಯುತ್ತಮ ಉಡುಗೊರೆಯನ್ನು ಪಡೆದರು.
ಮತ್ತೊಂದೆಡೆ ಟೀಮ್ ಇಂಡಿಯಾ ಅಮೋಘ ಫಾರ್ಮ್‌ನಲ್ಲಿರುವ ಕಾರಣ, ದಕ್ಷಿಣ ಆಫ್ರಿಕಾ ತನ್ನ ಕೆಲಸ ಇನ್ನೂ ಪೂರ್ಣಗೊಂಡಿಲ್ಲ. ಭಾರತ ತಂಡ ಈ ಪಂದ್ಯಾವಳಿಯಲ್ಲಿ ಇನ್ನೂ ಒಂದು ಪಂದ್ಯವನ್ನು ಸೋತಿಲ್ಲ ಮತ್ತು ಎಲ್ಲಾ ವಿಭಾಗದಲ್ಲಿ ಸಾಮರ್ಥ್ಯ ತೋರಿಸಿದ್ದಾರೆ.
ರೋಹಿತ್ ಶರ್ಮಾ 2024ರ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ಪರ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಆಗಿರುವುದರಿಂದ ತಂಡವನ್ನು ಮುಂಭಾಗದಿಂದ ಮುನ್ನಡೆಸಿದ್ದಾರೆ. ರೋಹಿತ್ ಶರ್ಮಾ ಆಕ್ರಮಣಕಾರಿ ಉದ್ದೇಶದಿಂದ ಬ್ಯಾಟಿಂಗ್ ಮಾಡಿದ್ದಾರೆ.
ಇದೇ ವೇಳೆ ರೋಹಿತ್ ಶರ್ಮಾ ಅವರು ಪಾಕಿಸ್ತಾನ ನಾಯಕ ಬಾಬರ್ ಅಜಂ ಅವರನ್ನು ಮೀರಿಸಿ ಟಿ20 ಪಂದ್ಯಗಳಲ್ಲಿ ಅತ್ಯಂತ ಯಶಸ್ವಿ ನಾಯಕರೆನಿಸಿದರು.
ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಗೆದ್ದ ನಂತರ, ತನ್ನ ಆಡುವ 11ರ ಬಳಗದಲ್ಲಿ ಯಾವುದೇ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ.
ಶಿವಂ ದುಬೆ ಇನ್ನೂ ಉತ್ತಮ ಸ್ಥಿತಿಯಲ್ಲಿಲ್ಲದಿದ್ದರೂ, ಭಾರತ ತಂಡದ ಮ್ಯಾನೇಜ್‌ಮೆಂಟ್ ಅವರೊಂದಿಗೆ ಮುಂದುವರಿಯುವ ಸಾಧ್ಯತೆಯಿದೆ. ಮೊಹಮ್ಮದ್ ಸಿರಾಜ್ ಫೈನಲ್‌ನಲ್ಲೂ ಬೆಂಚ್ ಕಾಯಿಸುವುದನ್ನು ಮುಂದುವರೆಸಬಹುದು. ಕುಲದೀಪ್ ಯಾದವ್, ಅಕ್ಷರ್ ಪಟೇಲ್ ಮತ್ತು ರವೀಂದ್ರ ಜಡೇಜಾ ಸ್ಪಿನ್ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಹರಿಣ ಪಡೆಯ ವೇಗದ ಬೌಲಿಂಗ್ ತ್ರಿವಳಿಗಳಾದ ಅನ್ರಿಚ್ ನಾರ್ಟ್ಜೆ, ಕಗಿಸೊ ರಬಾಡ ಮತ್ತು ಮಾರ್ಕೊ ಜಾನ್ಸೆನ್ ಪವರ್-ಪ್ಯಾಕ್ಡ್ ಭಾರತೀಯ ಬ್ಯಾಟಿಂಗ್ ವಿಭಾಗದ ವಿರುದ್ಧ ಪ್ರಮುಖ ಪಾತ್ರವನ್ನು ವಹಿಸುವ ನಿರೀಕ್ಷೆಯಿದೆ.
ತಬ್ರೈಜ್ ಶಮ್ಸಿ ನಿಯಮಿತವಾಗಿ ವಿಕೆಟ್ ಪಡೆಯುತ್ತಿದ್ದಾರೆ ಮತ್ತು ದಕ್ಷಿಣ ಆಫ್ರಿಕಾ ತಂಡ ಸ್ಪಿನ್ ವಿಭಾಗದಲ್ಲಿ ಕೇಶವ್ ಮಹಾರಾಜ್ ಅವರ ಜೊತೆಗಾರನಾಗಿ ಉಳಿಯಬಹುದು.
ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಶ್‌ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.
ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ಏಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ.