Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

T20 World Cup 2024: ಭಾರತ vs ದಕ್ಷಿಣ ಆಫ್ರಿಕಾ ರೋಚಕ ಫೈನಲ್ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ

ಶನಿವಾರ, ಜೂನ್ 29ರಂದು ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆಯುತ್ತಿರುವ 2024ರ ಐಸಿಸಿ ಟಿ20 ವಿಶ್ವಕಪ್‌ನ ಬಹು ನಿರೀಕ್ಷಿತ ಫೈನಲ್‌ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸೆಣಸಾಡುತ್ತಿವೆ.

ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಏಡೆನ್ ಮಾರ್ಕ್ರಾಮ್ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡ ಮೊದಲು ಬೌಲಿಂಗ್ ಮಾಡಲಿದೆ.

T20 World Cup 2024 India vs South Africa Final Match Toss Report And Playing 11 Details

ದಕ್ಷಿಣ ಆಫ್ರಿಕಾ ತಂಡವು ಅಫ್ಘಾನಿಸ್ತಾನ ವಿರುದ್ಧ 9 ವಿಕೆಟ್‌ಗಳ ಗೆಲುವಿನ ನಂತರ, ಮೊದಲ ಬಾರಿಗೆ ಐಸಿಸಿ ವಿಶ್ವಕಪ್ ಪಂದ್ಯಾವಳಿಯ ಫೈನಲ್ ತಲುಪಿದ್ದು, ಚೊಚ್ಚಲ ಬಾರಿಗೆ ಬೆಳ್ಳಿ ಟ್ರೋಫಿಯನ್ನು ಎತ್ತಿ ಹಿಡಿಯಲು ನಿರ್ಧರಿಸಿದೆ.

ಮತ್ತೊಂದೆಡೆ, ಭಾರತ ತಂಡವು ವಿಶ್ವಕಪ್ ಪಂದ್ಯಾವಳಿಗಳಲ್ಲಿ ಏಳನೇ ಫೈನಲ್ ಪಂದ್ಯವನ್ನು (4 ಏಕದಿನ, 3 ಟಿ20) ಆಡುತ್ತಿದೆ. 2007ರ ನಂತರ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರಲು ಕೇವಲ ಒಂದು ಗೆಲುವಿನ ಬಾಕಿ ಇದೆ.

ಸೆಮಿಫೈನಲ್‌ನಲ್ಲಿ 2007ರ ಟಿ20 ವಿಶ್ವಕಪ್ ಆವೃತ್ತಿಯ ಚಾಂಪಿಯನ್ ಭಾರತ ವಿರುದ್ಧ 68 ರನ್‌ಗಳಿಂದ ಸೋತು ಹೊರಬಿತ್ತು ಮತ್ತು ರೋಹಿತ್ ಶರ್ಮಾ ಪಡೆ ಫೈನಲ್‌ಗೆ ಹೆಜ್ಜೆ ಹಾಕಿದೆ.

ಪಂದ್ಯದ ಕೆಲವೇ ಗಂಟೆಗಳ ಮೊದಲು ಮೈದಾನದ ಸುತ್ತಮುತ್ತ ಮಳೆ ಬಂದಿಲ್ಲ ಮತ್ತು ಈ ಸಮಯದಲ್ಲಿ ಸೂರ್ಯನು ಸಹ ಪ್ರಕಾಶಮಾನವಾಗಿ ಹೊಳೆಯುತ್ತಿದ್ದು, ಆಕಾಶ ನೀಲಿಯಾಗಿದೆ. ಅಕ್ಯುವೆದರ್ ಪ್ರಕಾರ, ಭಾರತ vs ದಕ್ಷಿಣ ಆಫ್ರಿಕಾ ನಡುವಿನ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ವೇಳೆ ಮಳೆಯಾಗುವ ಸಾಧ್ಯತೆಗಳು ಶೇಕಡಾ 50ರಷ್ಟಿದೆ.

ಭಾರತ vs ದಕ್ಷಿಣ ಆಫ್ರಿಕಾ ಫೈನಲ್ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ

ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ 2024ರ ಟಿ20 ವಿಶ್ವಕಪ್‌ನ ಸಂಪೂರ್ಣ ಪ್ರಸಾರ ಹಕ್ಕುಗಳನ್ನು ಹೊಂದಿದೆ. ಹೀಗಾಗಿ ಭಾರತ vs ದಕ್ಷಿಣ ಆಫ್ರಿಕಾ ನಡುವಿನ ಫೈನಲ್ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರವಾಗಲಿದ್ದರೆ, ಇಡೀ ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಲಭ್ಯವಿರುತ್ತದೆ.

ಟಿ20 ವಿಶ್ವಕಪ್ 2024 ಫೈನಲ್: ಭಾರತ vs ದಕ್ಷಿಣ ಆಫ್ರಿಕಾ ಆಡುವ 11ರ ಬಳಗ

ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ಏಡೆನ್ ಮಾರ್ಕ್ರಾಮ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ.

ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಅರ್ಶ್‌ದೀಪ್ ಸಿಂಗ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ.

Story first published: Saturday, June 29, 2024, 19:41 [IST]
Other articles published on Jun 29, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+