ಟೀಮ್ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‌ಗೆ ತಂಡವನ್ನು ಕಟ್ಟುವ ನಿಟ್ಟಿನಲ್ಲಿ ಬಿಸಿಸಿಐ ಪ್ಲ್ಯಾನ್ ಮಾಡಿಕೊಳ್ಳುತ್ತಿದೆ. ಇನ್ನು ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬೇಕೋ ಬೇಡವೋ ಎಂಬ ಬಗ್ಗೆ ಪ್ರಶ್ನೆಗಳು ಎದ್ದಿವೆ.
ಆದರೆ, ವಿರಾಟ್ ಕೊಹ್ಲಿ ಅವರನ್ನು ಹೊರಗಿಟ್ಟು ಆಯ್ಕೆ ದಾರರು ತಂಡವನ್ನು ಕಟ್ಟುವುದು ಅಸಾಧ್ಯ ಎಂದು ಅಂಕಿ ಅಂಶಗಳು ಹೇಳುತ್ತಿವೆ. ತವರಿನಲ್ಲಿ ನಡೆಯುತ್ತಿರುವ ಅಫ್ಘಾನಿಸ್ತಾನ ವಿರುದ್ಧ ಟಿ20 ಸರಣಿಗೆ ಫೈನಲಿ ಭಾರತ ತಂಡವನ್ನು ಕಷ್ಟ ಪಟ್ಟು ಆಯ್ಕೆದಾರರು ಆಯ್ಕೆ ಮಾಡಿದ್ದಾರೆ.

ಈ ಮೂಲಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಮುಂಬರುವ ವಿಶ್ವಕಪ್‌ನಲ್ಲಿ ಆಡುವುದು ಬಹುತೇಕ ಖಚಿತ ಎಂಬುದನ್ನು ಸಾಬೀತು ಮಾಡಿದ್ದಾರೆ. ಕಳೆದ 14 ತಿಂಗಳಿನಿಂದ ಬಳಿಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ತಂಡ ಸೇರಿಕೊಂಡಿದ್ದಾರೆ. ರೋಹಿತ್ ಶರ್ಮಾ ಸಹ ಬಹುದಿನಗಳ ಬಳಿಕ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ.
ವಿರಾಟ್ ಕೊಹ್ಲಿ ಅವರನ್ನು ಬದಿಗೊತ್ತಿ ತಂಡವನ್ನು ಕಟ್ಟಲ್ಲು ಸಾಧ್ಯವಿಲ್ಲ ಎಂಬುದನ್ನು ಅವರ ಅಂಕಿ ಅಂಶಗಳು ತೋರಿಸುತ್ತವೆ. ಚೇಸಿಂಗ್ ಸ್ಟಾರ್ 107 ಟಿ20 ಪಂದ್ಯಗಳಲ್ಲಿ 137.97ರ ಸ್ಟ್ರೈಕ್ ರೇಟ್‌ನೊಂದಿಗೆ 52.74 ಸರಾಸರಿಯೊಂದಿಗೆ 4008 ರನ್ ಸಿಡಿಸಿದ್ದಾರೆ. ಈ ವೇಳೆ 1 ಶತಕ ಹಾಗೂ 37 ಅರ್ಧಶತಕಗಳು ಸೇರಿವೆ.

ಟಿ20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಅವರ ಅಂಕಿ ಅಂಶಗಳು ಬೆಸ್ಟ್. ಟಿ20 ವಿಶ್ವಕಪ್‌ನಲ್ಲಿ ವಿರಾಟ್ 2 ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿಗಳು ಲಭಿಸಿವೆ. 2014ರಲ್ಲಿ ಚೇಸಿಂಗ್ ಸ್ಟಾರ್ ಗರಿಷ್ಠ ರನ್ ಬಾರಿಸಿದ ದಾಖಲೆ ಹೊಂದಿದ್ದಾರೆ. 2016ರ ಟಿ20 ವಿಶ್ವಕಪ್‌ನಲ್ಲಿ ಕೊಹ್ಲಿ 146.77 ಸ್ಟ್ರೈಕ್ ರೇಟ್ 276 ರನ್ ಸಿಡಿಸಿದ್ದಾರೆ. ಇನ್ನು 2022ರಲ್ಲಿ ವಿರಾಟ್ ಕೊಹ್ಲಿ ಗರಿಷ್ಠ ರನ್ ಮಾಡಿದ ಸಾಧನೆ ಮಾಡಿದ್ದಾರೆ.
ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ 2022ರಲ್ಲಿ ಕೊನೆಯ ಬಾರಿಗೆ ಟೀಮ್ ಇಂಡಿಯಾ ಪರ ಆಡಿದ್ದರು. 2023ರ ಐಪಿಎಲ್‌ನಲ್ಲಿ ಆಡಿ ಗಮನ ಸೆಳೆದಿದ್ದಾರೆ. , ಭಾರತ ಮತ್ತು ಅಫ್ಘಾನಿಸ್ತಾನ ನಡುವೆ 3 ಟಿ20 ಪಂದ್ಯಗಳ ಸರಣಿ ನಡೆಯಲಿದೆ. ಈ ಸರಣಿಯ ಮೊದಲ ಪಂದ್ಯ ಜನವರಿ 11 ರಂದು ನಡೆಯಲಿದೆ.