ಟಿ20 ವಿಶ್ವಕಪ್ 2024: ಆಸ್ಟ್ರೇಲಿಯಾ ತಂಡ ಸೇರಿದ ಡೆಲ್ಲಿ ಕ್ಯಾಪಿಟಲ್ಸ್ ಹೊಡಿಬಡಿ ಬ್ಯಾಟರ್
ಇದೇ ಜೂನ್ 2ರಿಂದ ಯುಎಸ್‌ಎ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ಆರಂಭವಾಗಲಿರುವ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಗೆ ದಿನಗಣನೆ ಶುರುವಾಗಿದ್ದು, ಎಲ್ಲಾ 20 ತಂಡಗಳು ಭರ್ಜರಿ ತಯಾರಿ ನಡೆಸುತ್ತಿವೆ ಮತ್ತು ಜಗತ್ತಿನಾದ್ಯಂತದ ಕ್ರಿಕೆಟ್ ಪ್ರೇಮಿಗಳ ಕ್ರಿಕೆಟ್ ಹಬ್ಬಕ್ಕಾಗಿ ಕಾಯುತ್ತಿದ್ದಾರೆ.
ಇದೇ ವೇಳೆ ಟಿ20 ವಿಶ್ವಕಪ್‌ಗಾಗಿ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಮತ್ತು ಮ್ಯಾಟ್ ಶಾರ್ಟ್ ಅವರನ್ನು ಎರಡು ಪ್ರಯಾಣದ ಮೀಸಲು ಆಟಗಾರರಾಗಿ ಆಸ್ಟ್ರೇಲಿಯಾ ತಂಡವನ್ನು ಸೇರಲು ಸಿದ್ಧರಾಗಿದ್ದಾರೆ.
ಆಸೀಸ್ ತಂಡವು ಟಿ20 ವಿಶ್ವಕಪ್‌ಗೆ ಕೇವಲ ಒಂದು ಮೀಸಲು ಆಟಗಾರನನ್ನು ಹೊಂದಿದೆ ಎಂದು ಈ ಮೊದಲು ಆಸ್ಟ್ರೇಲಿಯಾದ ಮುಖ್ಯ ಆಯ್ಕೆಗಾರ ಜಾರ್ಜ್ ಬೈಲಿ ಹೇಳಿದ್ದಾರೆ. ಆದಾಗ್ಯೂ, ಇಬ್ಬರು ಸ್ಟಾರ್ ಆಟಗಾರರಾದ ಫ್ರೇಸರ್-ಮೆಕ್‌ಗುರ್ಕ್ ಮತ್ತು ಮ್ಯಾಟ್ ಶಾರ್ಟ್ ಅವರನ್ನು ಪಂದ್ಯಾವಳಿಗೆ ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಇಎಸ್‌ಪಿಎನ್ ಕ್ರಿಕ್‌ಇನ್ಫೋ ವರದಿ ಹೇಳಿದೆ.

ಜೇಕ್ ಫ್ರೇಸರ್-ಮೆಕ್‌ಗುರ್ಕ್ ಅವರು ಐಪಿಎಲ್ 2024ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆರಂಭಿಕನಾಗಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಅವರು ಆಡಿದ 9 ಪಂದ್ಯಗಳಲ್ಲಿ 234.04ರ ಸ್ಟ್ರೈಕ್ ರೇಟ್‌ನಲ್ಲಿ 330 ರನ್ ಬಾರಿಸಿದರು. ಇದು ಟಿ20 ವಿಶ್ವಕಪ್‌ನ ಆಸ್ಟ್ರೇಲಿಯಾ ತಂಡದ ಮೀಸಲು ಆಟಗಾರನಾಗಿ ಆಯ್ಕೆ ಮಾಡಲು ಪ್ರೇರೇಪಿಸಿದೆ.
ಇನ್ನು ಆಸ್ಟ್ರೇಲಿಯಾ ತಂಡ ಮೂರನೇ ಸ್ಪಿನ್ನರ್‌ನನ್ನು ತಮ್ಮ ಪ್ರಯಾಣದ ಮೀಸಲು ಆಟಗಾರ ಎಂದು ಸೇರಿಸದಿರಲು ನಿರ್ಧರಿಸಿದೆ. ಕಳೆದ ವರ್ಷ ಮುಕ್ತಾಯಗೊಂಡ 2023ರ ವಿಶ್ವಕಪ್ ಪಂದ್ಯವಳಿಗೆ ತಮ್ಮ ಪ್ರಯಾಣದ ಮೀಸಲು ಆಟಗಾರ ಎಂದು ಆಯ್ಕೆಯಾಗಿದ್ದ ಸ್ಪಿನ್ನರ್ ತನ್ವೀರ್ ಸಂಘ ಅವರನ್ನು 2024ರ ಟಿ20 ವಿಶ್ವಕಪ್‌ನಿಂದ ಹೊರಗಿಡಲಾಗಿದೆ.
ಮೇ ತಿಂಗಳಲ್ಲಿ ಆಸ್ಟ್ರೇಲಿಯಾ ಮುಂಬರುವ ಟಿ20 ವಿಶ್ವಕಪ್‌ಗೆ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿತ್ತು. 2022ರಲ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಕೊನೆಯ ಟಿ20 ವಿಶ್ವಕಪ್ ನಂತರ, ಟಿ20 ಪಂದ್ಯ ಆಡದಿದ್ದರೂ ಎಡಗೈ ಸ್ಪಿನ್ನರ್ ಆಶ್ಟನ್ ಅಗರ್ ಅವರನ್ನು ಆಯ್ಕೆ ಮಾಡಿದ್ದಾರೆ.
ಸದ್ಯ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ಕೆಲವು ಕಳಪೆ ಫಾರ್ಮ್‌ನ ಹೊರತಾಗಿಯೂ ಆಲ್‌ರೌಂಡರ್‌ಗಳಾದ ಮಾರ್ಕಸ್ ಸ್ಟೊಯಿನಿಸ್ ಮತ್ತು ಕ್ಯಾಮೆರಾನ್ ಗ್ರೀನ್ ಕೂಡ ಆಸ್ಟ್ರೇಲಿಯಾ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದರು. ಆಲ್‌ರೌಂಡರ್ ಮಿಚೆಲ್ ಮಾರ್ಷ್ ತಂಡದ ನಾಯಕತ್ವ ವಹಿಸಿದ್ದಾರೆ.

ಇದೇ ವೇಳೆ, ಅನುಭವಿ ಬ್ಯಾಟರ್ ಸ್ಟೀವನ್ ಸ್ಮಿತ್, ಯುವ ಬ್ಯಾಟಿಂಗ್ ಸೆನ್ಸೇಷನ್ ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅನುಭವಿ ಸೀಮರ್ ಜೇಸನ್ ಬೆಹ್ರೆನ್‌ಡಾರ್ಫ್ ಮತ್ತು ಆಲ್‌ರೌಂಡರ್ ಮ್ಯಾಟ್ ಶಾರ್ಟ್ ಎಲ್ಲರೂ ಮುಖ್ಯ ತಂಡದಿಂದ ತಪ್ಪಿಸಿಕೊಂಡಿದ್ದಾರೆ.
ಬಿ ಗುಂಪಿನ ಇಂಗ್ಲೆಂಡ್, ನಮೀಬಿಯಾ ಮತ್ತು ಸ್ಕಾಟ್ಲೆಂಡ್ ವಿರುದ್ಧ ಪಂದ್ಯಗಳಿಗೆ ಮೊದಲು ಆಸ್ಟ್ರೇಲಿಯಾ ಜೂನ್ 5 ರಂದು ಬಾರ್ಬಡೋಸ್‌ನಲ್ಲಿ ಓಮನ್ ವಿರುದ್ಧ ತನ್ನ ಟಿ20 ವಿಶ್ವಕಪ್ ಅಭಿಯಾನ ಪ್ರಾರಂಭಿಸುತ್ತದೆ.
ಟಿ20 ವಿಶ್ವಕಪ್‌ಗೆ ಆಸ್ಟ್ರೇಲಿಯಾ ತಂಡ
ಮಿಚೆಲ್ ಮಾರ್ಷ್ (ನಾಯಕ), ಪ್ಯಾಟ್ ಕಮ್ಮಿನ್ಸ್, ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಗ್ಲೆನ್ ಮ್ಯಾಕ್ಸ್‌ವೆಲ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಸ್, ಆಶ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಆಡಮ್ ಝಂಪಾ.
ಮೀಸಲು ಆಟಗಾರರು: ಜೇಕ್ ಫ್ರೇಸರ್-ಮೆಕ್‌ಗುರ್ಕ್, ಮ್ಯಾಟ್ ಶಾರ್ಟ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications