Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

T20 World Cup 2024: ಬಲಿಷ್ಠ ದಕ್ಷಿಣ ಆಫ್ರಿಕಾಕ್ಕೆ ನೆದರ್ಲ್ಯಾಂಡ್ಸ್ ಸವಾಲು; ಪಂದ್ಯದ ಟಾಸ್‌ ವರದಿ, ಆಡುವ 11ರ ಬಳಗ

ಜೂನ್‌ 2 ಭಾನುವಾರ, ಐಸಿಸಿ 2024ರ ಟಿ20 ವಿಶ್ವಕಪ್‌ನ ಲೀಗ್‌ ಹಂತದ 16ನೇ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿವೆ. ಅಮೆರಿಕಾದ ನ್ಯೂಯರ್ಕ್‌ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಪಂದ್ಯ ಆರಂಭವಾಗಿದೆ.

ಮೊದಲು ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಅವರು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಸ್ಕಾಟ್ ಎಡ್ವರ್ಡ್ಸ್ ಮುನ್ನೆಡೆಸುತ್ತಿರುವ ನೆದರ್ಲ್ಯಾಂಡ್ಸ್ ತಂಡ ಬ್ಯಾಟಿಂಗ್‌ ಮಾಡಲಿದೆ.

T20 World Cup 2024 Netherlands vs South Africa Match Toss Report And Playing 11 Details

ನೆದರ್ಲ್ಯಾಂಡ್ಸ್ vs ದಕ್ಷಿಣ ಆಫ್ರಿಕಾ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ

ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ 2024ರ ಟಿ20 ವಿಶ್ವಕಪ್‌ನ ಸಂಪೂರ್ಣ ಪ್ರಸಾರ ಹಕ್ಕುಗಳನ್ನು ಹೊಂದಿದೆ. ಹೀಗಾಗಿ ನೆದರ್ಲ್ಯಾಂಡ್ಸ್ vs ದಕ್ಷಿಣ ಆಫ್ರಿಕಾ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರವಾಗಲಿದ್ದರೆ, ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್ಸ್ಟಾರ್‌ನಲ್ಲಿ ಲಭ್ಯವಿರುತ್ತದೆ.

ನೆದರ್ಲ್ಯಾಂಡ್ಸ್ vs ದಕ್ಷಿಣ ಆಫ್ರಿಕಾ ಆಡುವ 11ರ ಬಳಗ

ನೆದರ್ಲ್ಯಾಂಡ್ಸ್ ತಂಡ : ಮೈಕೆಲ್ ಲೆವಿಟ್, ಮ್ಯಾಕ್ಸ್ ಓಡೌಡ್, ವಿಕ್ರಮಜಿತ್ ಸಿಂಗ್, ಸೈಬ್ರಾಂಡ್ ಎಂಗೆಲ್‌ಬ್ರೆಕ್ಟ್, ಸ್ಕಾಟ್ ಎಡ್ವರ್ಡ್ಸ್(ವಿ.ಕೀ ಮತ್ತು ನಾಯಕ), ಬಾಸ್ ಡಿ ಲೀಡೆ, ತೇಜ ನಿಡಮನೂರು, ಲೋಗನ್ ವ್ಯಾನ್ ಬೀಕ್, ಟಿಮ್ ಪ್ರಿಂಗಲ್, ಪಾಲ್ ವ್ಯಾನ್ ಮೀಕೆರೆನ್, ವಿವಿಯನ್ ಕಿಂಗ್ಮಾ

ದಕ್ಷಿಣ ಆಫ್ರಿಕಾ ತಂಡ : ಕ್ವಿಂಟನ್ ಡಿ ಕಾಕ್(ವಿ.ಕೀ), ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್(ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಅನ್ರಿಚ್ ನಾರ್ಟ್ಜೆ, ಒಟ್ನೀಲ್ ಬಾರ್ಟ್‌ಮನ್

Story first published: Saturday, June 8, 2024, 19:46 [IST]
Other articles published on Jun 8, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+