T20 World Cup: ಪುರುಷರ ಟಿ20 ಕ್ರಿಕೆಟ್‌ನಲ್ಲಿ ಬೃಹತ್ ದಾಖಲೆ ಬರೆದ ರೋಹಿತ್ ಶರ್ಮಾ
ಬುಧವಾರ, ಜೂನ್ 5 ರಂದು ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಭಾರತ ತಂಡ ಆಲ್‌ರೌಂಡ್ ಪ್ರದರ್ಶನ ನೀಡಿ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.
ಇದೇ ವೇಳೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಪುರುಷರ ಟಿ20 ಪಂದ್ಯಗಳಲ್ಲಿ 4000 ರನ್ ಗಳಿಸಿದ 3ನೇ ಬ್ಯಾಟರ್ ಎನಿಸಿದರು.

ಇದಕ್ಕೂ ಮುನ್ನ ಪಾಕಿಸ್ತಾನದ ಬಾಬರ್ ಅಜಂ ಮತ್ತು ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಪುರುಷರ ಕ್ರಿಕೆಟ್‌ನಲ್ಲಿ ಹೆಗ್ಗುರುತನ್ನು ತಲುಪಿದ ಇತರ ಬ್ಯಾಟರ್‌ಗಳಾಗಿದ್ದಾರೆ. ಮಹಿಳಾ ಟಿ20 ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್‌ನ ಸುಜಿ ಬೇಟ್ಸ್ ಮಾತ್ರ ಈ ಸಾಧನೆ ಮಾಡಿದ್ದಾರೆ.
ಭಾರತ ತಂಡ 97 ರನ್ ಚೇಸ್ ಆರಂಭಿಸಿದ ಭಾರತ ತಂಡವು, ರೋಹಿತ್ ಶರ್ಮಾ ಅವರು ವಿರಾಟ್ ಕೊಹ್ಲಿ ಜೊತೆ ಇನ್ನಿಂಗ್ಸ್ ಆರಂಭಿಸಿದರು. ಪವರ್‌ಪ್ಲೇನಲ್ಲಿ ತಮ್ಮ ಸ್ಫೋಟಕ ಶಾಟ್‌ಗಳನ್ನು ಮುಕ್ತವಾಗಿ ಆಡಿದರು.
ರೋಹಿತ್ ಶರ್ಮಾ 6 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾಗ ಆಂಡ್ರ್ಯೂ ಬಲ್ಬಿರ್ನಿ ಅವರಿಂದ ಜೀವದಾನ ಪಡೆದರು ಮತ್ತು ಅದನ್ನು ಸದುಪಯೋಗ ಪಡಿಸಿಕೊಂಡು ಅರ್ಧಶತಕ ಬಾರಿಸಿದರು.

ಇದೇ ವೇಳೆ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಲ್ಲಿ 4000ಕ್ಕೂ ಅಧಿಕ ರನ್ ಗಳಿಸಿದ ವಿಶ್ವದ ಎರಡನೇ ಆಟಗಾರ ಎನಿಸಿಕೊಂಡರು.
ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 4000ಕ್ಕೂ ಅಧಿಕ ರನ್ ಗಳಿಸಿದವರು
ವಿರಾಟ್ ಕೊಹ್ಲಿ: ಟೆಸ್ಟ್ ಕ್ರಿಕೆಟ್‌ನಲ್ಲಿ 8848 ರನ್, ಏಕದಿನ ಕ್ರಿಕೆಟ್‌ನಲ್ಲಿ 13,848 ಮತ್ತು ಟಿ20 ಪಂದ್ಯಗಳಲ್ಲಿ 4038 ರನ್
ರೋಹಿತ್ ಶರ್ಮಾ: ಟೆಸ್ಟ್ ಕ್ರಿಕೆಟ್‌ನಲ್ಲಿ 4137 ರನ್, ಏಕದಿನ ಕ್ರಿಕೆಟ್‌ನಲ್ಲಿ 10,709 ಮತ್ತು ಟಿ20 ಪಂದ್ಯಗಳಲ್ಲಿ 4001 ರನ್
37ರ ವರ್ಷದ ರೋಹಿತ್ ಪುರುಷರ ಟಿ20 ಕ್ರಿಕೆಟ್‌ನಲ್ಲಿ (5) ಅತಿ ಹೆಚ್ಚು ಶತಕಗಳ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್ ದಾಖಲೆಯನ್ನು ಸರಿಗಟ್ಟಿದ್ದಾರೆ.
ಫಾರ್ಮ್‌ಗೆ ಮರಳಿದ ರೋಹಿತ್ ಶರ್ಮಾ
2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ದ್ವಿತೀಯಾರ್ಧದಲ್ಲಿ ಮುಂಬೈ ಇಂಡಿಯನ್ಸ್ ಹೆಚ್ಚಿನ ಸ್ಕಫರ್ ಗಳಿಸಲು ವಿಫಲರಾದರು. ಟಿ20 ವಿಶ್ವಕಪ್‌ಗೆ ಬರುವ ಉತ್ತಮ ಫಾರ್ಮ್‌ನಲ್ಲಿ ಇರಲಿಲ್ಲ.
ಐಪಿಡಲ್ 2024ರಲ್ಲಿ ರುತುರಾಜ್ ಗಾಯಕ್ವಾಡ್ ನಾಯಕತ್ವದ ಸಿಎಸ್‌ಕೆ ವಿರುದ್ಧ ಶತಕ ಗಳಿಸಿದರು. ಆದರೆ ಅದೇ ಆವೇಗವನ್ನು ಸಾಗಿಸಲು ಸಾಧ್ಯವಾಗಲಿಲ್ಲ. ರೋಹಿತ್ ಶರ್ಮಾ ಫಾರ್ಮ್‌ನಲ್ಲಿಲ್ಲದ ಕಾರಣ, ಮುಂಬೈ ಇಂಡಿಯನ್ಸ್ ತಂಡ ಕೂಡ ಪ್ಲೇಆಫ್‌ಗೆ ಹೋಗಲು ಸಾಧ್ಯವಾಗಲಿಲ್ಲ.
ಕುತೂಹಲಕಾರಿಯಾಗಿ, ಜನವರಿಯಲ್ಲಿ ಅಫ್ಘಾನಿಸ್ತಾನ ವಿರುದ್ಧದ ಹಿಂದಿನ ಟಿ20 ಪಂದ್ಯಗಳಲ್ಲಿ, ರೋಹಿತ್ ಶರ್ಮಾ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 103 ಎಸೆತಗಳಲ್ಲಿ ಅಜೇಯ 121 ರನ್ ಗಳಿಸಿದರು.
ಇದೇ ವೇಳೆ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 19000 ರನ್‌ಗಳ ಹೆಗ್ಗುರುತು ತಲುಪಿದರು. ಈ ಸಾಧನೆ ಮಾಡಿದ 14ನೇ ಬ್ಯಾಟರ್ ಎನಿಸಿಕೊಂಡರು.
ಉಳಿದಂತೆ ಸಚಿನ್ ತೆಂಡೂಲ್ಕರ್, ಕುಮಾರ ಸಂಗಕ್ಕಾರ, ರಿಕಿ ಪಾಂಟಿಂಗ್, ವಿರಾಟ್ ಕೊಹ್ಲಿ, ಮಹೇಲಾ ಜಯವರ್ಧನೆ, ಜಾಕ್ವೆಸ್ ಕಾಲಿಸ್, ರಾಹುಲ್ ದ್ರಾವಿಡ್, ಬ್ರಿಯಾನ್ ಲಾರಾ, ಸನತ್ ಜಯಸೂರ್ಯ, ಶಿವನಾರಾಯಣ್ ಚಾಂಡೆಪಾಲ್, ಇಂಜಮಾಮ್ ಉಲ್ ಹಕ್, ಎಬಿ ಡಿವಿಲಿಯರ್ಸ್, ಕ್ರಿಸ್ ಗೇಲ್ ಹಾಗೂ ಜೋ ರೂಟ್ ಈ ಸಾಧನೆ ಮಾಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications