T20 World Cup 2024: ಮೈದಾನಕ್ಕೆ ನುಗ್ಗಿದ ರೋಹಿತ್ ಶರ್ಮಾ ಅಭಿಮಾನಿಯನ್ನು ಸಿನಿಮೀಯ ಶೈಲಿಯಲ್ಲಿ ಹಿಡಿದ ಪೊಲೀಸರು!
ಜೂನ್ 2 ಭಾನುವಾರ, 2024ರ ಐಸಿಸಿ ಟಿ20 ವಿಶ್ವಕಪ್‌ನ ತಮ್ಮ ಏಕೈಕ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶ ತಂಡವನ್ನು ಹೀನಾಯವಾಗಿ ಸೋಲಿಸಿದೆ.
ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಶನಿವಾರ ನಡೆದ ಅಭ್ಯಾಸ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಮಾಡಿತ್ತು. ರಿಷಭ್ ಪಂತ್ ಅಬ್ಬರದ ಅರ್ಧಶತಕ ಮತ್ತು ಉಪನಾಯಕ ಹಾರ್ದಿಕ್ ಪಾಂಡ್ಯ ಅವರ ಸ್ಫೋಟಕ ಬ್ಯಾಟಿಂಗ್‌ನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್‌ಗಳನ್ನು ಗಳಿಸಿತ್ತು.

ಈ ಗುರಿ ಬೆನ್ನಟ್ಟಿದ್ದ ಬಾಂಗ್ಲಾದೇಶ ಬ್ಯಾಟರ್‌ಗಳು ಟೀಮ್ ಇಂಡಿಯಾ ಬೌಲರ್‌ಗಳ ಸಂಘಟಿತ ಆಕ್ರಮಣಕಾರಿ ಬೌಲಿಂಗ್ ದಾಳಿಗೆ ತತ್ತರಿಸಿದರು. ಪರಿಣಾಮ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 122 ರನ್‌ಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು. ಹೀಗಾಗಿ ಟೀಮ್ ಇಂಡಿಯಾ 60 ರನ್‌ಗಳ ಭರ್ಜರಿ ಜಯ ಸಾಧಿಸಿತ್ತು.
ಪಂದ್ಯ ನೋಡಲು ಸಾಕಷ್ಟು ಜನರು ಮೈದಾನಕ್ಕೆ ಬಂದಿದ್ದರು. ಈ ವೇಳೆ ರೋಹಿತ್ ಶರ್ಮಾ ಅವರನ್ನು ಭೇಟಿಯಾಗಲು ಅಭಿಮಾನಿಯೊಬ್ಬ ಭದ್ರತೆಯನ್ನು ಉಲ್ಲಂಘಿಸಿ ಮೈದಾನಕ್ಕೆ ನುಗ್ಗಿದ್ದಾರೆ. ಬಾಂಗ್ಲಾದೇಶ ಚೇಸಿಂಗ್ ಮಾಡುವಾಗ ಈ ಘಟನೆ ನಡೆದಿದೆ.
ರೋಹಿತ್ ಶರ್ಮಾ ಅವರನ್ನು ತಬ್ಬಿಕೊಳ್ಳಲು ಪ್ರಯತ್ನಿಸುವಾಗ ತಕ್ಷಣ ಮೈದಾಮಕ್ಕೆ ಎಂಟ್ರಕೊಟ್ಟ ನ್ಯೂಯರ್ಕ್ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಆತನನ್ನು ಹಿಡಿದಿದ್ದಾರೆ. ಬಳಿಕ ರೋಹಿತ್ ಅವರಿಂದ ಅಭಿಮಾನಿಯನ್ನು ಬೇರ್ಪಡಿಸುವ ಸಂದರ್ಭದಲ್ಲಿ ಆತ ಕೆಳಕ್ಕೆ ಬಿದ್ದಿದ್ದಾನೆ.
ಅಲ್ಲೇ ಕೈಕೋಳ ತೊಡಿಸಿ ಪೊಲೀಸರು ಮೈದಾನದಿಂದ ಹೊರಗೆ ಕರೆದೊಯ್ದಿದ್ದಾರೆ. ಈ ಸಂದರ್ಭದಲ್ಲಿ ಅಭಿಮಾನಿಯೊಂದಿಗೆ ಸೌಮ್ಯವಾಗಿ ನಡೆದುಕೊಂಡು ಆತನಿಗೆ ನೋಯಿಸದಂತೆ ಪೊಲೀಸರಿಗೆ ರೋಹಿತ್ ಶರ್ಮಾ ಮನವಿ ಮಾಡಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಹಿಟ್‌ಮ್ಯಾನ್ ಭೇಟಿಗೆ ಮೂರು ಬಾರಿ ಯತ್ನ
ಈ ವರ್ಷ ಇದು ಮೂರನೇ ಬಾರಿಗೆ ರೋಹಿತ್ ಶರ್ಮಾ ಅವರನ್ನು ಭೇಟಿಯಾಗಲು ಭದ್ರತೆಯನ್ನು ಉಲ್ಲಂಘಿಸಿ ಮೈದಾನಕ್ಕೆ ನುಗ್ಗಿರುವುದು. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ವೇಳೆ ಹೈದರಾಬಾದ್‌ನಲ್ಲಿ ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿ ರೋಹಿತ್ ಶರ್ಮಾ ಅವರ ಪಾದ ಸ್ಪರ್ಷಿಸಿದ್ದರು.
ಬಳಿಕ ಐಪಿಎಲ್ 2024ರಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕೀಳಿದ್ದಿದ ರೋಹಿತ್ ಶರ್ಮಾ ಅವರನ್ನು ಅಭಿಮಾನಿಯೊಬ್ಬ ಭೇಟಿಯಾಗಲು ಮೈದಾನಕ್ಕೆ ನುಗ್ಗಿ ಬಂದಿದ್ದರು.
ಟಿ20 ವಿಶ್ವಕಪ್‌ನಲ್ಲಿ 'ಎ' ಗುಂಪಿನಲ್ಲಿರುವ ಟೀಮ್ ಇಂಡಿಯಾ ಲೀಗ್ ಹಂತದಲ್ಲಿ ಒಟ್ಟು 4 ಪಂದ್ಯಗಳನ್ನು ಆಡಲಿದೆ. ಅದರಲ್ಲಿ ಮೂರು ಪಂದ್ಯ ನ್ಯೂಯರ್ಕ್‌ನಲ್ಲಿ ನಡೆಯಲಿದೆ.
ಟೀಮ್ ಇಂಡಿಯಾ ತನ್ನ ಅಭಿಯಾನವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡುವ ಮೂಲಕ ಶುರು ಮಾಡಲಿದೆ. ನಂತರ ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ಎದುರು ಜೂನ್ 9 ರಂದು ಹೈವೋಲ್ಟೇಜ್ ಪಂದ್ಯದಲ್ಲಿ ಟೀಮ್ ಇಂಡಿಯಾ ಕಣಕ್ಕೀಳಿಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications