ಟಿ20 ವಿಶ್ವಕಪ್ 2024 ವೇಳಾಪಟ್ಟಿ: ಈ ದಿನಾಂಕದಂದು ನ್ಯೂಯಾರ್ಕ್‌ನಲ್ಲಿ ಭಾರತ vs ಪಾಕಿಸ್ತಾನ ಪಂದ್ಯ!
ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎನಲ್ಲಿ ನಡೆಯಲಿರುವ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಗೆ ಜಗತ್ತಿನ ಕ್ರಿಕೆಟ್ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ಈ ಬಾರಿ ಹೆಚ್ಚು ತಂಡಗಳು ಭಾಗವಹಿಸುತ್ತಿದ್ದು, ಮತ್ತೊಂದು ಐಸಿಸಿ ಪಂದ್ಯಾವಳಿಗೆ ದಿನಗಣನೆ ಆರಂಭವಾಗಿದೆ.
ಇನ್ನು ಭಾರತ ತಂಡವು 2024ರ ಟಿ20 ವಿಶ್ವಕಪ್ ಸಮಯದಲ್ಲಿ ಜೂನ್ 9ರಂದು ನ್ಯೂಯಾರ್ಕ್‌ನಲ್ಲಿ ಬದ್ಧ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಇದಕ್ಕೂ ಮುನ್ನ ತಮ್ಮ ವಿಶ್ವಕಪ್ ಅಭಿಯಾನದ ಆರಂಭಿಕ ಪಂದ್ಯದಲ್ಲಿ ಐರ್ಲೆಂಡ್ ತಂಡದ ವಿರುದ್ಧ ಸೆಣಸಾಡಲಿದೆ.

ತಮ್ಮ ಎರಡನೇ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲಲು ಬಯಸಿರುವ ಟೀಮ್ ಇಂಡಿಯಾ ತಮ್ಮ ಗುಂಪು ಪಂದ್ಯಗಳನ್ನು ಯುಎಸ್‌ಎನಲ್ಲಿ ಆಡಲಿದೆ. ಸೂಪರ್ 8 ಪಂದ್ಯಗಳನ್ನು ಅರ್ಹತೆ ಪಡೆದರೆ ವೆಸ್ಟ್ ಇಂಡೀಸ್‌ನಲ್ಲಿ ಆಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಭಾರತ ತಂಡವು ತನ್ನ ಟಿ20 ವಿಶ್ವಕಪ್ ಅಭಿಯಾನವನ್ನು ಆರಂಭಿಸಲು ಜೂನ್ 5ರಂದು ನ್ಯೂಯಾರ್ಕ್‌ನಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಲಿದೆ.
ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದ ನಂತರ, ಭಾರತವು ಜೂನ್ 12ರಂದು ನ್ಯೂಯಾರ್ಕ್‌ನಲ್ಲಿ ಯುಎಸ್‌ಎ ತಂಡವನ್ನು ಎದುರಿಸಲಿದೆ ಮತ್ತು ಫ್ಲೋರಿಡಾದಲ್ಲಿ ತಮ್ಮ ಅಂತಿಮ ಗುಂಪು ಹಂತದ ಪಂದ್ಯದಲ್ಲಿ ಕೆನಡಾ ತಂಡದ ವಿರುದ್ಧ ಮುಖಾಮುಖಿಯಾಗಲಿದೆ.

2024ರ ಟಿ20 ವಿಶ್ವಕಪ್ ಗುಂಪು ಹಂತಗಳಲ್ಲಿ ಭಾರತ ತಂಡದ ಸಂಭಾವ್ಯ ವೇಳಾಪಟ್ಟಿ
ಜೂನ್ 5: ಭಾರತ vs ಐರ್ಲೆಂಡ್ (ನ್ಯೂಯಾರ್ಕ್)
ಜೂನ್ 9: ಭಾರತ vs ಪಾಕಿಸ್ತಾನ (ನ್ಯೂಯಾರ್ಕ್)
ಜೂನ್ 12: ಭಾರತ vs ಯುಎಸ್ಎ (ನ್ಯೂಯಾರ್ಕ್)
ಜೂನ್ 15: ಭಾರತ vs ಕೆನಡಾ (ಫ್ಲೋರಿಡಾ)
ಬಾರ್ಬಡೋಸ್‌ನಲ್ಲಿ ಟಿ20 ವಿಶ್ವಕಪ್ ಫೈನಲ್ ಪಂದ್ಯ ಸಾಧ್ಯತೆ
ಭಾರತ ತಂಡವು ಸೂಪರ್ 8 ಹಂತಕ್ಕೆ ಅರ್ಹತೆ ಪಡೆದರೆ, ತಂಡದ ಸುತ್ತಿನ ಮೊದಲ ಪಂದ್ಯವು ಜೂನ್ 20ರಂದು ಬಾರ್ಬಡೋಸ್‌ನಲ್ಲಿ ನಡೆಯಲಿದೆ. ಭಾರತ ತಂಡವು ವೆಸ್ಟ್ ಇಂಡೀಸ್‌ನಲ್ಲಿ ತನ್ನ ಎಲ್ಲಾ ಸೂಪರ್ 8 ಪಂದ್ಯಗಳನ್ನು ಆಡುವ ನಿರೀಕ್ಷೆಯಿದೆ.
ಐಸಿಸಿ ಮೂಲಗಳ ಪ್ರಕಾರ, ಜೂನ್ 29ರಂದು ಬಾರ್ಬಡೋಸ್‌ನಲ್ಲಿ 2024ರ ಟಿ20 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯ ಆಡುವ ನಿರೀಕ್ಷೆಯಿದೆ.
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಆಡಲು ಉತ್ಸುಕ
ಇತ್ತೀಚಿನ ಪಿಟಿಐ ವರದಿಯ ಪ್ರಕಾರ, ಟೀಮ್ ಇಂಡಿಯಾ ಸ್ಟಾರ್ ಕ್ರಿಕೆಟಿಗರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು 2024ರ ಟಿ20 ವಿಶ್ವಕಪ್‌ಗೆ ಭಾರತ ತಂಡದ ಭಾಗವಾಗಲು ಉತ್ಸುಕರಾಗಿದ್ದಾರೆ ಎನ್ನಲಾಗಿದೆ.
ನವೆಂಬರ್ 2022ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದ ನಂತರ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ಭಾರತ ತಂಡಕ್ಕಾಗಿ ಒಂದೇ ಒಂದು ಟಿ20 ಪಂದ್ಯವನ್ನು ಆಡಿಲ್ಲ ಎನ್ನುವುದು ಗಮನಾರ್ಹ ಸಂಗತಿ.
2024ರ ಟಿ20 ವಿಶ್ವಕಪ್ ಪಂದ್ಯಾವಳಿಯನ್ನು ಗಮನದಲ್ಲಿಟ್ಟುಕೊಂಡು, 2024ರ ಐಪಿಎಲ್ ಸಂದರ್ಭದಲ್ಲಿ ಒಟ್ಟು 30 ಆಟಗಾರರನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ ಎಂದು ಪಿಟಿಐ ವರದಿ ಹೇಳಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications