T20 World Cup 2024 Schedule: ಜೂನ್ 1ರಿಂದ ಟಿ20 ವಿಶ್ವಕಪ್‌ಗೆ ಚಾಲನೆ; ಭಾರತ ತಂಡದ ವೇಳಾಪಟ್ಟಿ ಇಲ್ಲಿದೆ
ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎನಲ್ಲಿ ನಡೆಯಲಿರುವ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಗೆ ಜಗತ್ತಿನ ಕ್ರಿಕೆಟ್ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ಈ ಬಾರಿ 20 ತಂಡಗಳು ಭಾಗವಹಿಸುತ್ತಿದ್ದು, ಮತ್ತೊಂದು ಐಸಿಸಿ ಪಂದ್ಯಾವಳಿಗೆ ದಿನಗಣನೆ ಆರಂಭವಾಗಿದೆ.
ಬಹು ನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯ ಸಂಪೂರ್ಣ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಶುಕ್ರವಾರ, ಜನವರಿ 5ರಂದು ಪ್ರಕಟಿಸಿದೆ.
2024ರ ಐಸಿಸಿ ಟಿ20 ವಿಶ್ವಕಪ್‌ನ ಉದ್ಘಾಟನಾ ಪಂದ್ಯದಲ್ಲಿ ಜೂನ್ 1ರಂದು ಸಹ-ಆತಿಥೇಯ ಯುಎಸ್ಎ ತಂಡವು ಕೆನಡಾ ತಂಡವನ್ನು ಎದುರಿಸುವುದರೊಂದಿಗೆ ಚಾಲನೆ ಸಿಗಲಿದೆ.
ಇನ್ನು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಬಹು ನಿರೀಕ್ಷಿತ ಪಂದ್ಯವು ಜೂನ್ 9ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

2007ರ ಟಿ20 ವಿಶ್ವಕಪ್ ಚಾಂಪಿಯನ್ ಭಾರತ ತಂಡವು ಪಾಕಿಸ್ತಾನ, ಯುಎಸ್ಎ, ಕೆನಡಾ ಮತ್ತು ಐರ್ಲೆಂಡ್ ತಂಡಗಳ ಜೊತೆಗೆ ಎ ಗುಂಪಿನಲ್ಲಿ ಸ್ಥಾನ ಪಡೆದಿದೆ.
2024ರ ಟಿ20 ವಿಶ್ವಕಪ್ ಗುಂಪು ಹಂತಗಳಲ್ಲಿ ಭಾರತ ತಂಡದ ವೇಳಾಪಟ್ಟಿ
- ಜೂನ್ 5: ಭಾರತ vs ಐರ್ಲೆಂಡ್ (ನ್ಯೂಯಾರ್ಕ್)
- ಜೂನ್ 9: ಭಾರತ vs ಪಾಕಿಸ್ತಾನ (ನ್ಯೂಯಾರ್ಕ್)
- ಜೂನ್ 12: ಭಾರತ vs ಯುಎಸ್ಎ (ನ್ಯೂಯಾರ್ಕ್)
- ಜೂನ್ 15: ಭಾರತ vs ಕೆನಡಾ (ಫ್ಲೋರಿಡಾ)
2024ರ ಟಿ20 ವಿಶ್ವಕಪ್ ಪಂದ್ಯಾವಳಿಯನ್ನು ವೆಸ್ಟ್ ಇಂಡೀಸ್‌ನ ಆರು ಮತ್ತು ಯುಎಸ್‌ಎನ ಮೂರು ಸ್ಥಳಗಳಲ್ಲಿ ಆಡಿಸಲಾಗುತ್ತದೆ.
ಐಸಿಸಿ ವೆಬ್‌ಸೈಟ್‌ನ ಪ್ರಕಾರ, ಗ್ರೂಪ್ ಬಿ ಗುಂಪಿನಲ್ಲಿ 2022ರ ಚಾಂಪಿಯನ್ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ಜೊತೆಗೆ ನಮೀಬಿಯಾ, ಸ್ಕಾಟ್‌ಲ್ಯಾಂಡ್ ಮತ್ತು ಓಮನ್ ತಂಡಗಳನ್ನು ಇರಿಸಲಾಗಿದೆ.
ವೆಸ್ಟ್ ಇಂಡೀಸ್ ತಂಡವನ್ನು ನ್ಯೂಜಿಲೆಂಡ್, ಅಫ್ಘಾನಿಸ್ತಾನ, ಉಗಾಂಡಾ ಮತ್ತು ಪಪುವಾ ನ್ಯೂ ಗಿನಿಯಾ ತಂಡಗಳನ್ನು ಸಿ ಗುಂಪಿನಲ್ಲಿ ಇರಿಸಲಾಗಿದೆ. ಡಿ ಗುಂಪಿನಲ್ಲಿ ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬಾಂಗ್ಲಾದೇಶ, ನೆದರ್ಲ್ಯಾಂಡ್ಸ್ ಮತ್ತು ನೇಪಾಳ ತಂಡಗಳನ್ನು ನೋಡಬಹುದು.
ಇನ್ನು ಭಾರತ ತಂಡವು 2024ರ ಟಿ20 ವಿಶ್ವಕಪ್ ಸಮಯದಲ್ಲಿ ಜೂನ್ 9ರಂದು ನ್ಯೂಯಾರ್ಕ್‌ನಲ್ಲಿ ಬದ್ಧ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಇದಕ್ಕೂ ಮುನ್ನ ತಮ್ಮ ವಿಶ್ವಕಪ್ ಅಭಿಯಾನದ ಆರಂಭಿಕ ಪಂದ್ಯದಲ್ಲಿ ಐರ್ಲೆಂಡ್ ತಂಡದ ವಿರುದ್ಧ ಸೆಣಸಾಡಲಿದೆ.
ತಮ್ಮ ಎರಡನೇ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲಲು ಬಯಸಿರುವ ಟೀಮ್ ಇಂಡಿಯಾ ತಮ್ಮ ಗುಂಪು ಪಂದ್ಯಗಳನ್ನು ಯುಎಸ್‌ಎನಲ್ಲಿ ಆಡಲಿದೆ. ಸೂಪರ್ 8 ಪಂದ್ಯಗಳನ್ನು ಅರ್ಹತೆ ಪಡೆದರೆ ವೆಸ್ಟ್ ಇಂಡೀಸ್‌ನಲ್ಲಿ ಆಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಭಾರತ ತಂಡವು ತನ್ನ ಟಿ20 ವಿಶ್ವಕಪ್ ಅಭಿಯಾನವನ್ನು ಆರಂಭಿಸಲು ಜೂನ್ 5ರಂದು ನ್ಯೂಯಾರ್ಕ್‌ನಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಲಿದೆ.
ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದ ನಂತರ, ಭಾರತವು ಜೂನ್ 12ರಂದು ನ್ಯೂಯಾರ್ಕ್‌ನಲ್ಲಿ ಯುಎಸ್‌ಎ ತಂಡವನ್ನು ಎದುರಿಸಲಿದೆ ಮತ್ತು ಫ್ಲೋರಿಡಾದಲ್ಲಿ ತಮ್ಮ ಅಂತಿಮ ಗುಂಪು ಹಂತದ ಪಂದ್ಯದಲ್ಲಿ ಕೆನಡಾ ತಂಡದ ವಿರುದ್ಧ ಮುಖಾಮುಖಿಯಾಗಲಿದೆ.
2024ರ ಟಿ20 ವಿಶ್ವಕಪ್ ಪಂದ್ಯಾವಳಿಯ ಎರಡು ಸೆಮಿಫೈನಲ್ ಪಂದ್ಯಗಳು ಜೂನ್ 26 ಮತ್ತು 27ರಂದು ನಡೆಯಲಿದ್ದರೆ, ಜೂನ್ 29ರಂದು ವೆಸ್ಟ್ ಇಂಡೀಸ್‌ನ ಬಾರ್ಬಡೋಸ್‌ನಲ್ಲಿ ಫೈನಲ್ ಪಂದ್ಯ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications