T20 world cup 2024: ಟಿ20 ವಿಶ್ವಕಪ್‌ಗೆ ಹೊಸ ನಾಯಕನೊಂದಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ
ಈಗಾಗಲೇ ಮೇ 1ರೊಳಗೆ 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿರುವ ದೇಶಗಳ ತಂಡಗಳಲ್ಲಿ ಆಡುವ 15 ಜನ ಆಟಗಾರರ ಪಟ್ಟಿಯನ್ನು ಸಲ್ಲಿಸುವಂತೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಸೂಚನೆ ನೀಡಿದೆ. ಹೀಗಾಗಿ ಭಾರತ ಸೇರಿದಂತೆ ಕೆಲ ತಂಡಗಳು ಇಂದು ಅಥವಾ ನಾಳೆ ಆಟಗಾರರ ಪಟ್ಟಿ ಪ್ರಕಟಿಸುವ ನಿರೀಕ್ಷೆಯಿದೆ.
ಇದೀಗ ಬಲಿಷ್ಠ ದಕ್ಷಿಣ ಆಫ್ರಿಕಾ ತನ್ನ 15 ಜನರ ತಂಡವನ್ನು ಪ್ರಕಟಸಿದೆ. ಜೊತೆಗೆ ಹರಿಣಗಳ ಪಡೆಗೆ ಹೊಸ ನಾಯಕನನ್ನು ಆಯ್ಕೆ ಮಾಡಲಾಗಿದೆ.ಒಂದು ಬಾರಿಯೂ ಯಾವುದೇ ಐಸಿಸಿ ಪ್ರಶಸ್ತಿ ಗೆಲ್ಲದ ದಕ್ಷಿಣ ಆಫ್ರಿಕಾ ತಂಡಕ್ಕೆ ಚೋಕರ್ಸ್ ಎಂಬ ಹಣೆ ಪಟ್ಟಿ ಇದೆ. ಹೀಗಾಗಿ 2024ರ ಟಿ20 ವಿಶ್ವಕಪ್‌ನಲ್ಲಿ ಹೊಸ ದಕ್ಷಿಣ ಆಫ್ರಿಕಾ ತಂಡ ಹೇಗೆ ಪ್ರದರ್ಶನ ನೀಡುತ್ತದೆ ಎಂಬುದು ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದೆ.

ನೂತನ ದಕ್ಷಿಣ ಆಫ್ರಿಕಾ ಟಿ20 ತಂಡಕ್ಕೆ ಐಡಿನ್ ಮಾರ್ಕ್ರಾಮ್ ಅವರನ್ನು ನಾಯಕನಾಗಿ ಆಯ್ಕೆ ಮಾಡಲಾಗಿದೆ. ಜೊತೆಗೆ ತಂಡದಲ್ಲಿ ಒಟ್ನಿಯೆಲ್ ಬಾರ್ಟ್‌ಮ್ಯಾನ್, ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ಜಾರ್ನ್ ಫೋರ್ಚುಯಿನ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್ (ವಿ.ಕೀ), ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಅನ್ರಿಚ್ ನಾರ್ಟ್ಜೆ, ಕಗಿಸೊ ರಬಾಡ, ರಿಯಾನ್ ರಿಜೆಲ್‌ಟನ್, ಟ್ಯಾಬ್ರಾಡ್ ಟ್ರಿಸ್ಟಾನ್ ಸ್ಟಬ್ಸ್ ಸ್ಥಾನ ಪಡೆದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications