T20 World Cup 2024: ಶ್ರೀಲಂಕಾ ವಿರುದ್ಧ ಸುಲಭ ಗೆಲುವು ಸಾಧಿಸಿದ ದಕ್ಷಿಣ ಆಫ್ರಿಕಾ
ಜೂನ್ 3 ಸೋಮವಾರ, ಅಮೆರಿಕಾದ ನ್ಯೂಯರ್ಕ್‌ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ 2024ರ ಟಿ20 ವಿಶ್ವಕಪ್‌ನ 4ನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ದಕ್ಷಿಣ ಆಫ್ರಿಕಾ ಗೆದ್ದು ಬೀಗಿದೆ.
ಶ್ರೀಲಂಕಾ ನೀಡಿದ 77 ರನ್‌ಗಳ ಸುಲಭ ಗುರಿ ಬೆನ್ನಟ್ಟಿದ ಹರಿಣಗಳ ಪಡೆ 16.2 ಓವರ್‌ಗಳಲ್ಲಿ 3 ವಿಕೆಟ್‌ಗಳನ್ನು ಕಳೆದುಕೊಂಡು ಜಯಗಳಿಸಿದೆ. ಆರಂಭಿಕ ಪಂದ್ಯದಲ್ಲೇ ಶ್ರೀಲಂಕಾ ಮುಗ್ಗರಿಸಿರುವುದರಿಂದ ಗುಂಪು ಹಂತದಲ್ಲೇ ಕಠಿಣ ಸವಾಲು ಎದುರಿಸಬೇಕಾಗುತ್ತದೆ.

ಇತ್ತ ಟೂರ್ನಿಯಲ್ಲಿ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ತನ್ನ ಟಿ20 ವಿಶ್ವಕಪ್ ಅಭಿಯಾನ ಶುರು ಮಾಡಿದೆ. ದಕ್ಷಿಣ ಆಫ್ರಿಕಾ ಪರ ರೀಜಾ ಹೆಂಡ್ರಿಕ್ಸ್ (4) ಮತ್ತು ನಾಯಕ ಐಡೆನ್ ಮಾರ್ಕ್ರಾಮ್ (12) ಆರಂಭದಲ್ಲೇ ವಿಕೆಟ್ ಕಳೆದುಕೊಂಡರು.
ಬಳಿಕ ಒಂದಾದ ಕ್ವಿಂಟನ್ ಡಿ ಕಾಕ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಜೋಡಿ ಎಚ್ಚೆತ್ತುಕೊಂಡು ತಾಳ್ಮೆಯಿಂದ ಬ್ಯಾಟ್ ಬೀಸಿದರು. ಆದರೆ ಉತ್ತಮವಾಗಿ ಆಡುತ್ತಿದ್ದ ಕ್ವಿಂಟನ್ ಡಿ ಕಾಕ್ 20 ರನ್ ಗಳಿಸಿ ಔಟ್ ಆದರು. ಟ್ರಿಸ್ಟಾನ್ ಸ್ಟಬ್ಸ್ ಕೂಡ 13 ರನ್‌ಗಳಿಗೆ ವಿಕೆಟ್ ಕಳೆದುಕೊಂಡರು.
ಕೊನೆಯಲ್ಲಿ ಹೆನ್ರಿಚ್ ಕ್ಲಾಸೆನ್ ಅಜೇಯ (19) ಹಾಗು ಡೇವಿಡ್ ಮಿಲ್ಲರ್ (6) ಜೊತೆಗೂಡಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಶ್ರೀಲಂಕಾ ಪರ ವನಿಂದು ಹಸರಂಗ 2 ವಿಕೆಟ್ ಕಬಳಿಸಿದರೆ, ನುವಾನ್ ತುಷಾರ, ದಸುನ್ ಶನಕ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications