T20 World Cup 2024: ಶ್ರೀಲಂಕಾ-ದಕ್ಷಿಣ ಹೈವೋಲ್ಟೇಜ್ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
ಜೂನ್ 3 ಸೋಮವಾರ, ಐಸಿಸಿ 2024ರ ಟಿ20 ವಿಶ್ವಕಪ್‌ನ 4ನೇ ಪಂದ್ಯದಲ್ಲಿ ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸೆಣಾಸಾಡುತ್ತಿವೆ. ಅಮೆರಿಕಾದ ನ್ಯೂಯರ್ಕ್‌ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಉಭಯ ತಂಡಗಳ ಮೆಗಾ ಫೈಟ್ ಆರಂಭವಾಗಿದೆ.
ಮೊದಲು ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ವನಿಂದು ಹಸರಂಗ ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಐಡೆನ್ ಮಾರ್ಕ್ರಾಮ್ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡದ ಬೌಲಿಂಗ್ ಮಾಡಲಿದೆ.

ಶ್ರೀಲಂಕಾ vs ದಕ್ಷಿಣ ಆಫ್ರಿಕಾ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ
ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ 2024ರ ಟಿ20 ವಿಶ್ವಕಪ್‌ನ ಸಂಪೂರ್ಣ ಪ್ರಸಾರ ಹಕ್ಕುಗಳನ್ನು ಹೊಂದಿದೆ. ಹೀಗಾಗಿ ಶ್ರೀಲಂಕಾ vs ದಕ್ಷಿಣ ಆಫ್ರಿಕಾ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರವಾಗಲಿದ್ದರೆ, ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್ಸ್ಟಾರ್‌ನಲ್ಲಿ ಲಭ್ಯವಿರುತ್ತದೆ.
ಶ್ರೀಲಂಕಾ vs ದಕ್ಷಿಣ ಆಫ್ರಿಕಾ ಆಡುವ 11ರ ಬಳಗ
ಶ್ರೀಲಂಕಾ ತಂಡ : ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್ (ವಿ.ಕೀ), ಕಮಿಂದು ಮೆಂಡಿಸ್, ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಏಂಜೆಲೊ ಮ್ಯಾಥ್ಯೂಸ್, ದಸುನ್ ಶನಕ, ವನಿಂದು ಹಸರಂಗ (ನಾಯಕ), ಮಹೀಶ್ ತೀಕ್ಷಣ, ಮತೀಶ ಪತಿರಣ, ನುವಾನ್ ತುಶ್
ದಕ್ಷಿಣ ಆಫ್ರಿಕಾ ತಂಡ : ಕ್ವಿಂಟನ್ ಡಿ ಕಾಕ್ (ವಿ.ಕೀ), ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಆನ್ರಿಚ್ ನಾರ್ಟ್ಜೆ, ಒಟ್ನೀಲ್ ಬಾರ್ಟ್‌ಮನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications