For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್‌ನಲ್ಲಿ ಭಾರತದ ಆಡುವ 11ರ ಬಳಗ ಆಯ್ಕೆ ಮಾಡಿದ ಸುನಿಲ್ ಗವಾಸ್ಕರ್; ಕೊಹ್ಲಿಗೆ ಅಚ್ಚರಿ ಸ್ಥಾನ!

ಬುಧವಾರ, ಜೂನ್ 5ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿರುವ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡವು ಐರ್ಲೆಂಡ್ ವಿರುದ್ಧ ಸೆಣಸಾಡುವುದರೊಂದಿಗೆ ತನ್ನ ಅಭಿಯಾನ ಆರಂಭಿಸಲಿದೆ.

ಇದೇ ವೇಳೆ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಆರಂಭಿಕರಾಗಬೇಕು ಎಂದು ಭಾರತದ ಲೆಜೆಂಡ್ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ. ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರನ್ನು ಮೂರನೇ ಕ್ರಮಾಂಕಕ್ಕೆ ಇಳಿಸಿದ್ದಾರೆ.

T20 World Cup 2024 Sunil Gavaskar Picked India s Playing XI Against Ireland

ಟಿ20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ಸ್ಥಾನದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ. ಅನುಭವಿ ಬಲಗೈ ಬ್ಯಾಟರ್ ದೀರ್ಘಕಾಲದವರೆಗೆ ವೈಟ್-ಬಾಲ್ ಸ್ವರೂಪದಲ್ಲಿ ಭಾರತ ತಂಡಕ್ಕೆ ನಿಗದಿಪಡಿಸಿದ ಮೂರನೇ ಕ್ರಮಾಂಕದ ಬ್ಯಾಟರ್ ಆಗಿದ್ದಾರೆ. ಅತ್ಯುತ್ತಮ ಐಪಿಎಲ್ 2024ರ ಋತುವಿನ ಹಿನ್ನಲೆಯಲ್ಲಿ ವಿರಾಟ್ ಕೊಹ್ಲಿ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಗೆ ಬರುತ್ತಿದ್ದಾರೆ.

"3ನೇ ಕ್ರಮಾಂಕದಲ್ಲಿ ಅಚ್ಚರಿಯ ಸೇರ್ಪಡೆ, ಸಾಕಷ್ಟು ಬ್ಯಾಟಿಂಗ್ ಆಯ್ಕೆಗಳು ಮತ್ತು ಇಬ್ಬರು ವೇಗಿಗಳು ಇದ್ದಾರೆ. ಭಾರತ ತಂಡದಲ್ಲಿ ನೀವು ಯಾವ ಬದಲಾವಣೆಗಳನ್ನು ಮಾಡುತ್ತೀರಿ ಎಂದು ಕೇಳಿದರೆ, ನನ್ನ ಉತ್ತರ ಹೀಗಿದೆ''.

T20 World Cup 2024 Sunil Gavaskar Picked India s Playing XI Against Ireland

"ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಮೂರು ಸ್ಥಾನದಲ್ಲಿ ಯಶಸ್ವಿ ಜೈಸ್ವಾಲ್ ಇರುತ್ತಾರೆ," ಎಂದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ತಮ್ಮ ಆದ್ಯತೆಯ ಆಡುವ 11ರ ಬಳಗ ಆಯ್ಕೆ ಮಾಡುವಾಗ ಹೇಳಿದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆರಂಭಿಕರಾಗಿ ವಿರಾಟ್ ಕೊಹ್ಲಿ 15 ಪಂದ್ಯಗಳಲ್ಲಿ 61.75ರ ಸರಾಸರಿಯಲ್ಲಿ ಮತ್ತು 154ರ ಸ್ಟ್ರೈಕ್ ರೇಟ್‌ನಲ್ಲಿ 741 ರನ್ ಗಳಿಸಿದರು. ತಮ್ಮ ಅದ್ಭುತ ಬ್ಯಾಟಿಂಗ್ ಫಾರ್ಮ್‌ನಿಂದ ಒಂದು ಶತಕ ಮತ್ತು ಐದು ಅರ್ಧಶತಕಗಳನ್ನು ಬಾರಿಸಿದರು.

ಸುನಿಲ್ ಗವಾಸ್ಕರ್ ಅವರು ಸಂಜು ಸ್ಯಾಮ್ಸನ್ ಅವರ ಬದಲಾಗಿ ಸ್ಫೋಟಕ ಬ್ಯಾಟರ್ ರಿಷಭ್ ಪಂತ್ ಅವರನ್ನು ವಿಕೆಟ್ ಕೀಪರ್ ಕರ್ತವ್ಯಕ್ಕಾಗಿ ಆಯ್ಕೆ ಮಾಡಿದರು. ಎಡಗೈ ವೇಗಿ ಅರ್ಶ್‌ದೀಪ್ ಸಿಂಗ್ ಅವರ ಬದಲಾಗಿ ಮೊಹಮ್ಮದ್ ಸಿರಾಜ್ ಅವರನ್ನು ಆಡುವ 11ರ ಬಳಗಕ್ಕೆ ಸೇರ್ಪಡೆಗೊಳಿಸಿದ್ದಾರೆ.

"ಸೂರ್ಯಕುಮಾರ್ ಯಾದವ್ ನಾಲ್ಕನೇ ಕ್ರಮಾಂಕದಲ್ಲಿ, ರಿಷಭ್ ಪಂತ್ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕು. ಆರನೇ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ, ಏಳನೇ ಕ್ರಮಾಂಕದಲ್ಲಿ ರವೀಂದ್ರ ಜಡೇಜಾ, ಎಂಟನೇ ಕ್ರಮಾಂಕದಲ್ಲಿ ಶಿವಂ ದುಬೆ ಇರಲಿದ್ದಾರೆ. ಕ್ರಮಾಂಕದಲ್ಲಿ ಯಾವುದೇ ಬದಲಾವಣೆ ಮಾಡಬಹುದು,'' ಎಂದರು.

"ಒಂಬತ್ತನೇ ಸ್ಥಾನದಲ್ಲಿ ಕುಲದೀಪ್ ಯಾದವ್, 10ನೇ ಸ್ಥಾನದಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು 11ನೇ ಸ್ಥಾನದಲ್ಲಿ ಮೊಹಮ್ಮದ್ ಸಿರಾಜ್ ಇರಲಿದ್ದಾರೆ," ಎಂದು ಸುನಿಲ್ ಗವಾಸ್ಕರ್ ತಿಳಿಸಿದರು.

ಐರ್ಲೆಂಡ್ ವಿರುದ್ಧದ ಪಂದ್ಯದ ನಂತರ, ಭಾರತ ಭಾನುವಾರ, ಜೂನ್ 9ರಂದು ಅದೇ ಸ್ಥಳದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.

Story first published: Wednesday, June 5, 2024, 8:24 [IST]
Other articles published on Jun 5, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+