T20 World Cup 2024: ಟಿ20 ಕ್ರಿಕೆಟ್‌ನಲ್ಲಿ 3 ದಾಖಲೆ ನಿರ್ಮಿಸಿದ ಹಿಟ್‌ಮ್ಯಾನ್ ರೋಹಿತ್ ಶರ್ಮಾ
ಬುಧವಾರ, ಜೂನ್ 5ರಂದು ನ್ಯೂಯಾರ್ಕ್‌ನಲ್ಲಿ ನಡೆದ 2024ರ ಟಿ20 ವಿಶ್ವಕಪ್‌ನ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ 8 ವಿಕೆಟ್‌ಗಳ ಗೆಲುವಿನೊಂದಿಗೆ ಟಿ20 ವಿಶ್ವಕಪ್‌ಟಿ20 ವಿಶ್ವಕಪ್ ಅಭಿಯಾನವನ್ನು ಶುಭಾರಂಭ ಮಾಡಿತು.
ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಪಾಲ್ ಸ್ಟಿರ್ಲಿಂಗ್ ನಾಯಕತ್ವದ ಐರ್ಲೆಂಡ್ ಬ್ಯಾಟಿಂಗ್ ಮಾಡಿತು. ಆದರೆ, ಭಾರತೀಯ ಬೌಲರ್‌ಗಳ ಮಾರಕ ದಾಳಿಗೆ ತತ್ತರಿಸಿದ ಐರ್ಲೆಂಡ್ ಕೇವಲ 96 ರನ್‌ಗಳಿಗೆ ಸರ್ವಪತನ ಕಂಡಿತು.

ಐರ್ಲೆಂಡ್ ಪರ ಗರೆಥ್ ಡೆಲಾನಿ 14 ಎಸೆತಗಳಲ್ಲಿ 2 ಬೌಂಡರಿ ಮತ್ತು 2 ಸಿಕ್ಸರ್‌ಗಳ ಮೂಲಕ 26 ರನ್ ಗಳಿಸಿದ್ದು ಗರಿಷ್ಠ ವೈಯಕ್ತಿಕ ಮೊತ್ತವಾಗಿದೆ.
ಬೌಲಿಂಗ್‌ನಲ್ಲಿ ಭಾರತ ತಂಡದ ಪರ ಹಾರ್ದಿಕ್ ಪಾಂಡ್ಯ 4 ಓವರ್‌ಗಳಲ್ಲಿ 27 ರನ್ ನೀಡಿ 3 ವಿಕೆಟ್ ಪಡೆದರೆ, ಜಸ್ಪ್ರೀತ್ ಬುಮ್ರಾ ಮತ್ತು ಅರ್ಶ್‌ದೀಪ್ ಸಿಂಗ್ ತಲಾ 2 ವಿಕೆಟ್ ಪಡೆದರು.
ಗೆಲುವಿನ ಖಾತೆ ತೆರೆಯಲು ಕೇವಲ 12.2 ಓವರ್‌ಗಳಲ್ಲಿ ಗುರಿ ಮುಟ್ಟಿದ ಭಾರತ ತಂಡ ಯಾವುದೇ ಆತಂಕವಿಲ್ಲದೆ ಯಶಸ್ವಿ ಚೇಸ್ ಮಾಡಿತು. ನಾಯಕ ರೋಹಿತ್ ಶರ್ಮಾ 37 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್ ಸಮೇತ ಅಜೇಯ 52 ರನ್ ಬಾರಿಸಿದರು. ರಿಷಭ್ ಪಂತ್ 26 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಮೂಲಕ ಅಜೇಯ 36 ರನ್ ಗಳಿಸಿದರು.
ರೋಹಿತ್ ಶರ್ಮಾ ಅವರು ಐರ್ಲೆಂಡ್ ವಿರುದ್ಧ ಅರ್ಧಶತಕ ಬಾರಿಸುವ ಜೊತೆಗೆ ವೇಳೆ ಟಿ20 ಕ್ರಿಕೆಟ್‌ನಲ್ಲಿ ಪ್ರಮುಖ ಮೂರು ದಾಖಲೆಗಳನ್ನು ನಿರ್ಮಿಸಿದರು.
1. ಟಿ20 ಕ್ರಿಕೆಟ್‌ನಲ್ಲಿ 4000 ರನ್ ಪೂರೈಸಿದ ರೋಹಿತ್ ಶರ್ಮಾ
ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ನ್ಯೂಯಾರ್ಕ್‌ನಲ್ಲಿ ಐರ್ಲೆಂಡ್ ವಿರುದ್ಧ ತಂಡದ ಬ್ಯಾಟಿಂಗ್ ಆಕ್ರಮಣಕಾರಿ ದಾಳಿಯನ್ನು ಉದಾಹರಣೆಯಾಗಿ ನೀಡಿದರು. ಈ ಪ್ರಕ್ರಿಯೆಯಲ್ಲಿ ಟಿ20 ಕ್ರಿಕೆಟ್‌ನಲ್ಲಿ 4,000 ರನ್ ಪೂರೈಸಿದರು.
ಪಾಕಿಸ್ತಾನದ ಬಾಬರ್ ಅಜಂ ಅವರ 4023 ರನ್‌ಗಳ ಮೊತ್ತವನ್ನು ದಾಟಿದರು ಮತ್ತು ಟಿ20 ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಅವರ ಅತಿ ಹೆಚ್ಚು ರನ್‌ಗಳ (4038) ದಾಖಲೆಯನ್ನು ಮೀರಿಸಲು ಕೇವಲ 13 ರನ್‌ಗಳ ಹಿಂದೆ ಇದ್ದಾರೆ. ರೋಹಿತ್ ಶರ್ಮಾ ಚುಟುಕು ಕ್ರಿಕೆಟ್ ಸ್ವರೂಪದಲ್ಲಿ 5 ಶತಕ ಹಾಗೂ 30 ಅರ್ಧಶತಕ ಬಾರಿಸಿದ್ದಾರೆ.
2. ಟಿ20 ವಿಶ್ವಕಪ್‌ನಲ್ಲಿ 1000 ರನ್ ಪೂರೈಸಿದ ರೋಹಿತ್ ಶರ್ಮಾ
ಟಿ20 ವಿಶ್ವಕಪ್ ಇತಿಹಾಸದಲ್ಲಿ 1,000 ರನ್ ಪೂರೈಸಿದ ಕೇವಲ ಮೂವರು ಆಟಗಾರರಲ್ಲಿ ರೋಹಿತ್ ಶರ್ಮಾ ಕೂಡ ಒಬ್ಬರು ಎಂಬುದು ಗಮನಾರ್ಹ ಅಂಶವಾಗಿದೆ.
ಇದಕ್ಕೂ ಮುನ್ನ ವಿರಾಟ್ ಕೊಹ್ಲಿ (1142 ರನ್) ಮತ್ತು ಮಹೇಲಾ ಜಯವರ್ಧನೆ (1016 ರನ್) ಈ ಸಾಧನೆ ಮಾಡಿದ ಇತರ ಇಬ್ಬರು ಆಟಗಾರರು. ಒಟ್ಟಾರೆಯಾಗಿ, ಉದ್ಘಾಟನಾ ಆವೃತ್ತಿಯಿಂದ ಟಿ20 ವಿಶ್ವಕಪ್ ಆಡುತ್ತಿರುವ ರೋಹಿತ್ ಶರ್ಮಾ 36.25ರ ಸರಾಸರಿಯಲ್ಲಿ 10 ಅರ್ಧ ಶತಕಗಳೊಂದಿಗೆ 1015 ರನ್ ಗಳಿಸಿದ್ದಾರೆ.
3. ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 600 ಸಿಕ್ಸರ್
ಭಾರತೀಯ ಅನುಭವಿ ಕ್ರಿಕೆಟಿಗ ರೋಹಿತ್ ಶರ್ಮಾ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 600 ಸಿಕ್ಸರ್‌ಗಳನ್ನು ಸಿಡಿಸಿದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಳ್ಳುವ ಮೂಲಕ ದಾಖಲೆ ಪುಸ್ತಕಗಳಲ್ಲಿ ತನ್ನ ಹೆಸರನ್ನು ಬರೆದರು.
'ಹಿಟ್‌ಮ್ಯಾನ್' ಎಂದೇ ಜನಪ್ರಿಯವಾಗಿ ಕರೆಯಲ್ಪಡುವ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ನಲ್ಲಿ 84 ಸಿಕ್ಸರ್, ಏಕದಿನ ಪಂದ್ಯಗಳಲ್ಲಿ 323 ಸಿಕ್ಸರ್ ಮತ್ತು ಟಿ20 ಪಂದ್ಯಗಳಲ್ಲಿ 193 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ವೆಸ್ಟ್ ಇಂಡೀಸ್‌ನ ಕ್ರಿಸ್ ಗೇಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 553 ಸಿಕ್ಸರ್‌ಗಳೊಂದಿಗೆ ರೋಹಿತ್ ಶರ್ಮಾ ನಂತರದ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications