Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

T20 World Cup 2024: ಅಡಿಡಾಸ್ ಸಹಯೋಗದೊಂದಿಗೆ ಅಧಿಕೃತ ಟೀಮ್‌ ಇಂಡಿಯಾ ಕಿಟ್‌ ಬಿಡುಗಡೆಗೊಳಿಸಿದ ರೋಹಿತ್‌, ಜಯ ಶಾ

2024ರ ಐಸಿಸಿ ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾದ ಹೊಸ ಜೆರ್ಸಿ ಈಗಾಗಲೇ ಬಿಡುಗಡೆಯಾಗಿದೆ. ಆದರೆ ಇದೀಗ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅಧಿಕೃತ ಕಿಟ್ ಪಾಲುದಾರ ಅಡಿಡಾಸ್ ಸಹಯೋಗದೊಂದಿಗೆ ಮತ್ತೊಮ್ಮೆ ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಿದ್ದಾರೆ.

ಗುಜರಾತ್‌ನ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅಭಿಮಾನಿಗಳ ಮುಂದೆ ಹೊಸ ಜೆರ್ಸಿಯನ್ನು ಪ್ರಸ್ತುತಪಡಿಸಲಾಗಿದೆ. ಟೀಮ್‌ ಇಂಡಿಯಾದ ಅಭ್ಯಾಸ ಮತ್ತು ಪಂದ್ಯ ವೇಳೆ ಧರಿಸುವ ಜೆರ್ಸಿ ಅನ್ನು ಬಿಡುಗೊಳಿಸಿರುವ ಕಾರ್ಯಕ್ರಮದ ವಿಡಿಯೋ ಅನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ಅಧಿಕೃತ ಸಾಮಾಜಿಕ ಜಾಲತಾಣದ ಟ್ವೀಟರ್‌ (ಎಕ್ಸ್‌) ಖಾತೆಯಲ್ಲಿ ಹಂಚಿಕೊಂಡಿದೆ.

T20 World Cup 2024 Team India kit released

ಬಿಸಿಸಿಐ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ , 'ಈಗ ನಮ್ಮ ತಂಡವನ್ನು ಹೊಸ ಬಣ್ಣಗಳಲ್ಲಿ ಸ್ವಾಗತಿಸುವ ಸಮಯ ಬಂದಿದೆ. ರೋಹಿತ್ ಶರ್ಮಾ, ಜಯ್ ಶಾ ಮತ್ತು ಅಧಿಕೃತ ಕಿಟ್ ಪಾಲುದಾರ ಅಡಿಡಾಸ್ ಜೊತೆಯಲ್ಲಿ ಟೀಮ್ ಇಂಡಿಯಾದ ಟಿ20 ಜೆರ್ಸಿಯನ್ನು ಪ್ರಸ್ತುತಪಡಿಸಲಾಗುತ್ತಿದೆ ಎಂದು ಬರೆಯಲಾಗಿದೆ.

ಈ ವೀಡಿಯೋದಲ್ಲಿ ನೀಲಿ ಬಣ್ಣದ ಟೀಂ ಇಂಡಿಯಾದ ಅಭ್ಯಾಸ ಜೆರ್ಸಿಯೂ ಕಾಣಿಸುತ್ತಿದೆ. ಇದರೊಂದಿಗೆ ಈ ಬಾರಿಯ ವಿಶ್ವಕಪ್‌ಗಾಗಿ ಟೀಂ ಇಂಡಿಯಾದ ಟ್ರಾವೆಲ್ ಕಿಟ್ ಕೂಡ ಬಹಿರಂಗವಾಗಿದ್ದು, ಅದು ಬಿಳಿ ಬಣ್ಣದಲ್ಲಿದೆ. ಆ ಜೆರ್ಸಿಯನ್ನೇ ಧರಿಸಿ ರೋಹಿತ್ ಶರ್ಮಾ ಕಾಣಿಸಿಕೊಂಡಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಅಭಿಯಾನ

2024ರ ಟಿ20 ವಿಶ್ವಕಪ್‌ನಲ್ಲಿ ಜೂನ್ 5 ರಿಂದ ಐರ್ಲೆಂಡ್ ವಿರುದ್ಧ ಟೀಮ್‌ ಇಂಡಿಯಾ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಇದರ ನಂತರ ವಿಶ್ವದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಎದರು ನೋಡುತ್ತಿರುವ ಹೈವೋಲ್ಟೇಜ್‌ ಪಂದ್ಯ ನಡೆಯಲಿದೆ. ಅಂದರೆ ಟೀಂ ಇಂಡಿಯಾ ಮತ್ತು ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ಜೂನ್ 9 ರಂದು ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಮುಖಾಮುಖಿಯಾಗುತ್ತಿವೆ.

2024 ರ ಟಿ 20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ಮತ್ತು ಭಾರತವನ್ನು ಒಂದೇ ಗುಂಪಿನಲ್ಲಿ ಇರಿಸಲಾಗಿದೆ. ಜೂನ್ 9 ರಂದು ಈ ಎರಡು ತಂಡಗಳ ನಡುವೆ ಜಿದ್ದಾಜಿದ್ದಿನ ಪೈಪೋಟಿಯನ್ನು ಅಭಿಮಾನಿಗಳು ಕಣ್ತುಂಬಿಕೊಳ್ಳಲಿದ್ದಾರೆ. ಭಾರತ ಮತ್ತು ಪಾಕಿಸ್ತಾನಿ ಅಭಿಮಾನಿಗಳಲ್ಲದೆ, ವಿಶ್ವದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಸಹಾ ಉಭಯ ತಂಡಗಳ ಕ್ರಿಕೆಟ್‌ ಕದನಕ್ಕೆ ಕಾಯುತ್ತಿದ್ದಾರೆ.

ಟಿ20 ವಿಶ್ವಕಪ್‌ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿ.ಕೀ), ಸಂಜು ಸ್ಯಾಮ್ಸನ್ (ವಿ.ಕೀ), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶ್‌ದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.

Story first published: Monday, May 13, 2024, 19:22 [IST]
Other articles published on May 13, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+