T20 World Cup 2024: ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿದ ಟೀಮ್ ಇಂಡಿಯಾ ಆಟಗಾರನ ಫಾರ್ಮ್!
ಜೂನ್ 7 ಶುಕ್ರವಾರ, ಐಸಿಸಿ ಟಿ20 ವಿಶ್ವಕಪ್ 2024ರ ಲೀಗ್ ಹಂತದ 19ನೇ ಪಂದ್ಯದಲ್ಲಿ ಜೂನ್ 9 ರಂದು (ಭಾನುವಾರ) ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿದೆ. ಈ ಪಂದ್ಯವು ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲುವ ನೆಚ್ಚಿನ ತಂಡ ಎನ್ನಲಾಗಿದೆ. ಏಕೆಂದರೆ ಪಾಕಿಸ್ತಾನವು ತನ್ನ ಮೊದಲ ಟಿ20 ವಿಶ್ವಕಪ್ ಪಂದ್ಯದಲ್ಲಿ ಯುಎಸ್‌ಎ ವಿರುದ್ಧ ಹೀನಾಯವಾಗಿ ಸೋತಿದೆ. ಇಂತಹ ಪರಿಸ್ಥಿತಿಯಲ್ಲಿ, ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಎದುರು ಪಾಕಿಸ್ತಾನ ಜಯಿಸಲು ತುಂಬಾ ಕಷ್ಟಕರವಾಗಲಿದೆ.

ಮತ್ತೊಂದೆಡೆ ಟೀಮ್ ಇಂಡಿಯಾ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಫಾರ್ಮ್‌ಗೆ ಮರಳಿರುವುದು ಪಾಕಿಸ್ತಾನಕ್ಕೆ ನಿದ್ದೆಗೆಡಿಸಿದೆ. 2024ರ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಹಾರ್ದಿಕ್ ಫಾರ್ಮ್‌ನಿಂದ ಹೊರಗುಳಿದಿದ್ದರು. ಐಪಿಎಲ್ 2024ರಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ಹಾರ್ದಿಕ್ ಪಾಂಡ್ಯ ವಿಫಲವಾಗಿದ್ದರು.
ಹೀಗಿರುವಾಗ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಪರ ಹಾರ್ದಿಕ್ ಪಾಂಡ್ಯ ಹೇಗೆ ಬೌಲಿಂಗ್ ಮಾಡುತ್ತಾರೆ ಎಂಬ ಅನುಮಾನ ಮೂಡಿತ್ತು. ಇದೀಗಾ ಹಾರ್ದಿಕ್ ಬೌಲಿಂಗ್‌ನಲ್ಲಿ ಪ್ರಬಲ ಪುನರಾಗಮನ ಮಾಡಿದ್ದು ಮಾತ್ರವಲ್ಲದೆ ಬ್ಯಾಟಿಂಗ್‌ನಲ್ಲಿಯೂ ಅಬ್ಬರಿಸುತ್ತಿದ್ದಾರೆ.
ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಪಾಂಡ್ಯ ಬಿರುಸಿನ ಬ್ಯಾಟಿಂಗ್ ಪ್ರದರ್ಶನ ತೋರಿದ್ದರು. ಇದರ ನಂತರ ಐರ್ಲೆಂಡ್ ವಿರುದ್ಧ ತಮ್ಮ ಮೊದಲ ಲೀಗ್ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನದ ಮೂಲಕ ಮಿಂಚಿದ್ದರು.

ಟಿ20 ವಿಶ್ವಕಪ್ 2024ರಲ್ಲಿ ಹಾರ್ದಿಕ್ ಪಾಂಡ್ಯ ಪ್ರದರ್ಶನ
ಟಿ20 ವಿಶ್ವಕಪ್ 2024ರ ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 23 ಎಸೆತಗಳಲ್ಲಿ 2 ಬೌಂಡರಿ ಮತ್ತು 4 ಸಿಕ್ಸರ್‌ಗಳ ನೆರೆವಿನಿಂದ ಅಜೇಯ 40 ರನ್‌ಗಳನ್ನು ಬಾರಿಸಿದ್ದರು. ತಮ್ಮ ಮೊದಲ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಪಾಂಡ್ಯ 4 ಓವರ್ ಗಳಲ್ಲಿ 27 ರನ್ ನೀಡಿ 3 ವಿಕೆಟ್ ಪಡೆದುಕೊಂಡಿದ್ದರು. ಇಂತಹ ಅದ್ಭುತ ಫಾರ್ಮ್‌ನಲ್ಲಿರುವ ಹಾರ್ದಿಕ್ ಪಾಕಿಸ್ತಾನಕ್ಕೆ ದೊಡ್ಡ ಬೆದರಿಕೆಯೊಡ್ಡಬಹುದು.
ಪಾಕಿಸ್ತಾನ ವಿರುದ್ಧ ಹಾರ್ದಿಕ್ ಪಾಂಡ್ಯ ಅಬ್ಬರ
ಪಾಕಿಸ್ತಾನ ವಿರುದ್ಧದ ಟಿ20 ಕ್ರಿಕೆಟ್‌ನಲ್ಲಿ ಹಾರ್ದಿಕ್ ಪಾಂಡ್ಯ ಅವರ ಅಂಕಿಅಂಶಗಳು ಅದ್ಭುತವಾಗಿವೆ . ಪಾಕಿಸ್ತಾನದ ವಿರುದ್ಧ ಹಾರ್ದಿಕ್ 6 ಪಂದ್ಯಗಳ 5 ಇನ್ನಿಂಗ್ಸ್‌ಗಳಲ್ಲಿ 84 ರನ್ ಗಳಿಸಿದ್ದಾರೆ. 40 ರನ್ ಅತ್ಯುತ್ತಮ ಸ್ಕೋರ್. ಈ ಪೈಕಿ ಹಾರ್ದಿಕ್ ಎರಡು ಬಾರಿ 30 ಪ್ಲಸ್ ಸ್ಕೋರ್ ಮಾಡಿದ್ದಾರೆ.
7 ಬೌಂಡರಿ ಹಾಗೂ 3 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇದರೊಂದಿಗೆ 11 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಪಾಕಿಸ್ತಾನದ ವಿರುದ್ಧ ಹಾರ್ದಿಕ್ ಅವರ ಅತ್ಯುತ್ತಮ ಬೌಲಿಂಗ್ 8 ರನ್‌ಗಳಿಗೆ 3 ವಿಕೆಟ್‌ಗಳು.
ಭಾರತ ಮತ್ತು ಪಾಕಿಸ್ತಾನ ನಡುವೆ ಇದುವರೆಗೆ ಒಟ್ಟು 12 ಟಿ20 ಪಂದ್ಯಗಳು ನಡೆದಿವೆ. ಈ ಅವಧಿಯಲ್ಲಿ ಭಾರತ ಒಟ್ಟು 9 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ ಒಟ್ಟು 3 ಪಂದ್ಯಗಳನ್ನು ಗೆದ್ದಿದೆ. ಈ ಎರಡು ತಂಡಗಳ ನಡುವಿನ ಕಳೆದ 5 ಟಿ20 ಪಂದ್ಯಗಳ ಅಂಕಿಅಂಶಗಳನ್ನು ಗಮನಿಸಿದರೆ, ಭಾರತ 3 ರಲ್ಲಿ ಗೆದ್ದಿದ್ದರೆ, ಪಾಕಿಸ್ತಾನ 2 ಪಂದ್ಯಗಳನ್ನು ಗೆದ್ದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications