Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

T20 World Cup 2024: ಸೆಮಿಫೈನಲ್‌ನಲ್ಲಿ ಭಾರತಕ್ಕೆ ಇಂಗ್ಲೆಂಡ್ ಎದುರಾಳಿ; 2022ರ ಸೋಲಿಗೆ ಸೇಡು?

ಸೋಮವಾರ, ಜೂನ್ 25ರಂದು ಸೇಂಟ್ ಲೂಸಿಯಾದ ಡೇರೆನ್ ಸ್ಯಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ ಸೂಪರ್ 8ರ ರೋಚಕ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 24 ರನ್‌ಗಳ ಗೆಲುವು ಸಾಧಿಸಿದ ಭಾರತ ತಂಡ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿತು.

ಅಂತಿಮ 4ರ ಘಟ್ಟದ ಪಂದ್ಯದಲ್ಲಿ ಗುರುವಾರ, ಜೂನ್ 27ರಂದು ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಸೆಣಸಾಡಲಿದೆ.

T20 World Cup 2024 Team India to Face Defending Champions England in Semifinal 2

ಸೋಮವಾರದಂದು ವೆಸ್ಟ್ ಇಂಡೀಸ್ ವಿರುದ್ಧದ ದಕ್ಷಿಣ ಆಫ್ರಿಕಾ ತಂಡದ ರೋಚಕ ಗೆಲುವು ಅವರನ್ನು ಗ್ರೂಪ್ 2ರಲ್ಲಿ ಅಗ್ರಸ್ಥಾನಕ್ಕೆ ಏರಿಸಿತು. ಹೀಗಾಗಿ ಗುಂಪು 2ರಲ್ಲಿ ಎರಡನೇ ಸ್ಥಾನ ಪಡೆದ ಇಂಗ್ಲೆಂಡ್ ತಂಡವು ಗುಂಪು 1ರ ಅಗ್ರಸ್ಥಾನಿ ಭಾರತ ತಂಡವನ್ನು ಎದುರಿಸಲಿದೆ.

ಆಸ್ಟ್ರೇಲಿಯಾದಲ್ಲಿ ನಡೆದ 2022ರ ಟಿ20 ವಿಶ್ವಕಪ್ ಸೆಮಿಫೈನಲ್‌ನ ಸೋಲಿಗೆ ಈ ಬಾರಿ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ತಂಡದ ವಿರುದ್ಧ ಸೇಡು ತೀರಿಸಿಕೊಳ್ಳುವ ಅವಕಾಶವಿದೆ.

2024ರ ಟಿ20 ವಿಶ್ವಕಪ್ ಫೈನಲ್‌ಗೆ ಮುನ್ನಡೆಯುವ ಅವಕಾಶಕ್ಕಾಗಿ ಭಾರತ ಮೆಚ್ಚಿನ ತಂಡವಾಗಿದ್ದು, ಹಾಲಿ ಚಾಂಪಿಯನ್ ಇಂಗ್ಲೆಂಡ್‌ ತಂಡಕ್ಕೆ ಮುಖಭಂಗ ತಪ್ಪಿಸಿಕೊಳ್ಳಲು ಇದು ರೋಚಕ ಪಂದ್ಯವಾಗಿರಲಿದೆ.

2022ರ ಟಿ20 ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಭಾರತವನ್ನು ಸೋಲಿಸಿದ್ದ ಇಂಗ್ಲೆಂಡ್

ಆಸ್ಟ್ರೇಲಿಯಾದಲ್ಲಿ ನಡೆದ 2022ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ಮತ್ತು ಭಾರತ ತಂಡಗಳು ನವೆಂಬರ್ 10, 2022ರಂದು ಅಡಿಲೇಡ್ ಓವಲ್‌ನಲ್ಲಿ ಮುಖಾಮುಖಿಯಾಗಿದ್ದವು.

ಭಾರತ ನೀಡಿದ್ದ 169 ರನ್‌ಗಳ ಗುರಿಯನ್ನು ಕೇವಲ 16 ಓವರ್‌ಗಳಲ್ಲಿ ಮತ್ತು 10 ವಿಕೆಟ್‌ಗಳು ಉಳಿದಿರುವಂತೆ ಬೆನ್ನಟ್ಟಿದ ಇಂಗ್ಲೆಂಡ್ ಜಯಭೇರಿ ಬಾರಿಸಿತ್ತು. ನಾಯಕ ಜೋಸ್ ಬಟ್ಲರ್ ಮತ್ತು ಅಲೆಕ್ಸ್ ಹೇಲ್ಸ್ ಸ್ಪೋಟಕ ಬ್ಯಾಟಿಂಗ್ ಮಾಡಿದ್ದರು.

ಆ ಪಂದ್ಯದ ನಂತರ ಭಾರತ ತಂಡ ತಮ್ಮ ಟಿ20 ಬ್ಯಾಟಿಂಗ್ ವಿಧಾನವನ್ನು ಬದಲಾಯಿಸಿಕೊಂಡಿದೆ. ಜೂನ್ 27ರಂದು ಗಯಾನಾದಲ್ಲಿ ಪ್ರತೀಕಾರ ತೀರಿಸಿಕೊಳ್ಳಲು ಮತ್ತೊಂದು ಅವಕಾಶವನ್ನು ಪಡೆದಿದೆ.

ಗುಂಪು 2ರ ಅಗ್ರಸ್ಥಾನಿಯಾಗಿರುವ ದಕ್ಷಿಣ ಆಫ್ರಿಕಾ ತಂಡ ಮೊದಲ ಸೆಮಿಫೈನಲ್‌ನಲ್ಲಿ ಅಫ್ಘಾನಿಸ್ತಾನ ತಂಡವನ್ನು ಎದುರಿಸಲಿದೆ. ಬಾಂಗ್ಲಾದೇಶ ವಿರುದ್ಧ 8 ರನ್‌ಗಳ ರೋಚಕ ಗೆಲುವಿನ ನಂತರ ಆಸ್ಟ್ರೇಲಿಯಾ ತಂಡವನ್ನು ಹೊರಹಾಕಿತು. ಜೂನ್ 26ರಂದು ಟ್ರಿನಿಡಾಡ್‌ನಲ್ಲಿ ಮೊದಲ ಸೆಮಿಫೈನಲ್ ಪಂದ್ಯ ಭಾರತೀಯ ಕಾಲಮಾನ ಬೆಳಿಗ್ಗೆ 6 ಗಂಟೆಗೆ ನಡೆಯಲಿದೆ.

Story first published: Tuesday, June 25, 2024, 11:21 [IST]
Other articles published on Jun 25, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+