ಟಿ20 ವಿಶ್ವಕಪ್ 2024: ಭಾರತ ತಂಡದ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ; ದಿನಾಂಕ, ಸ್ಥಳ ಮತ್ತು ಸಮಯ
2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಗೆ ಕೇವಲ ಒಂದು ತಿಂಗಳು ಮಾತ್ರ ಬಾಕಿ ಉಳಿದಿದ್ದು, ಜಗತ್ತಿನಾದ್ಯಂತ ಕ್ರಿಕೆಟ್ ಪ್ರೇಮಿಗಳು ಮತ್ತೊಂದು ಕ್ರಿಕೆಟ್ ಹಬ್ಬಕ್ಕೆ ಕಾತರರಾಗಿದ್ದಾರೆ.
ಯುಎಸ್ಎ ಮತ್ತು ವೆಸ್ಟ್ ಇಂಡೀಸ್ ಸಹ-ಆತಿಥ್ಯ ವಹಿಸಿರುವ ಐಸಿಸಿ ಟಿ20 ಪಂದ್ಯಾವಳಿಯು ಜೂನ್ 2ರಂದು ಆರಂಭವಾಗಲಿದ್ದು, ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಜೂನ್ 5ರಂದು ಆಡಲಿದೆ.

ಮಂಗಳವಾರ, ಏಪ್ರಿಲ್ 30ರಂದು ಬಿಸಿಸಿಐ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ. ಇದರಲ್ಲಿ ಕೆಲವು ಹಿರಿಯ ಆಟಗಾರರಿಗೆ ಅವಕಾಶ ಕಲ್ಪಿಸಲು ಆಯ್ಕೆಗಾರರು ಕೆಎಲ್ ರಾಹುಲ್, ರಿಂಕು ಸಿಂಗ್, ರವಿ ಬಿಷ್ಣೋಯಿ ಅವರಂತಹ ಆಟಗಾರರನ್ನು ಕೈಬಿಟ್ಟಿದ್ದಕ್ಕಾಗಿ ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಕೋಪವನ್ನು ವ್ಯಕ್ತಪಡಿಸಿದ್ದಾರೆ.
ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದರೆ, ಹಾರ್ದಿಕ್ ಪಾಂಡ್ಯ ಉಪನಾಯಕನಾಗಿದ್ದಾರೆ. ಇನ್-ಫಾರ್ಮ್ ವಿರಾಟ್ ಕೊಹ್ಲಿ ಸಹ ಭಾರತ ತಂಡದಲ್ಲಿ ಆಯ್ಕೆಯಾಗಿದ್ದಾರೆ.
ಪ್ರಸ್ತುತ ಫಾರ್ಮ್‌ನಿಂದ ಹೊರಗಿರುವ ಹಾರ್ದಿಕ್ ಪಾಂಡ್ಯ ಅವರನ್ನು ಆಯ್ಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಆದರೆ ಟಿ20 ಪಂದ್ಯಗಳಲ್ಲಿ 170ಕ್ಕೂ ಹೆಚ್ಚು ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಮಾಡಿದ ರಿಂಕು ಸಿಂಗ್ ಅವರನ್ನು ಕಡೆಗಣಿಸಲಾಗಿದೆ.
ಸ್ಪಿನ್-ಬೌಲಿಂಗ್ ದಾಳಿಗೆ ಆಟಗಾರರನ್ನು ಬಿಸಿಸಿಐ ಆಯ್ಕೆಗಾರರು ಬಯಸಿದ್ದರಿಂದ ಯುಜ್ವೇಂದ್ರ ಚಹಾಲ್ ಕೂಡ ಟಿ20 ವಿಶ್ವಕಪ್ ತಂಡಕ್ಕೆ ಮರಳಿದ್ದಾರೆ.
ಭಾರತ ತಂಡವು ಜಸ್ಪ್ರೀತ್ ಬುಮ್ರಾ, ಅರ್ಶ್‌ದೀಪ್ ಸಿಂಗ್ ಮತ್ತು ಮೊಹಮ್ಮದ್ ಸಿರಾಜ್ ರೂಪದಲ್ಲಿ ಕೇವಲ 3 ಸ್ಪೆಷಲಿಸ್ಟ್ ವೇಗಿಗಳನ್ನು ಹೊಂದಿದ್ದರೆ, ನಾಲ್ಕು ಸ್ಪಿನ್ ಆಯ್ಕೆಗಳ ರೂಪದಲ್ಲಿ ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್ ಮತ್ತು ರವೀಂದ್ರ ಜಡೇಜಾ ಇದ್ದಾರೆ.
ಬಲಿಷ್ಠ ಬೌಲಿಂಗ್ ವಿಭಾಗವನ್ನು ಕಣಕ್ಕಿಳಿಸುವ ಭಾರತದ ಯೋಜನೆಯು 17 ವರ್ಷಗಳ ನಂತರ ಟಿ20 ವಿಶ್ವಕಪ್ ಪಂದ್ಯಾವಳಿಯನ್ನು ಗೆಲ್ಲಲು ಸಹಾಯ ಮಾಡಬಹುದೇ ಎಂದು ನೋಡಲು ಕುತೂಹಲಕಾರಿಯಾಗಿದೆ. ಕಳೆದ ಹತ್ತು ವರ್ಷಗಳಿಂದ ಭಾರತ ಒಂದೇ ಒಂದು ಐಸಿಸಿ ಟ್ರೋಫಿ ಗೆದ್ದಿಲ್ಲ ಎಂಬುದು ಗಮನಾರ್ಹ ಸಂಗತಿಯಾಗಿದೆ.

2024ರ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ವೇಳಾಪಟ್ಟಿ
- ಜೂನ್ 5 (ಬುಧವಾರ): ಭಾರತ vs ಐರ್ಲೆಂಡ್ ಪಂದ್ಯವು ನ್ಯೂಯಾರ್ಕ್‌ನಲ್ಲಿ ನಡೆಯಲಿದ್ದು, ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಪ್ರಾರಂಭವಾಗುತ್ತದೆ.
- ಜೂನ್ 9 (ಭಾನುವಾರ): ಭಾರತ vs ಪಾಕಿಸ್ತಾನ ಪಂದ್ಯವು ನ್ಯೂಯಾರ್ಕ್‌ನಲ್ಲಿ ನಡೆಯಲಿದ್ದು, ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಪ್ರಾರಂಭವಾಗುತ್ತದೆ.
- ಜೂನ್ 12 (ಬುಧವಾರ): ಭಾರತ vs ಯುಎಸ್ಎ ಪಂದ್ಯವು ನ್ಯೂಯಾರ್ಕ್‌ನಲ್ಲಿ ನಡೆಯಲಿದ್ದು, ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಪ್ರಾರಂಭವಾಗುತ್ತದೆ.
- ಜೂನ್ 15 (ಶನಿವಾರ): ಭಾರತ vs ಕೆನಡಾ ಪಂದ್ಯವು ಫ್ಲೋರಿಡಾದಲ್ಲಿ ನಡೆಯಲಿದ್ದು, ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಪ್ರಾರಂಭವಾಗುತ್ತದೆ.
ಇನ್ನು ಭಾರತ ತಂಡ ಸೂಪರ್ 8ಗೆ ಅರ್ಹತೆ ಪಡೆದರೆ, ತಮ್ಮ ಪಂದ್ಯಗಳನ್ನು ಜೂನ್ 20, ಜೂನ್ 22 ಮತ್ತು ಜೂನ್ 24ರಂದು ಆಡಲಿದೆ.
ಭಾರತ ತಂಡವು A1 ಆಗಿದೆ ಮತ್ತು ಗುಂಪು ಹಂತದಲ್ಲಿ ಯಾವ ಸ್ಥಾನದಲ್ಲಿ ಮುಗಿಸಿದರೂ, ಅವರ ಶ್ರೇಯಾಂಕವು ಬದಲಾಗುವುದಿಲ್ಲ. ಭಾರತ ಕೇವಲ ಸೂಪರ್ 8ಗೆ ಅರ್ಹತೆ ಪಡೆಯಬೇಕಾಗಿದೆ.
2024ರ ಟಿ20 ವಿಶ್ವಕಪ್‌ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಹಾಲ್, ಅರ್ಶ್‌ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್. ಸಿರಾಜ್.
ಮೀಸಲು ಆಟಗಾರು: ಶುಭ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್, ಅವೇಶ್ ಖಾನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications