T20 World Cup 2024: ಯುಎಸ್‌ಎ-ಕೆನಡಾ ಉದ್ಘಾಟನಾ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
ಜೂನ್ 2 ಭಾನುವಾರ, ಬಹುದಿನಗಳಿಂದ ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿದ್ದ ಐಸಿಸಿ 2024ರ ಟಿ 20 ವಿಶ್ವಕಪ್ ಆರಂಭವಾಗಿದೆ. ಮೊದಲ ಪಂದ್ಯದಲ್ಲಿ ಆತಿಥೇಯ ಯುಎಸ್ಎ ಮತ್ತು ಕೆನಡಾ ಮುಖಾಮಖಿಯಾಗಿವೆ.
ಅಮೆರಿಕಾದ ಡಲ್ಲಾಸ್‌ನ ಗ್ರ್ಯಾಂಡ್ ಪ್ರೈರೀ ಸ್ಟೇಡಿಯಂನಲ್ಲಿ ಅದ್ಧೂರಿಯಾಗಿ ಉದ್ಘಾಟನಾ ಪಂದ್ಯ ಆರಂಭವಾಗಿದೆ. ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ಮೆಗಾ ಟೂರ್ನಿ ಅಮೆರಿಕಾದಲ್ಲಿ ನಡೆಯುತ್ತಿದೆ.
ಮೊದಲು ಟಾಸ್ ಗೆದ್ದ ಯುಎಸ್‌ಎ ತಂಡದ ನಾಯಕ ಮೊನಾಂಕ್ ಪಟೇಲ್ ಅವರು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಸಾದ್ ಬಿನ್ ಜಾಫರ್ ಮುನ್ನೆಡೆಸುತ್ತಿರುವ ಕೆನಡಾ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಯುಎಸ್‌ಎ vs ಕೆನಡಾ ಆಡುವ 11ರ ಬಳಗ :
ಯುಎಸ್‌ಎ ತಂಡ : ಸ್ಟೀವನ್ ಟೇಲರ್, ಮೊನಾಂಕ್ ಪಟೇಲ್(ವಿ.ಕೀ ಮತ್ತು ನಾಯಕ), ಆಂಡ್ರೀಸ್ ಗೌಸ್, ಆರನ್ ಜೋನ್ಸ್, ನಿತೀಶ್ ಕುಮಾರ್, ಕೋರಿ ಆಂಡರ್ಸನ್, ಹರ್ಮೀತ್ ಸಿಂಗ್, ಶಾಡ್ಲಿ ವ್ಯಾನ್ ಶಾಲ್ಕ್‌ವಿಕ್, ಜಸ್ದೀಪ್ ಸಿಂಗ್, ಅಲಿ ಖಾನ್, ಸೌರಭ್ ನೇತ್ರವಲ್ಕರ್
ಕೆನಡಾ ತಂಡ : ಆರನ್ ಜಾನ್ಸನ್, ನವನೀತ್ ಧಲಿವಾಲ್, ಪರ್ಗತ್ ಸಿಂಗ್, ನಿಕೋಲಸ್ ಕಿರ್ಟನ್, ಶ್ರೇಯಸ್ ಮೊವ್ವಾ(ವಿ.ಕೀ), ದಿಲ್‌ಪ್ರೀತ್ ಸಿಂಗ್, ಸಾದ್ ಬಿನ್ ಜಾಫರ್(ನಾಯಕ), ನಿಖಿಲ್ ದತ್ತಾ, ದಿಲ್ಲನ್ ಹೇಲಿಗರ್, ಕಲೀಂ ಸನಾ, ಜೆರೆಮಿ ಗಾರ್ಡನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications