Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

T20 World Cup 2024: ಭಾರತ vs ಅಮೆರಿಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ

ಬುಧವಾರ, ಜೂನ್ 12ರಂದು ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಎ ಗುಂಪಿನ ಪಂದ್ಯದಲ್ಲಿ ಭಾರತ ತಂಡವು ಯುಎಸ್ಎ (ಅಮೆರಿಕ) ತಂಡದ ವಿರುದ್ಧ ಸೆಣಸಾಡುತ್ತಿದೆ.

ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವ ನಿರ್ಧಾರ ಮಾಡಿದರು. ಹೀಗಾಗಿ ಮೊನಾಂಕ್ ಪಟೇಲ್ ನಾಯಕತ್ವದ ಯುಎಸ್ಎ ತಂಡ ಮೊದಲು ಬೌಲಿಂಗ್ ಮಾಡಲಿದೆ.

T20 World Cup 2024 USA vs India Match Toss Report Playing 11 Details

ಭಾರತ ಮತ್ತು ಯುಎಸ್ಎ ತಂಡಗಳು ಪ್ರಸಕ್ತ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಉತ್ತಮ ಅಭಿಯಾನವನ್ನು ಹೊಂದಿವೆ. ಯುಎಸ್ಎ ಕ್ರಮವಾಗಿ ಪಾಕಿಸ್ತಾನ ಮತ್ತು ಕೆನಡಾ ತಂಡಗಳ ವಿರುದ್ಧ ಗೆಲುವು ಸಾಧಿಸಿದ್ದರೆ, ಭಾರತ ತಂಡವು ಐರ್ಲೆಂಡ್ ಮತ್ತು ಪಾಕಿಸ್ತಾನ ವಿರುದ್ಧ ಗೆಲುವು ಸಾಧಿಸಿದೆ.

ಒಂದು ಗೆಲುವು ಸೂಪರ್ 8ರ ಹಂತದಲ್ಲಿ ಭಾರತ ತಂಡದ ಸ್ಥಾನವನ್ನು ಖಚಿತಪಡಿಸುತ್ತದೆ ಮತ್ತು ಇದು ಯುಎಸ್ಎ ತಂಡಕ್ಕೂ ಅನ್ವಹಿಸುತ್ತದೆ. ಟಿ20 ವಿಶ್ವಕಪ್‌ಗೆ ಪದಾರ್ಪಣೆ ಮಾಡಿದ ಮುಂದಿನ ಸುತ್ತಿಗೆ ಪ್ರವೇಶಿಸಲು ಗೆಲುವಿನ ಹುಮ್ಮಸ್ಸಿನಲ್ಲಿದೆ. ಉಭಯ ತಂಡಗಳು ತಲಾ ನಾಲ್ಕು ಅಂಕಗಳೊಂದಿಗೆ ಪಂದ್ಯಾವಳಿಯಲ್ಲಿ ಅಜೇಯವಾಗಿವೆ.

T20 World Cup 2024 USA vs India Match Toss Report Playing 11 Details

ಆದಾಗ್ಯೂ, ಉತ್ತಮ ನೆಟ್ ರನ್ ರೇಟ್ ಆಧಾರದ ಮೇಲೆ ಭಾರತ ತಂಡ ಎ ಗುಂಪಿನಲ್ಲಿ ಅಗ್ರಸ್ಥಾನವನ್ನು ಹೊಂದಿದೆ. ಎ ಗುಂಪಿನಲ್ಲಿರುವ ಪಾಕಿಸ್ತಾನ ತಂಡ ಸೂಪರ್ ಎಂಟಕ್ಕೆ ಪ್ರವೇಶಿಸಲು ಭಾರತ ಮತ್ತು ಐರ್ಲೆಂಡ್ ತಂಡಗಳ ಗೆಲುವಿನ ಮೇಲೆ ಅವಲಂಬಿತವಾಗಿದೆ.

ಇದೇ ವೇಳೆ ಬುಧವಾರ ನಡೆಯುತ್ತಿರುವ ಅಮೆರಿಕ ಮತ್ತು ಭಾರತ ನಡುವಿನ ಪಂದ್ಯವು ಮಳೆಯಿಂದ ರದ್ದುಗೊಂಡರೂ, ಪಾಕಿಸ್ತಾನ ತಂಡ ಟೂರ್ನಿಯಿಂದ ಅಧಿಕೃತವಾಗಿ ಹೊರಬೀಳಲಿದೆ.

ಭಾರತ vs ಐರ್ಲೆಂಡ್ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ

ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ 2024ರ ಟಿ20 ವಿಶ್ವಕಪ್‌ನ ಸಂಪೂರ್ಣ ಪ್ರಸಾರ ಹಕ್ಕುಗಳನ್ನು ಹೊಂದಿದೆ. ಹೀಗಾಗಿ ಭಾರತ vs ಯುಎಸ್ಎ ಪಂದ್ಯವು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರವಾಗಲಿದ್ದರೆ, ಇಡೀ ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಲಭ್ಯವಿರುತ್ತದೆ.

ಭಾರತ vs ಯುಎಸ್ಎ ತಂಡಗಳ ಆಡುವ 11ರ ಬಳಗ

ಯುಎಸ್ಎ: ಸ್ಟೀವನ್ ಟೇಲರ್, ಶಯಾನ್ ಜಹಾಂಗೀರ್, ಆಂಡ್ರೀಸ್ ಗೌಸ್ (ವಿಕೆಟ್ ಕೀಪರ್), ಆರೋನ್ ಜೋನ್ಸ್ (ನಾಯಕ), ನಿತೀಶ್ ಕುಮಾರ್, ಕೋರಿ ಆಂಡರ್ಸನ್, ಹರ್ಮೀತ್ ಸಿಂಗ್, ಶಾಡ್ಲಿ ವ್ಯಾನ್ ಶಾಲ್ಕ್ವಿಕ್, ಜಸ್ದೀಪ್ ಸಿಂಗ್, ಸೌರಭ್ ನೇತ್ರವಳ್ಕರ್, ಅಲಿ ಖಾನ್.

ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಶ್‌ದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

Story first published: Wednesday, June 12, 2024, 19:37 [IST]
Other articles published on Jun 12, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+