T20 World Cup 2024: ಏಕೈಕ ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶ ಮಣಿಸಿದ ಭಾರತ; ವಿಶ್ವಕಪ್‌ಗೆ ಭರ್ಜರಿ ತಯಾರಿ
ಶನಿವಾರ, ಜೂನ್ 1ರಂದು ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ ತಮ್ಮ ಏಕೈಕ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶ ತಂಡವನ್ನು 62 ರನ್‌ಗಳಿಂದ ಸೋಲಿಸಿ, ವಿಶ್ವಕಪ್ ಮುಖ್ಯ ಟೂರ್ನಿಗೆ ಭರ್ಜರಿ ತಯಾರಿ ನಡೆಸಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ರಿಷಭ್ ಪಂತ್ ಅವರ ಅಮೋಘ ಅರ್ಧಶತಕ ಮತ್ತು ಹಾರ್ದಿಕ್ ಪಾಂಡ್ಯ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್‌ಗಳನ್ನು ಕಲೆಹಾಕಿತು.

183 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ತಂಡದ ಬ್ಯಾಟರ್‌ಗಳು ಭಾರತದ ಬೌಲರ್‌ಗಳ ಮಾರಕ ದಾಳಿಗೆ ಸಿಲುಕಿ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 120 ರನ್‌ಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು.
ಬಾಂಗ್ಲಾದೇಶ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಸೌಮ್ಯ ಸರ್ಕಾರ್ ಸೊನ್ನೆ ಸುತ್ತಿದರೆ, ಲಿಟ್ಟನ್ ದಾಸ್ ಕೇವಲ 6 ರನ್ ಗಳಿಸಿದರು. ನಾಯಕ ನಜ್ಮುಲ್ ಹೊಸೈನ್ ಶಾಂಟೋ ಡಕ್‌ಗೆ ಔಟಾದರು. ಆರಂಭಿಕ ತಂಝೀದ್ ಹಸನ್ 17 ರನ್ ಗಳಿಸಿದರೆ, ತೌಹೀದ್ ಹೃದೋಯ್ 13 ರನ್ ಗಳಿಸಿ ಔಟಾದರು.
ಅನುಭವಿ ಬ್ಯಾಟರ್ ಶಕಿಬ್ ಅಲ್ ಹಸನ್ 28 ರನ್ ಮತ್ತು ಮಹಮ್ಮದುಲ್ಲಾ 40 ರನ್ ಗಳಿಸಿ ತಂಡದ ಮೊತ್ತ 120ರ ಗಡಿ ಸಮೀಪಿಸಲು ಪ್ರಯತ್ನಿಸಿದರು. ಉಳಿದಂತೆ ಯಾವ ಬ್ಯಾಟರ್‌ಗಳು ಭಾರತೀಯ ಬೌಲಿಂಗ್ ದಾಳಿ ವಿರುದ್ಧ ಪ್ರತಿರೋಧ ಒಡ್ಡಲಿಲ್ಲ.
ಬೌಲಿಂಗ್‌ನಲ್ಲಿ ಭಾರತ ತಂಡದ ಪರ ಅರ್ಶ್‌ದೀಪ್ ಸಿಂಗ್ ಮತ್ತು ಶಿವಂ ದುಬೆ ತಲಾ 2 ವಿಕೆಟ್ ಕಬಳಿಸಿದರೆ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದು ಸಂಭ್ರಮಿಸಿದರು.

ಇದಕ್ಕೂ ಮುನ್ನ ಭಾರತ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಸಂಜು ಸ್ಯಾಮ್ಸನ್ ಮತ್ತು ರೋಹಿತ್ ಶರ್ಮಾ ಉತ್ತಮ ಆರಂಭ ನೀಡಲಿಲ್ಲ. ಸಂಜು ಸ್ಯಾಮ್ಸನ್ 6 ಎಸೆತಗಳಲ್ಲಿ ಕೇವಲ 1 ರನ್ ಗಳಿಸಿ ಔಟಾದರು.
ನಂತರ ಜೊತೆಯಾದ ನಾಯಕ ರೋಹಿತ್ ಶರ್ಮಾ ಮತ್ತು ರಿಷಭ್ ಪಂತ್ ತಂಡದ ಮೊತ್ತವನ್ನು ಹೆಚ್ಚಿಸಲು ಸಹಾಯ ಮಾಡಿದರು. ಈ ಜೋಡಿ ಎರಡನೇ ವಿಕೆಟ್‌ಗೆ 58 ರನ್‌ಗಳ ಜೊತೆಯಾಟ ನೀಡಿತು. ಈ ವೇಳೆ 23 ರನ್ ಗಳಿಸಿ ಆಡುತ್ತಿದ್ದ ರೋಹಿತ್ ಶರ್ಮಾ ವಿಕೆಟ್ ಒಪ್ಪಿಸಿದರು.
ನಂತರ ಬಂದ ಸೂರ್ಯಕುಮಾರ್ ಯಾದವ್ 18 ಎಸೆತಗಳಲ್ಲಿ 31 ರನ್ ಬಾರಿಸಿದರೆ, ರಿಷಭ್ ಪಂತ್ 32 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಮೇತ 53 ರನ್‌ಗಳ ಅರ್ಧಶತಕ ಗಳಿಸಿ ನಿವೃತ್ತಿಯಾಗಿ ಹೊರನಡೆದರು. ಇನ್ನು ಶಿವಂ ದುಬೆ 14 ರನ್ ಗಳಿಸಿದರು.
ಕೊನೆಯಲ್ಲಿ ಉಪನಾಯಕ ಹಾರ್ದಿಕ್ ಪಾಂಡ್ಯ 23 ಎಸೆತಗಳಲ್ಲಿ 2 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಮೂಲಕ ಅಜೇಯ 40 ರನ್ ಬಾರಿಸಿದರು ಮತ್ತು ರವೀಂದ್ರ ಜಡೇಜಾ ಅಜೇಯ 4 ರನ್ ಗಳಿಸಿದರು.
ಬೌಲಿಂಗ್‌ನಲ್ಲಿ ಬಾಂಗ್ಲಾದೇಶ ತಂಡದ ಪರ ಮೆಹೆದಿ ಹಸನ್, ಶೋರಿಫುಲ್ ಇಸ್ಲಾಂ, ಮಹಮ್ಮದುಲ್ಲಾ ಮತ್ತು ತನ್ವೀರ್ ಇಸ್ಲಾಂ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications