T20 World Cup 2024: ಟಿ20 ವಿಶ್ವಕಪ್ ಪಂದ್ಯಗಳನ್ನು ಟಿವಿ, ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬೇಕು?
2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯು ಭಾರತೀಯ ಕಾಲಮಾನ ಜೂನ್ 2ರ ಭಾನುವಾರದಂದು ಡಲ್ಲಾಸ್‌ನ ಗ್ರ್ಯಾಂಡ್ ಪ್ರೈರೀ ಸ್ಟೇಡಿಯಂನಲ್ಲಿ ಆತಿಥೇಯ ಯುಎಸ್ಎ ಮತ್ತು ಕೆನಡಾ ನಡುವಿನ ಉದ್ಘಾಟನಾ ಪಂದ್ಯದೊಂದಿಗೆ ಪ್ರಾರಂಭವಾಗಲಿದೆ.
ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಬುಧವಾರ, ಜೂನ್ 5ರಂದು ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ತಮ್ಮ ಟಿ20 ವಿಶ್ವಕಪ್ ಅಭಿಯಾನವನ್ನು ಪ್ರಾರಂಭಿಸಲಿದೆ.

ನಂತರ ಜೂನ್ 9ರ ಭಾನುವಾರದಂದು ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನದ ವಿರುದ್ಧ ಭಾರತ ತಂಡ ಹೈ-ವೋಲ್ಟೇಜ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಆ ಬಳಿಕ ಜೂನ್ 12 ಮತ್ತು 15ರಂದು ಕ್ರಮವಾಗಿ ಯುಎಸ್ಎ ಮತ್ತು ಕೆನಡಾ ವಿರುದ್ಧ ಭಾರತದ ಪಂದ್ಯಗಳು ನಡೆಯಲಿವೆ.
ಅಡಿಲೇಡ್ ಓವಲ್‌ನಲ್ಲಿ ನಡೆದ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ನ ವಿರುದ್ಧ 10 ವಿಕೆಟ್‌ಗಳಿಂದ ಸೋತು 2022ರ ಟಿ20 ವಿಶ್ವಕಪ್‌ನಿಂದ ಹೊರಬಂದ ನಂತರ, ಟೀಮ್ ಇಂಡಿಯಾ ಈ ಬಾರಿ ಆ ತಪ್ಪು ಮಾಡದಿರಲು ನಿರ್ಧರಿಸಿದೆ.

ಭಾರತ ತಂಡವು ಸೆಮಿಫೈನಲ್ ಮತ್ತು ಫೈನಲ್‌ಗಳಲ್ಲಿ ಆಡಿದೆ. ಆದರೆ 2007ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಪಡೆದ ವಿಜಯ ವೈಭವದ ನಂತರ ಮತ್ತೆ ಟ್ರೋಫಿ ಮೇಲೆ ಕೈ ಹಾಕಿಲ್ಲ. ಐಕಾನಿಕ್ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಕಳೆದ ಬಾರಿ ಫೈನಲ್‌ನಲ್ಲಿ ಪಾಕಿಸ್ತಾನ ತಂಡವನ್ನು ಸೋಲಿಸಿದ ನಂತರ, ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ಹಾಲಿ ಚಾಂಪಿಯನ್ ಆಗಿದೆ.
2024ರ ಟಿ20 ವಿಶ್ವಕಪ್ ಆವೃತ್ತಿಯ ಫೈನಲ್ ಪಂದ್ಯವು ಜೂನ್ 29ರಂದು ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿರುವ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆಯಲಿದೆ.
ವೆಸ್ಟ್ ಇಂಡೀಸ್ 2012 ಮತ್ತು 2016ರಲ್ಲಿ ಎರಡು ಬಾರಿ ಟಿ20 ವಿಶ್ವಕಪ್ ಪಂದ್ಯಾವಳಿಯನ್ನು ಗೆದ್ದ ಏಕೈಕ ತಂಡವಾಗಿ ಉಳಿದಿದೆ. ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ಇನ್ನೂ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆಲ್ಲದ ದೊಡ್ಡ ತಂಡಗಳಲ್ಲಿ ಸೇರಿಕೊಂಡಿವೆ.
2024ರ ಟಿ20 ವಿಶ್ವಕಪ್ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಯಾವಾಗ ವೀಕ್ಷಿಸಬೇಕು?
2024ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಸಂದರ್ಭದಲ್ಲಿ ಪಂದ್ಯಗಳು ಭಾರತೀಯ ಕಾಲಮಾನ ಬೆಳಿಗ್ಗೆ 6 ಘಂಟೆಗೆ, ರಾತ್ರಿ 8 ಘಂಟೆಗೆ, ರಾತ್ರಿ 9 ಘಂಟೆಗೆ, ಬೆಳಿಗ್ಗೆ 5 ಘಂಟೆಗೆ ಮತ್ತಯ ರಾತ್ರಿ 10:30ಕ್ಕೆ ಪ್ರಾರಂಭವಾಗಲಿವೆ.
2024ರ ಟಿ20 ವಿಶ್ವಕಪ್ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬೇಕು?
ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ 2024ರ ಟಿ20 ವಿಶ್ವಕಪ್ ಪಂದ್ಯಾವಳಿಯ ಪ್ರಸಾರದ ಹಕ್ಕುಗಳನ್ನು ಹೊಂದಿದೆ. ಟಿ20 ವಿಶ್ವಕಪ್ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ಲಭ್ಯವಿರುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications