T20 World Cup 2026 Final ಕಿವೀಸ್‌ಗೆ ಚೊಚ್ಚಲ ಪ್ರಶಸ್ತಿ ಗೆಲ್ಲಲು 256 ರನ್ ಗುರಿ ನೀಡಿದ ಭಾರತ
ಅಹಮದಾಬಾದ್: ಭರವಸೆಯ ಆರಂಭಿಕ ಆಟಗಾರರಾದ ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ ಹಾಗೂ ಇಶಾನ್ ಕಿಶನ್ ಅವರು ಬಾರಿಸಿದ ಅರ್ಧಶತಕದ ಬಲದಿಂದ ಟೀಮ್ ಇಂಡಿಯಾ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ 256 ರನ್‌ಗಳ ಗುರಿಯನ್ನು ನ್ಯೂಜಿಲೆಂಡ್ ತಂಡಕ್ಕೆ ನೀಡಿತು.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶವನ್ನು ಪಡೆದ ಟೀಮ್ ಇಂಡಿಯಾದ ಆರಂಭ ಭರ್ಜರಿಯಾಗಿತ್ತು. ನ್ಯೂಜಿಲೆಂಡ್ ತಂಡದ ನಾಯಕ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡುವ ನಿರ್ಧಾರವನ್ನು ಬೌಲರ್‌ಗಳು ಸಮರ್ಥಿಸಿಕೊಳ್ಳುವಲ್ಲಿ ವಿಫಲರಾದರು. ಟೀಮ್ ಇಂಡಿಯಾದ ಆರಂಭಿಕ ಆಟಗಾರರು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ತಂಡಕ್ಕೆ ಆಧಾರವಾದರು. ಆರಂಭದಲ್ಲಿ ಕೊಂಚ ತಾಳ್ಮೆಯಿಂದ ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾದ ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ ಜೋಡಿ ಪವರ್ ಪ್ಲೇನಲ್ಲಿ ಪವರ್ ಫುಲ್ ಬ್ಯಾಟಿಂಗ್ ನಡೆಸಿತು.

ಈ ಟೂರ್ನಿಯಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದ ಅಭಿಷೇಕ್ ಶರ್ಮಾ, ಫೈನಲ್ ಪಂದ್ಯದಲ್ಲಿ ತಮ್ಮ ಕ್ಷಮತೆಗೆ ತಕ್ಕ ಆಟವನ್ನು ಆಡಿದರು. ತಮ್ಮ ನ್ಯೂನತೆಯನ್ನು ಮೆಟ್ಟಿನಿಂತು ಬ್ಯಾಟ್ ಮಾಡಿದ ಅಭಿಷೇಕ್ ಆರ್ಭಟಿಸಿದರು. ಈ ಮೂಲಕ ತಮ್ಮ ಮೇಲೆ ಇದ್ದ ಟೀಕೆಗೆ ಅಭಿಷೇಕ್ ಮೈದಾನದಲ್ಲೇ ಉತ್ತರ ನೀಡಿದರು. ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಮಿಂಚಿದರು. ಭಾರತ ಪವರ್ ಪ್ಲೇನಲ್ಲಿ ವಿಕೆಟ್ ನಷ್ಟವಿಲ್ಲದೆ 90 ರನ್ ಸೇರಿಸಿತು.
ಟೀಮ್ ಇಂಡಿಯಾದ ಭರವಸೆಯ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಒತ್ತಡವನ್ನು ಮೆಟ್ಟಿನಿಂತರು. ಫೈನಲ್ ಪಂದ್ಯದಲ್ಲಿ ಅಭಿಷೇಕ್ ಶರ್ಮಾ 21 ಎಸೆತಗಳಲ್ಲಿ 6 ಬೌಂಡರಿ, 3 ಸಿಕ್ಸರ್ ಸಹಾಯದಿಂದ 52 ರನ್ ಬಾರಿಸಿ ಔಟ್ ಆದರು. ಈ ಹಂತದಲ್ಲಿ ಭಾರತ 7.1 ಓವರ್‌ಗಳಲ್ಲಿ 98 ರನ್ ಸೇರಿಸಿತು. ಟೀಮ್ ಇಂಡಿಯಾ 10 ಓವರ್‌ಗಳಲ್ಲಿ 1 ವಿಕೆಟ್‌ಗೆ 179 ರನ್ ಸೇರಿಸಿತು.
ಆರಂಭಿಕರಾದ ಸಂಜು ಸ್ಯಾಮ್ಸನ್ ಅಮೋಘ ಬ್ಯಾಟಿಂಗ್ ಮುಂದುವರೆಸಿದರು. ಸತತ ಮೂರು ಪಂದ್ಯಗಳಲ್ಲಿ ಕ್ಲಾಸಿಕ್ ಬ್ಯಾಟಿಂಗ್ ನಡೆಸಿದ ಸಂಜು ಸ್ಯಾಮ್ಸನ್ ಒತ್ತಡದಲ್ಲಿದ್ದ ತಂಡಕ್ಕೆ ಆಧಾರವಾದರು. ಇವರು 33 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ತಂಡದ ಮೊತ್ತವನ್ನು ಹಿಗ್ಗಿಸುತ್ತಾ ಸಾಗಿದರು.
ಎರಡನೇ ವಿಕೆಟ್‌ಗೆ ಶತಕದ ಜೊತೆಯಾಟ
ಅಭಿಷೇಕ್ ಶರ್ಮಾ ಔಟ್ ಆಗುತ್ತಿದ್ದಂತೆ ಕ್ರೀಸ್‌ಗೆ ಬಂದಿದ್ದ ಇಶಾನ್ ಕಿಶನ್ ಅವರು ಕ್ರೀಸ್‌ಗೆ ಬಂದರು. ಇವದೊಂಗೆ ಇನಿಂಗ್ಸ್ ಮುನ್ನಡೆಸುವ ಜವಾಬ್ದಾರಿಯನ್ನು ಆರಂಭಿಕ ಸಂಜು ಸ್ಯಾಮ್ಸನ್ ತಮ್ಮ ಮೇಲೆ ಹೊತ್ತುಕೊಂಡರು. ಈ ಜೋಡಿಯನ್ನು ಕಟ್ಟಿ ಹಾಕುವಲ್ಲಿ ನ್ಯೂಜಿಲೆಂಡ್ ಬೌಲರ್‌ಗಳು ವಿಫಲರಾದರು. ಈ ಅವಧಿಯಲ್ಲಿ ಇಶಾನ್, ಅಭಿಷೇಕ್ ರನ್ ವೇಗಕ್ಕೆ ಚುರುಕು ಮುಟ್ಟಿಸುವ ಕೆಲಸವನ್ನು ಮಾಡಿದರು. ಈ ಜೋಡಿ 48 ಎಸೆತಗಳಲ್ಲಿ 105 ರನ್ ಬಾರಿಸಿ ತಂಡಕ್ಕೆ ನೆರವಾದರು. ಈ ಅವಧಿಯಲ್ಲಿ ಸಂಜು ಸ್ಯಾಮ್ಸನ್ 46 ಎಸೆತಗಳಲ್ಲಿ 89 ರನ್ ಸೇರಿಸಿದರು. ಇವರ ಕ್ಲಾಸಿಕ್ ಇನಿಂಗ್ಸ್‌ನಲ್ಲಿ 5 ಬೌಂಡರಿ, 8 ಸಿಕ್ಸರ್‌ಗಳು ಸೇರಿವೆ.
ಒಂದೇ ಓವರ್‌ನಲ್ಲಿ 3 ವಿಕೆಟ್
16ನೇ ಓವರ್‌ನ್ನು ಬೌಲ್ ಮಾಡಲು ಜೇಮ್ಸ್ ನೀಶಮ್ ಮುಂದಾದರು. ಇವರು ಮೊದಲ ಎಸೆತದಲ್ಲಿ ಸಂಜು ಸ್ಯಾಮ್ಸನ್ ಅವರಿಗೆ ಔಟ್ ಮಾಡಿದರು. 15.5 ಓವರ್‌ಗಳಲ್ಲಿ ಇಶಾನ್ ಕಿಶನ್ ಅವರಿಗೆ ಖೆಡ್ಡಾ ತೋಡಿದರು. ಇಶಾನ್ ಕಿಶನ್ ಔಟ್ ಆಗುವ ಮುನ್ನ 25 ಎಸೆತಗಳಲ್ಲಿ 4 ಬೌಂಡರಿ, 4 ಸಿಕ್ಸರ್ ಸಹಾಯದಿಂದ 54 ರನ್ ಬಾರಿಸಿ ಔಟ್ ಆದರು. ನಾಯಕ ಸಂಜು ಸ್ಯಾಮ್ಸನ್ ಖಾತೆ ತೆರೆಯುವ ಮುನ್ನವೇ ಔಟ್ ಆದರು.
ಟೀಮ್ ಇಂಡಿಯಾದ ಭರವಸೆಯ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ 13 ಎಸೆತಗಳಲ್ಲಿ 18 ರನ್ ಬಾರಿಸಿ ಔಟ್ ಆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications