T20 World Cup 2026 Final IND vs NZ: ಇಂದು ಯಾರೇ ಗೆದ್ದರೂ ಇತಿಹಾಸ
ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಲಿದೆ. ಈ ಪಂದ್ಯವನ್ನು ವೀಕ್ಷಿಸಲು ಇಡೀ ಕ್ರಿಕೆಟ್ ಜಗತ್ತು ಕಾತುರದಿಂದ ಕಾಯುತ್ತಿದೆ. ಈ ಪಂದ್ಯದಲ್ಲಿ ಗೆಲ್ಲುವುದು ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಒಂದಂತೂ ನಿಶ್ಚಿತ ಇಂದು ನಡೆಯುವ ಫೈನಲ್ ಪಂದ್ಯದಲ್ಲಿ ಯಾರೇ ಗೆದ್ದರೂ ಇತಿಹಾಸ ನಿರ್ಮಾಣವಾಗುತ್ತದೆ. ಇದಕ್ಕೆ ಕಾರಣ ಏನು ಎಂಬ ಬಗ್ಗೆ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.
ಮೊದಲ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಕೋಲ್ಕತ್ತಾದಲ್ಲಿ 9 ವಿಕೆಟ್‌ಗಳಿಂದ ಮಣಿಸಿದ ನ್ಯೂಜಿಲೆಂಡ್ ಫೈನಲ್‌ಗೆ ಅರ್ಹತೆ ಪಡೆದಿತ್ತು. ಇನ್ನು ಮುಂಬೈನಲ್ಲಿ ನಡೆದಿದ್ದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ 253 ರನ್‌ಗಳನ್ನು ಕಲೆ ಹಾಕಿತು. ಈ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ಭರ್ಜರಿ ಪ್ರದರ್ಶನ ನೀಡಿತ್ತು. ಆದರೂ ಸಹ ಗೆಲುವು ಸಾಧಿಸಲು ಸಾಧ್ಯವಾಗಿರಲಿಲ್ಲ. ಈ ಪಂದ್ಯವನ್ನು ಭಾರತ, 7 ರನ್‌ಗಳಿಂದ ಗೆದ್ದುಕೊಂಡಿತ್ತು. ಈ ಮೂಲಕ ಭಾರತ ಪ್ರಶಸ್ತಿ ಸುತ್ತು ಪ್ರವೇಶಿಸಿದೆ. ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಪಡೆ ಇತಿಹಾಸ ನಿರ್ಮಿಸುವ ಕನಸಿನಲ್ಲಿದೆ.

ಒಟ್ಟಾರೆ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಬರೀ ಆರು ತಂಡಗಳು ಮಾತ್ರ ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿವೆ. ಈ ಸಾಲಿಗೆ ಸೇರಲು ನ್ಯೂಜಿಲೆಂಡ್ ಪ್ಲ್ಯಾನ್ ಮಾಡಿಕೊಂಡಿದೆ. ಒಂದು ವೇಳೆ ನ್ಯೂಜಿಲೆಂಡ್ ಭಾನುವಾರದ ಪಂದ್ಯದಲ್ಲಿ ಗೆಲುವು ದಾಖಲಿಸಿದಲ್ಲಿ ಚೊಚ್ಚಲ ಬಾರಿಗೆ ಟಿ20 ವಿಶ್ವಕಪ್ ಗೆದ್ದ ನೂತನ ದಾಖಲೆ ಬರೆಯಲಿದೆ.
ಇತ್ತೀಚಿನ ಐಸಿಸಿ ಟೂರ್ನಿಗಳಲ್ಲಿ ಭಾರತ ಅಮೋಘ ಪ್ರದರ್ಶನ ನೀಡಿದೆ. 2023 ರಿಂದ ಭಾರತ ಈ ವರೆಗೆ ಪ್ರಮುಖ ಐಸಿಸಿ ಈವೆಂಟ್‌ಗಳ ಫೈನಲ್‌ಗೆ ತಲುಪಿದೆ.ಇದೇ ಸಮಯದಲ್ಲಿ ಭಾರತ ಎರಡು ಬಾರಿ ಪ್ರಶಸ್ತಿಯನ್ನು ಗೆದ್ದಿದೆ. ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಭಾರತ 2024 ರ ಐಸಿಸಿ ಟಿ20 ವಿಶ್ವಕಪ್ ಅನ್ನು ಗೆದ್ದುಕೊಂಡಿತು. 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ನ್ಯೂಜಿಲೆಂಡ್ ಅನ್ನು ಸೋಲಿಸುವ ಮೂಲಕ ಅವರು ಮತ್ತೊಂದು ಐಸಿಸಿ ಟ್ರೋಫಿಯನ್ನು ಗೆದ್ದುಕೊಂಡಿತ್ತು. ಹೀಗಾಗಿ ಮತ್ತೊಂದು ಟ್ರೋಫಿಯ ಕನಸನ್ನು ಭಾರತ ಕಾಣುತ್ತಿದೆ.
ಯಾರೇ ಗೆದ್ದರೂ ಇತಿಹಾಸ
ಭಾನುವಾರ ನಡೆಯಲಿರುವ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ಮತ್ತೊಮ್ಮೆ ಇತಿಹಾಸ ಬರೆಯುವ ಅವಕಾಶವನ್ನು ಹೊಂದಿದೆ. ಭಾರತ ಈ ಮೊದಲು 2007, 2024ರಲ್ಲಿ ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು. ಭಾನುವಾರ ಭಾರತ ಟಿ20 ವಿಶ್ವಕಪ್‌ನಲ್ಲಿ ಗೆಲುವು ದಾಖಲಿಸಿದಲ್ಲಿ ಟೂರ್ನಿಯ ಚಾಂಪಿಯನ್ ಪಟ್ಟವನ್ನು ಮೂರನೇ ಬಾರಿಗೆ ಅಲಂಕರಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಳ್ಳಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications