Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

T20 World Cup: ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ದೊಡ್ಡ ದಾಖಲೆ

ಭಾರತ ಹಾಗೂ ಜಿಂಬಾಬ್ವೆ ನಡುವಣ ಪಂದ್ಯ ಟಿ20 ವಿಶ್ವಕಪ್ ಸೂಪರ್ 8 ಹಂತದ ಕುತೂಹಲ ಮೂಡಿಸಿತ್ತು. ಈ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ, ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿತು. ಟೀಮ್ ಇಂಡಿಯಾದ ಭರವಸೆಯ ಬ್ಯಾಟರ್‌ಗಳ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಸವಾಲಿನ ಮೊತ್ತವನ್ನು ಕಲೆ ಹಾಕಿತು. ಟಿ20 ವಿಶ್ವಕಪ್‌ನ ಸೂಪರ್ 8 ಹಂತದ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಒತ್ತಡದಲ್ಲಿ ಭಾರತ ಒತ್ತಡದ ಸನ್ನಿವೇಶದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನವನ್ನು ನೀಡಿ ದಾಖಲೆ ಬರೆಯಿತು. ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಗರಿಷ್ಠ ರನ್ ಕಲೆ ಹಾಕಿದ ಎರಡನೇ ತಂಡ ಎಂಬ ಹೆಗ್ಗಳಿಕೆ ತನ್ನದಾಗಿಸಿಕೊಂಡಿತು.

ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾದ ಅಭಿಷೇಕ್ ಶರ್ಮಾ ಅಬ್ಬರದ ಅರ್ಧಶತಕ ಬಾರಿಸಿ ಮಿಂಚಿದರು. ಇನ್ನು ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 256 ರನ್‌ ಕಲೆ ಹಾಕಿತು. ಈ ಮೂಲಕ ವಿಶ್ವ ಕಪ್ ಟಿ20 ಕ್ರಿಕೆಟ್‌ನಲ್ಲಿ ದೊಡ್ಡ ದಾಖಲೆ ಬರೆದರು. ಟೀಮ್ ಇಂಡಿಯಾ ವಿಶ್ವಕಪ್‌ ಇತಿಹಾಸದಲ್ಲಿ ದಾಖಲಿಸಿದ ಗರಿಷ್ಠ ಮೊತ್ತವಾಗಿದೆ. ಟೀಮ್ ಇಂಡಿಯಾದ ಭರವಸೆಯ ಬ್ಯಾಟರ್‌ಗಳ ಜವಾಬ್ದಾರಿಯುತ ಆಟದ ನೆರವಿನಿಂದ ಟೀಮ್ ಇಂಡಿಯಾ ಸವಾಲಿನ ಮೊತ್ತ ಕಲೆ ಹಾಕಿತು. ಈ ಮೂಲಕ ಟೀಮ್ ಇಂಡಿಯಾ ದೊಡ್ಡ ದಾಖಲೆ ಬರೆಯಿತು.

T20 World Cup

ಟಿ20 ವಿಶ್ವಕಪ್‌ನಲ್ಲಿ 250ಕ್ಕೂ ಹೆಚ್ಚು ರನ್‌ ಕಲೆ ಹಾಕಿದ ಮೂರನೇ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಮೊದಲು ಈ ಸಾಧನೆಯನ್ನು ಶ್ರೀಲಂಕಾ ಹಾಗೂ ವೆಸ್ಟ್‌ ಇಂಡೀಸ್ ತಂಡಗಳು ಮಾಡಿದ್ದವು. ಈಗ ಈ ಸಾಲಿಗೆ ಟೀಮ್ ಇಂಡಿಯಾ ಸೇರ್ಪಡೆಯಾಗಿದೆ. ಈ ಮೂಲಕ ಟೀಮ್ ಇಂಡಿಯಾ ಚುಟುಕು ವಿಶ್ವಕಪ್‌ನಲ್ಲಿ ಅತ್ಯಧಿಕ ರನ್‌ ಕಲೆ ಹಾಕಿದ ಎರಡನೇ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಶ್ರೀಲಂಕಾ ತಂಡ ಇದೆ. ಲಂಕಾ 2007ರಲ್ಲಿ ಕೀನ್ಯಾ ವಿರುದ್ಧ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 260 ರನ್‌ ಕಲೆ ಹಾಕಿತ್ತು.

ಟಿ20 ವಿಶ್ವಕಪ್‌ನಲ್ಲಿ ಅತ್ಯಧಿಕ ಸ್ಕೋರ್‌

ಕೀನ್ಯಾ ವಿರುದ್ಧ ಶ್ರೀಲಂಕಾ, 260ಕ್ಕೆ 6, 2007
ಜಿಂಬಾಬ್ವೆ ವಿರುದ್ಧ ಭಾರತ, 256ಕ್ಕೆ 4, 2026
ಜಿಂಬಾಬ್ವೆ ವಿರುದ್ಧ ವೆಸ್ಟ್‌ ಇಂಡೀಸ್‌, 254ಕ್ಕೆ 6, 2026
ಓಮನ್ ವಿರುದ್ಧ ಐರ್ಲೆಂಡ್‌, 235ಕ್ಕೆ 5, 2026
ದಕ್ಷಿಣ ಆಫ್ರಿಕಾ ವಿರುದ್ಧ ಇಂಗ್ಲೆಂಡ್‌, 230ಕ್ಕೆ 8, 2016
ಇಂಗ್ಲೆಂಡ್‌ ವಿರುದ್ಧ ದಕ್ಷಿಣ ಆಫ್ರಿಕಾ, 229ಕ್ಕೆ 4, 2016

ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ದಾಖಲೆ

ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ದೊಡ್ಡ ದಾಖಲೆ ಬರೆದಿದೆ. ಸೂರ್ಯ ಪಡೆ 19 ವರ್ಷಗಳ ಹಳೆಯ ದಾಖಲೆಯನ್ನು ಅಳಿಸಿ ಹಾಕಿದೆ. ಇದಕ್ಕೂ ಮೊದಲು ಟೀಮ್ ಇಂಡಿಯಾ 2007ರಲ್ಲಿ ಇಂಗ್ಲೆಂಡ್‌ ವಿರುದ್ಧ 4 ವಿಕೆಟ್‌ಗೆ 218 ರನ್‌ ಗಳಿಸಿತ್ತು. ಈ ದಾಖಲೆಯನ್ನು ಟೀಮ್ ಇಂಡಿಯಾ ಈಗ ಅಳಿಸಿ ಹಾಕಿದೆ.

T20 World Cup

ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಗರಿಷ್ಠ ಸ್ಕೋರ್

ಜಿಂಬಾಬ್ವೆ ವಿರುದ್ಧ, 256ಕ್ಕೆ 4, 2026
ಇಂಗ್ಲೆಂಡ್ ವಿರುದ್ಧ, 218ಕ್ಕೆ 4, 2007
ಅಫ್ಘಾನಿಸ್ತಾನ ವಿರುದ್ಧ, 210ಕ್ಕೆ 2, 2021
ನಮೀಬಿಯಾ ವಿರುದ್ಧ, 209ಕ್ಕೆ 9, 2026
ಆಸ್ಟ್ರೇಲಿಯಾ ವಿರುದ್ಧ, 205ಕ್ಕೆ 5, 2024

Story first published: Thursday, February 26, 2026, 21:55 [IST]
Other articles published on Feb 26, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+