ನವದೆಹಲಿ: ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಗೆಲುವಿನ ಅಭಿಯಾನವನ್ನು ಆರಂಭಿಸಿದೆ. ಯುಎಸ್‌ಎ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸಿ ಟೂರ್ನಿಯಲ್ಲಿ ಸತತ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ಕೀರ್ತಿ ಟೀಮ್ ಇಂಡಿಯಾ ಹೊಂದಿದೆ. ಈ ಜಯದ ಓಟದ ಸಂಖ್ಯೆಗೆ ಇನ್ನೊಂದು ಗೆಲುವು ದಾಖಲಿಸುವ ಉದ್ದೇಶದಿಂದ ಟೀಮ್ ಇಂಡಿಯಾ ಗುರುವಾರ ಕಣಕ್ಕೆ ಇಳಿಯಲಿದ್ದು, ನಮೀಬಿಯಾ ವಿರುದ್ಧ ಕಾದಾಟ ನಡೆಸಲಿದೆ. ಎರಡನೇ ಪಂದ್ಯದಲ್ಲಿ ಗೆಲುವು ದಾಖಲಿಸುವ ಇರಾದೆ ಸಹ ಭಾರತ ತಂಡದ್ದಾಗಿದೆ.
ಅರುಣ್ ಜೇಟ್ಲಿ ಮೈದಾನದಲ್ಲಿ ಟೀಮ್ ಇಂಡಿಯಾ, ನಮೀಬಿಯಾ ವಿರುದ್ಧ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವನ್ನು ಹೊಂದಿದೆ. ಆದರೆ ತಂಡಕ್ಕೆ ಗಾಯ ಬಹುವಾಗಿ ಕಾಡುತ್ತಿದೆ. ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಎರಡನೇ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆ ಇದೆ. ಇನ್ನು ಇಶಾನ್ ಕಿಶನ್ ಸಹ ಅಭ್ಯಾಸದ ವೇಳೆ ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಕ್ಯಾಂಪ್‌ನಲ್ಲಿ ಚಿಂತೆಯ ಗೆರೆಗಳು ಮೂಡಿವೆ.

ಟೀಮ್ ಇಂಡಿಯಾ, ನಮೀಬಿಯಾ ವಿರುದ್ಧ ಯಾವ ಗೇಮ್ ಪ್ಲ್ಯಾನ್ ಇಟ್ಟುಕೊಂಡು ಕಣಕ್ಕೆ ಇಳಿಯಲಿದೆ ಎಂಬುದೇ ಕುತೂಹಲ ಮೂಡಿಸಿದೆ. ಟೀಮ್ ಇಂಡಿಯಾ ತನ್ನ ಲೀಗ್ ಹಂತದ ಮುಂದಿನ ಪಂದ್ಯವನ್ನು ಕೊಲಂಬೊದಲ್ಲಿ ಆಡಲಿದೆ. ಈ ಪಿಚ್ ಸ್ಪಿನ್ ಬೌಲರ್‌ಗಳಿಗೆ ನೆರವು ನೀಡಲಿದೆ. ಹೀಗಾಗಿ ನಮೀಬಿಯಾ ವಿರುದ್ಧ ಮೂವರು ಸ್ಪಿನ್ ಬೌಲರ್‌ಗಳೊಂದಿಗೆ ಭಾರತ ಕಣಕ್ಕೆ ಇಳಿಯುತ್ತಾ ಎಂಬ ಪ್ರಶ್ನೆಗಳು ಮೂಡಿವೆ. ಭಾರತ, ನಮೀಬಿಯಾ ಪಂದ್ಯ ನಡೆಯುವುದು ಯಾವಾಗ, ಪ್ಲೇಯಿಂಗ್ ಇಲೆವೆನ್, ಪಿಚ್ ವರದಿಯ ಸಂಪೂರ್ಣ ಮಾಹಿತಿ ಇಲ್ಲಿದೆ.
ದೆಹಲಿಯ ಅರುಣ್ ಜೇಟ್ಲಿ ಮೈದಾನ ಸಾಮಾನ್ಯವಾಗಿ ಬ್ಯಾಟ್ಸ್‌ಮನ್‌ಗಳಿಗೆ ಸಾಕಷ್ಟು ನೆರವು ನೀಡುತ್ತದೆ. ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುತ್ತದೆ. ಈ ಮೈದಾನದಲ್ಲಿ ಬೌಂಡರಿ ಲೈನ್ ಚಿಕ್ಕದಾಗಿದ್ದು, ಬೌಂಡರಿ, ಸಿಕ್ಸರ್ ಸುರಿಮಳೆ ಸುರಿಸಬಹುದು. ಸ್ಪಿನ್ ಬೌಲರ್‌ಗಳು ಸಹ ಮಹತ್ವದ ಪಾತ್ರ ವಹಿಸಲಿದ್ದಾರೆ. ಈ ಪಿಚ್‌ನಲ್ಲಿ ಚೆಂಡು ಸಾಕಷ್ಟು ತಿರುಗುತ್ತಿದೆ.
ದೆಹಲಿಯ ಮೈದಾನದಲ್ಲಿ ಒಟ್ಟು 15 ಪಂದ್ಯ ನಡೆದಿದೆ. ಮೊದಲು ಬ್ಯಾಟ್ ಮಾಡಿದ ತಂಡ 5 ಬಾರಿ ಜಯ ಸಾಧಿಸಿದರೆ, ಚೇಸ್ ಮಾಡಿದ ತಂಡ 10 ಬಾರಿ ಗೆಲುವು ದಾಖಲಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ಟಾಸ್ ಗೆದ್ದ ತಂಡ ಬೌಲಿಂಗ್ ಆಯ್ಕೆಯನ್ನು ಮಾಡಬಹುದು.
ಅಭಿಷೇಕ್ ಶರ್ಮಾ/ಸಂಜು ಸ್ಯಾಮ್ಸನ್, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ/ಮೊಹಮ್ಮದ್ ಸಿರಾಜ್, ವರುಣ್ ಚಕ್ರವರ್ತಿ.
ಲೌರೆನ್ ಸ್ಟೀನ್‌ಕ್ಯಾಂಪ್, ಜಾನ್ ಫ್ರೈಲಿಂಕ್, ಜಾನ್ ನಿಕೋಲ್ ಲೋಫ್ಟಿ-ಈಟನ್, ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಜೆಜೆ ಸ್ಮಿತ್, ಝೇನ್ ಗ್ರೀನ್ (ವಿಕೆಟ್ ಕೀಪರ್), ಡಿಲನ್ ಲೀಚರ್, ವಿಲ್ಲೆಮ್ ಮೈಬರ್ಗ್, ರೂಬೆನ್ ಟ್ರಂಪೆಲ್ಮನ್, ಬರ್ನಾರ್ಡ್ ಶೋಲ್ಟ್ಜ್, ಬೆನ್ ಶಿಕೊಂಗೊ.
ಟಿ20 ವಿಶ್ವಕಪ್‌ನಲ್ಲಿ ಭಾರತ ಹಾಗೂ ನಮೀಬಿಯಾ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು. ಅಲ್ಲದೆ ಆನ್‌ಲೈನ್‌ನಲ್ಲಿ ಜಿಯೋಹಾಟ್‌ಸ್ಟಾರ್ ನಲ್ಲಿ ನೋಡಬಹುದಾಗಿದೆ.
ಭಾರತ ಹಾಗೂ ನಮೀಬಿಯಾ ನಡುವಣ ಲೀಗ್ ಹಂತದ ಪಂದ್ಯ ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯ 7 ಗಂಟೆಗೆ ಆರಂಭವಾದರೆ, ಪಂದ್ಯಕ್ಕೂ ಅರ್ಧಗಂಟೆಗೂ ಮುನ್ನ ಟಾಸ್ ನಡೆಯಲಿದೆ.