T20 World Cup ವಿಜೇತರಿಗೆ ಸಿಗುವ ಬಹುಮಾನ ಮೊತ್ತ ಎಷ್ಟು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್
ಟಿ20 ವಿಶ್ವಕಪ್ 2026ರ ಚಾಂಪಿಯನ್ ಯಾರು ಎಂಬ ಪ್ರಶ್ನೆಗೆ ಭಾನುವಾರ ಉತ್ತರ ಸಿಗಲಿದೆ. ನಿರೀಕ್ಷೆಯಂತೆ ಭಾರತ ಈ ಬಾರಿಯೂ ಫೈನಲ್ ಪ್ರವೇಶಿಸಿದೆ. ಫೈನಲ್ ಪಂದ್ಯದಲ್ಲಿ ಭಾರತ, ನ್ಯೂಜಿಲೆಂಡ್ ಸವಾಲು ಎದುರಿಸಲಿದೆ. ಟಿ20 ವಿಶ್ವಕಪ್ ಫೈನಲ್ ಅಹಮದಾಬಾದ್‌ನಲ್ಲಿ ನಡೆಯಲಿದ್ದು, ಎಲ್ಲರ ಗಮನ ಸೆಳೆದಿದೆ.
ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ನ್ಯೂಜಿಲೆಂಡ್ ಏಕಪಕ್ಷೀಯ ಗೆಲುವು ದಾಖಲಿಸಿತ್ತು. ದಕ್ಷಿಣ ಆಫ್ರಿಕಾ ನೀಡಿದ್ದ 170 ರನ್‌ಗಳ ಗುರಿಯನ್ನು ನ್ಯೂಜಿಲೆಂಡ್ ಕೇವಲ 12.5 ಓವರ್‌ಗಳಲ್ಲಿ 1 ವಿಕೆಟ್ ಕಳೆದುಕೊಂಡು ಮುಟ್ಟಿ ಬೀಗಿತ್ತು. ಈ ವೇಳೆ ಆರಂಭಿಕ ಆಟಗಾರ ಫಿನ್ ಅಲೆನ್ ಶತಕ ಬಾರಿಸಿ ತಂಡಕ್ಕೆ ಆಧಾರವಾದರು. ಈ ಮೂಲಕ ನ್ಯೂಜಿಲೆಂಡ್ ಫೈನಲ್ ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.

ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತ 253 ರನ್ ಕಲೆ ಹಾಕಿತು. ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ಮತ್ತೊಮ್ಮೆ ಜವಾಬ್ದಾರಿಯುತ ಇನಿಂಗ್ಸ್ ಕಟ್ಟಿದರೆ, ಆಲ್‌ರೌಂಡರ್ ಶಿವಂ ದುಬೆ ಹಾಗೂ ಹಾರ್ದಿಕ್ ಪಾಂಡ್ಯ ತಂಡದ ಮೊತ್ತ ಹಿಗ್ಗಿಸುವಲ್ಲಿ ಶ್ರಮಿಸಿದರು. ಇಂಗ್ಲೆಂಡ್ ಪರ ಜಾಕಬ್ ಬೆಥೆಲ್ ಏಕಾಂಗಿ ಹೋರಾಟ ನಡೆಸಿ ಶತಕ ಸಿಡಿಸಿದರು. ಭಾರತ 7 ರನ್‌ಗಳಿಂದ ಗೆದ್ದು ಫೈನಲ್ ಪ್ರವೇಶಿಸಿತು. ಈಗ ಫೈನಲ್ ವಿಜೇತರು ಮತ್ತು ರನ್ನರ್-ಅಪ್ ಮತ್ತು ಸೆಮಿಫೈನಲಿಸ್ಟ್‌ಗಳಿಗೆ ನೀಡಲಾಗುವ ಹಣದ ಮೊತ್ತದ ಬಗ್ಗೆ ಮಾಹಿತಿ ಇಲ್ಲಿದೆ.
ಈ ಬಾರಿ ಭಾರತ ಹಾಗೂ ಶ್ರೀಲಂಕಾದಲ್ಲಿ ಆಯೋಜಿಸಲಾದ ಟಿ20 ವಿಶ್ವಕಪ್‌ನಲ್ಲಿ ಒಟ್ಟು 20 ತಂಡಗಳು ಭಾಗವಹಿಸಿದ್ದವು. ಈ ತಂಡಗಳನ್ನು ನಾಲ್ಕು ಗುಂಪುಗಳಲ್ಲಿ ವಿಂಗಡಿಸಲಾಗಿತ್ತು. ಪ್ರತಿ ಗುಂಪಿನಲ್ಲಿ ಅಗ್ರ ಎರಡು ಸ್ಥಾನ ಪಡೆದ ತಂಡಗಳು ಸೂಪರ್ 8 ಹಂತದ ಪಂದ್ಯದಲ್ಲಿ ಕಾದಾಟ ನಡೆಸಿದವು. ಈ ಹಂತದಲ್ಲೂ ಎರಡು ಗುಂಪುಗಳನ್ನು ಮಾಡಲಾಗಿತ್ತು. ಅಲ್ಲದೆ ಪ್ರತಿ ತಂಡವೂ ಸಹ ತಲಾ ಮೂರು ಪಂದ್ಯಗಳನ್ನು ಆಡಿದವು. ಈ ವೇಳೆ ಅಗ್ರ ಎರಡು ತಂಡಗಳು ಸೆಮಿಫೈನಲ್ ಹಂತವನ್ನು ಪ್ರವೇಶಿಸದವು. ಎರಡು ಸೆಮಿಫೈನಲ್ ಪಂದ್ಯದಲ್ಲಿ ವಿಜೇತರು ಭಾನುವಾರ ಪ್ರಶಸ್ತಿಗಾಗಿ ಕಾದಾಟವನ್ನು ನಡೆಸಲಿದ್ದಾರೆ.
ವಿಜೇತರಿಗೆ ಸಿಗುವ ಬಹುಮಾನ ಮೊತ್ತ ಎಷ್ಟು?
ಭಾರತ 2024ರಲ್ಲಿ ಟಿ20 ವಿಶ್ವಕಪ್ ಚಾಂಪಿಯನ್ ಆದಾಗ 20.4 ಕೋಟಿ ರೂಪಾಯಿ ಬಹುಮಾನ ಮೊತ್ತವನ್ನು ಐಸಿಸಿ ನೀಡಿತ್ತು. ಈ ಬಾರಿ ಇದರಲ್ಲೂ ಹೆಚ್ಚಳವಾಗಿದ್ದು, ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ತಂಡ 27 ಕೋಟಿ ರೂಪಾಯಿಗಿಂತ ಹೆಚ್ಚು ಪಡೆಯುತ್ತದೆ ಎಂದು ತಿಳಿದುಬಂದಿದೆ.
ರನ್ನರ್ ಅಪ್ ತಂಡ ಎಷ್ಟು ಮೊತ್ತವನ್ನು ಪಡೆಯುತ್ತದೆ?
ಫೈನಲ್‌ನಲ್ಲಿ ಸೋಲು ಕಂಡ ತಂಡ 14.65 ಕೋಟಿ ರೂಪಾಯಿ ಪಡೆಯಲಿದೆ.
ಸೆಮಿಫೈನಲ್‌ನಲ್ಲಿ ಸೋತ ತಂಡಗಳಿಗೆ ಸಿಗುವ ಹಣ ಎಷ್ಟು?
ಸೆಮಿಫೈನಲ್‌ನಲ್ಲಿ ಟೂರ್ನಿಗೆ ಗುಡ್ ಬೈ ಹೇಳಿದ ತಂಡಗಳಿಗೆ 7.24 ಕೋಟಿ ರೂ. ನೀಡಲಾಗುತ್ತದೆ. ಇದಲ್ಲದೆ, 5 ರಿಂದ 12 ನೇ ಸ್ಥಾನದಲ್ಲಿರುವ ತಂಡಗಳು ₹3.48 ಕೋಟಿ ನೀಡಲಿದೆ. ಇದು ತಾತ್ಕಾಲಿಕ ಮೊತ್ತವಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications