T20 World Cup : ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ: ಭಾರತ ತಂಡದಲ್ಲಿ ಬದಲಾವಣೆ ಇಲ್ಲ
ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯ ಗುರುವಾರ ಮುಂಬೈನ ವಾಂಖೆಡೆ ಅಂಗಳದಲ್ಲಿ ನಡೆಯುತ್ತಿದೆ. ಈ ಪಂದ್ಯ ಉಭಯ ತಂಡಗಳಿಗೂ ಮಹತ್ವದಾಗಿದೆ. ಈಗಾಗಲೇ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ನ್ಯೂಜಿಲೆಂಡ್ ಫೈನಲ್‌ಗೆ ಪ್ರವೇಶ ಪಡೆದಿದೆ. ಪ್ರಶಸ್ತಿ ಸುತ್ತು ಪ್ರವೇಶಿಸುವ ಇನ್ನೊಂದು ತಂಡ ಯಾವುದು ಎಂಬ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ. ಉಭಯ ತಂಡಗಳ ನಡುವಣ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಈಗಾಗಲೇ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಮೂರನೇ ಬಾರಿ ಮುಖಾಮುಖಿಯಾಗಲಿದ್ದಾರೆ. ಉಭಯ ತಂಡಗಳು ಈಗಾಗಲೇ ಟಿ20 ವಿಶ್ವಕಪ್‌ನಲ್ಲಿ 5 ಬಾರಿ ಕಾದಾಟ ನಡೆಸಿದ್ದವು. ಈ ವೇಳೆ ಭಾರತ ಮೂರು ಪಂದ್ಯದಲ್ಲಿ ಜಯ ಸಾಧಿಸಿತ್ತು. ನಾಲ್ಕನೇ ಗೆಲುವಿನ ಹುಡುಕಾಟದಲ್ಲಿ ಭಾರತ ತಂಡ ಗುರುವಾರ ಕಣಕ್ಕೆ ಇಳಿಯಲಿದೆ. ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ.

ಸೂರ್ಯಾ ಹೇಳಿದ್ದೇನು?
ನಾವು ಸಹ ಟಾಸ್ ಗೆದ್ದಿದ್ದರೆ ಮೊದಲು ಬ್ಯಾಟಿಂಗ್ ಮಾಡಲು ಬಯಸಿದ್ದೇವು. ಮೈದಾನದಲ್ಲಿ ಗಾಳಿ ಬೀಸುತ್ತಿದ್ದು, ಇಬ್ಬನಿ ಬೀಳುವ ಸಾಧ್ಯತೆ ಇಲ್ಲ. ನಾವು ನಮ್ಮ ತಪ್ಪುಗಳನ್ನು ತಿದ್ದಿಕೊಂಡಿದ್ದೇವೆ. ಈ ಬಾರಿ ನಮ್ಮ ಆಟದ ಶೈಲಿ ಭಿನ್ನವಾಗಿರಲಿದೆ. ಇದು ಪಂದ್ಯಕ್ಕೆ ಅತ್ಯುತ್ತಮವಾದ ವಿಕೆಟ್ ಆಗಿದೆ ಎಂದು ತಿಳಿಸಿದ್ದಾರೆ.
ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷ್‌ದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ
ಇಂಗ್ಲೆಂಡ್ ತಂಡ: ಫಿಲ್ ಸಾಲ್ಟ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಜೇಕಬ್ ಬೆಥೆಲ್, ಹ್ಯಾರಿ ಬ್ರೂಕ್ (ನಾಯಕ), ಟಾಮ್ ಬ್ಯಾಂಟನ್, ಸ್ಯಾಮ್ ಕರನ್, ವಿಲ್ ಜಾಕ್ಸ್, ಜೇಮೀ ಓವರ್ಟನ್, ಲಿಯಾಮ್ ಡಾಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications