T20 World Cup: ಶಿವಂ ದುಬೆ ಆಲ್‌ರೌಂಡರ್ ಆಟ: ಭಾರತಕ್ಕೆ 17 ರನ್ ಜಯ
ಅಹಮದಾಬಾದ್: ಭರವಸೆಯ ಆಲ್‌ರೌಂಡರ್ ಶಿವಂ ದುಬೆ ಅವರ ಭರ್ಜರಿ ಆಟದ ನೆರವಿನಿಂದ ಟೀಮ್ ಇಂಡಿಯಾ ಟಿ20 ವಿಶ್ವಕಪ್‌ನ ಎ ಗುಂಪಿನ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ 17 ರನ್‌ಗಳಿಂದ ನೆದರ್‌ಲ್ಯಾಂಡ್ಸ್ ತಂಡವನ್ನು ಮಣಿಸಿ, ತನ್ನ ಅಜೇಯ ಓಟವನ್ನು ಮುಂದುವರಿಸಿದೆ. ಈ ಗೆಲುವಿನ ಮೂಲಕ ಭಾರತ ಎ ಗುಂಪಿನಲ್ಲಿ ಅಗ್ರಸ್ಥಾನದೊಂದಿಗೆ ಸೂಪರ್ 8 ಹಂತಕ್ಕೆ ಪ್ರವೇಶ ಪಡೆದಿದೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾದ ಆರಂಭ ಕಳಪೆಯಾಗಿತ್ತು. ಟಿ20 ಕ್ರಿಕೆಟ್‌ನ ನಂಬರ್ 1 ಬ್ಯಾಟರ್ ಅಭಿಷೇಕ್ ಶರ್ಮಾ ಟಿ20 ವಿಶ್ವಕಪ್‌ನಲ್ಲಿ ಮೂರನೇ ಬಾರಿಗೆ ಸೊನ್ನೆ ಸುತ್ತಿದರು. ಇವರು ಮೆಗಾ ಈವೆಂಟ್‌ನಲ್ಲಿ ಮೊದಲ ರನ್ ಹುಡುಕಾಟದಲ್ಲಿದ್ದಾರೆ. ಇಶಾನ್ ಕಿಶನ್ ಹ್ಯಾಟ್ರಿಕ್ ಅರ್ಧಶತಕ ಬಾರಿಸುವ ಕನಸಿಗೆ ಆರ್ಯನ್ ದತ್ ಬ್ರೇಕ್ ಹಾಕಿದರು. ಇಶಾನ್ 18 ರನ್‌ಗಳಿಗೆ ಆಟ ಮುಗಿಸಿದರು.

ತಿಲಕ್ ವರ್ಮಾ 31 ರನ್‌ಗಳ ಇನಿಂಗ್ಸ್‌ನ್ನು ಬಿಗ್ ಇನಿಂಗ್ಸ್ ಆಗಿ ಕನ್ವರ್ಟ್ ಮಾಡುವಲ್ಲಿ ವಿಫಲರಾದರು. ಟೀಮ್ ಇಂಡಿಯಾದ ನಾಯಕ ಸೂರ್ಯಕುಮಾರ್ ಯಾದವ್ ಸಹ ಬ್ಯಾಟಿಂಗ್ ಪಿಚ್‌ನಲ್ಲಿ ದೊಡ್ಡ ಮೊತ್ತವನ್ನು ಕಲೆ ಹಾಕಲಿಲ್ಲ. ಇವರು 2 ಬೌಂಡರಿ, 1 ಸಿಕ್ಸರ್ ಸಹಾಯದಿಂದ 34 ರನ್ ಬಾರಿಸಿ ಔಟ್ ಆದರು.
ಶಿವಂ ದುಬೆ ಅರ್ಧಶತಕ
5ನೇ ವಿಕೆಟ್‌ಗೆ ಆಲ್‌ರೌಂಡರ್‌ಗಳಾದ ಶಿವಂ ದುಬೆ ಹಾಗೂ ಹಾರ್ದಿಕ್ ಪಾಂಡ್ಯ ಜೋಡಿ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ 35 ಎಸೆತಗಳಲ್ಲಿ 76 ರನ್ ಸೇರಿಸಿತು. ಶಿವಂ ದುಬೆ 212ರ ಸ್ಟ್ರೈಕ್ ರೇಟ್‌ನಲ್ಲಿ 66 ರನ್ ಸೇರಿಸಿದರು. ಈ ವೇಳೆ 4 ಬೌಂಡರಿ, 6 ಸಿಕ್ಸರ್ ಸಿಡಿಸಿದರು. ಹಾರ್ದಿಕ್ ಪಾಂಡ್ಯ 30 ರನ್ ಬಾರಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು. ಅಂತಿಮವಾಗಿ ಭಾರತ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 193 ರನ್ ಸೇರಿಸಿ ಅಬ್ಬರಿಸಿತು.

ವರುಣ್‌ಗೆ 3 ವಿಕೆಟ್
ನೆದರ್‌ಲ್ಯಾಂಡ್ಸ್ ತಂಡದ ಆರಂಭ ಸಾಧಾರಣವಾಗಿತ್ತು. ತಂಡದ ಆರಂಭಿಕರಾದ ಮೈಕೆಲ್ ಲೆವಿಟ್ (24) ಹಾಗೂ ಮ್ಯಾಕ್ಸ್ ಒ'ಡೌಡ್ (20) ಮೊದಲ ವಿಕೆಟ್‌ಗೆ 35 ರನ್‌ಗಳ ಜೊತೆಯಾಟವನ್ನು ನೀಡಿದರು. ಮೂರನೇ ವಿಕೆಟ್‌ಗೆ ಬಾಸ್ ಡಿ ಲೀಡೆ ಹಾಗೂ ಕಾಲಿನ್ ಅಕರ್ಮನ್ (23) ಜೋಡಿ 43 ರನ್ ಸೇರಿಸಿ ಸೋಲಿನ ಅಂತರವನ್ನು ಕಡಿಮೆ ಮಾಡಿತು. ಬಾಸ್ ಡಿ ಲೀಡೆ 3 ಬೌಂಡರಿ, 1 ಸಿಕ್ಸರ್ ಸಹಾಯದಿಂದ 33 ರನ್ ಸಿಡಿಸಿದರು. ಉಳಿದಂತೆ ನಾಯಕ ಸ್ಕಾಟ್ ಎಡ್ವರ್ಡ್ಸ್ (15), ಝಾಕ್ ಲಯನ್-ಕ್ಯಾಚೆಟ್ (26), ನೋಹ್ ಕ್ರೋಸ್ (25) ರನ್ ಕಲೆ ಹಾಕುವಲ್ಲಿ ವಿಫಲರಾದರು. ಅಂತಿಮವಾಗಿ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 176 ರನ್ ಸೇರಿಸಿ ಸೋಲು ಕಂಡಿತು. ಭಾರತದ ಪರ ವರುಣ್ ಚಕ್ರವರ್ತಿ 3, ಶಿವಂ ದುಬೆ 2 ವಿಕೆಟ್ ಉರುಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications