ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ರೋಚಕ ಕದನದಲ್ಲಿ ಅಫ್ಘಾನಿಸ್ತಾನ ವಿರುದ್ಧ ಗೆಲುವು ಸಾಧಿಸಿದ ಪಾಕಿಸ್ತಾನ

T20 world cup: 24th Match, Pakistan won by 5 wickets against Afghanistan: Highlights

ಅಫ್ಘಾನಿಸ್ತಾನ ಹಾಗೂ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಮೇಲುಗೈ ಸಾಧಿಸಿದ ಪಾಕಿಸ್ತಾನ ಭರ್ಜರಿಯಾಗಿ ಗೆದ್ದು ಬೀಗಿದೆ. ರೋಚಕ ಹಂತಕ್ಕೆ ತಲುಪಿದ ಪಂದ್ಯದ 19ನೇ ಓವರ್‌ನಲ್ಲಿ ಆಸಿಫ್ ಅಲಿ ನಾಲ್ಕು ಸಿಕ್ಸರ್ ಸಿಡಿಸುವ ಮೂಲಕ ಇನ್ನೂ ಒಂದು ಓವರ್ ಉಳಿದಿರುವಂತೆಯೇ ಪಾಕಿಸ್ತಾನದ ಗೆಲುವನ್ನು ಸಾರಿದರು. ಅಫ್ಘಾನಿಸ್ತಾನ ಅದ್ಭುತ ಪ್ರತಿರೋಧ ಒಡ್ಡುವಲ್ಲಿ ಯಶಸ್ವಿಯಾಗಿದೆ.

ಅಫ್ಘಾನಿಸ್ತಾನ ನೀಡಿದ 148 ರನ್‌ಗಳ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡ ಕೂಡ ಆರಂಭಿಕ ಆಘಾತವನ್ನು ಅನುಭವಿಸಿತು. 12 ರನ್‌ಗಳಿದ್ದಾಗ ಮೊಹಮ್ಮದ್ ರಿಜ್ವಾನ್ ವಿಕೆಟ್ ಕಳೆದುಕೊಂಡಿತು. ಆದರೆ 2ನೇ ವಿಕೆಟ್‌ಗೆ ಬಾಬರ್ ಅಜಂ ಹಾಗೂ ಫಕರ್ ಜಮಾನ್ 63 ರನ್‌ಗಳ ಜೊತೆಯಾಟವನ್ನು ನೀಡಿದರು. ಅದಾದ ನಂತರ 97 ರನ್‌ಗಳಿಸಿದ್ದಾಗ ಮೊಹಮ್ಮದ್ ಹಫೀಜ್ ವಿಕೆಟ್ ಕಳೆದುಕೊಂಡರು. ನಂತರ ಅರ್ಥ ಶತಕ ಗಳಿಸಿದ್ದ ನಾಯಕ ಬಾಬರ್ ಅಜಂ ಕೂಡ ರಶೀದ್‌ಗೆ ವಿಕೆಟ್ ಒಪ್ಪಿಸಿದರು. ಬಳಿಕ ಅನುಭವಿ ಶೋಯೆಬ್ ಮಲಿಕ್ ನವೀನ್ ಉಲ್ ಹಕ್ ಎಸೆತಕ್ಕೆ ಔಟಾದರು.

ಆರ್‌ಸಿಬಿ ಅಲ್ಲ ಮುಂಬೈ ಇಂಡಿಯನ್ಸ್‌ಗೆ ರಾಹುಲ್?; ಅನುಮಾನ ಸೃಷ್ಟಿಸಿದ ಕೆಎಲ್ ರಾಹುಲ್‌ರ ಈ ನಡೆ!ಆರ್‌ಸಿಬಿ ಅಲ್ಲ ಮುಂಬೈ ಇಂಡಿಯನ್ಸ್‌ಗೆ ರಾಹುಲ್?; ಅನುಮಾನ ಸೃಷ್ಟಿಸಿದ ಕೆಎಲ್ ರಾಹುಲ್‌ರ ಈ ನಡೆ!

ಈ ಮೂಲಕ ಪಾಕಿಸ್ತಾನ 124 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು. ಅಂತಿಮ 12 ಎಸೆತಗಳಲ್ಲಿ ಅಫ್ಘಾನಿಸ್ತಾನ ತಂಡಕ್ಕೆ 24 ರನ್‌ಗಳ ಅವಶ್ಯಕತೆಯಿತ್ತು. ಕರೀಮ್ ಜನತ್ ಎಸೆದ ಈ 19ನೇ ಓವರ್‌ಅನ್ನು ಆಸಿಫ್ ಅಲಿ ಎದುರಿಸಿದರು. ಈ ಓವರ್‌ನಲ್ಲಿ ಆಸಿಫ್ ಅಲಿ ನಾಲ್ಕು ಭರ್ಜರಿ ಸಿಕ್ಸರ್ ಸಿಡಿಸುವ ಮೂಲಕ ಪಾಕಿಸ್ತಾನಕ್ಕೆ ಗೆಲುವನ್ನು ತಂದಿತ್ತರು. ರೋಚಕ ಪಂದ್ಯದಲ್ಲಿ ಪಾಕಿಸ್ತಾನ 5 ವಿಕೆಟ್‌ಗಳಿಂದ ಗೆದ್ದು ಬೀಗಿದೆ.

ಇನ್ನು ಇದಕ್ಕೂ ಮುನ್ನ ಪಂದ್ಯದ ಟಾಸ್ ಗೆದ್ದ ಅಫ್ಘಾನಿಸ್ತಾನ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ ಅಫ್ಘಾನಿಸ್ತಾನದ ಆರಂಭಿಕರು ನಾಯಕನ ನಿರ್ಧಾರವನ್ನು ಸಮರ್ಥಿಸುವ ಪ್ರದರ್ಶನ ನೀಡಲು ವಿಫಲವಾದರು. 7 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡ ಅಫ್ಘಾನಿಸ್ತಾನ 13 ರನ್‌ಗಳಿಸಿದ್ದಾಗ ಇಬ್ಬರು ಆರಂಭಿಕರನ್ನು ಕೂಡ ಕಳೆದುಕೊಂಡಿತು. ನಂತರ ಅಸ್ಘರ್ ಅಫ್ಘನ್ ಹಾಗೂ ಗರ್ಬಾಜ್ ಕೂಡ ಹೆಚ್ಚಿನ ರನ್‌ಗಳ ಕೊಡುಗೆ ನೀಡಲು ವಿಫಲವಾದರು. ಈ ಸಂದರ್ಭದಲ್ಲಿ ಅಫ್ಘಾನಿಸ್ತಾನ 39 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು.

ನಂತರ ಬ್ಯಾಟಿಂಗ್‌ಗೆ ಇಳಿದ ಕರೀಮ್ ಜನತ್ 15 ರನ್ ಹಾಗೂ ನಜೀಬುಲ್ಲಾ 22 ರನ್‌ಗಳ ಕೊಡುಗೆ ನೀಡಿದರು. ನಂತರ 7ನೇ ವಿಕೆಟ್‌ಗೆ ಜೊತೆಯಾನ ನಾಯಕ ಮೊಹಮ್ಮದ್ ನಬಿ ಹಾಗೂ ಗುಲ್ಬದಿನ್ ನೈಬ್ ಜೋಡಿ ಅಫ್ಘಾನಿಸ್ತಾನ ತಂಡ ಗೌರವಯುತ ಮೊತ್ತ ಪೇರಿಸಲು ಕಾರಣವಾದರು. ಈ ಜೋಡಿ 43 ಎಸೆತಗಳಲ್ಲಿ 71 ರನ್‌ಗಳ ಅದ್ಭುತ ಜೊತೆಯಾಟವನ್ನು ನೀಡುವಲ್ಲಿ ಯಶಸ್ವಿಯಾಯಿತು. ಈ ಮೂಲಕ ಅಫ್ಘಾನಿಸ್ತಾನ ತಂಡ 6 ವಿಕೆಟ್ ಕಳೆದುಕೊಂಡು 147 ರನ್‌ ಗಳಿಸಲು ಶಕ್ತವಾಯಿತು. ನಾಯಕ ನಬಿ ಹಾಗೂ ನೈಬ್ ಇಬ್ಬರೂ ತಲಾ 35 ರನ್‌ಗಳ ಕೊಡುಗೆ ನೀಡಿದರು. ಅದರಲ್ಲೂ ಗುಲ್ಬದಿನ್ ನೈಬ್ 25 ಎಸೆತಗಳಲ್ಲಿ 35 ರನ್ ಬಾರಿಸಿ ಮಿಂಚಿದರು.

ಪಾಕಿಸ್ತಾನದ ಪರವಾಗಿ ಬೌಲಿಂಗ್‌ನಲ್ಲಿ ಇಮದ್ ವಾಸಿಮ್ 2 ವಿಕೆಟ್ ಪಡೆದು ಮಿಂಚಿದರೆ ಶಾಹೀನ್ ಅಫ್ರಿದಿ, ಇಮ್ದ್ ವಾಸಿಮ್, ಹ್ಯಾರಿಸ್ ರವೂಫ್, ಹಸನ್ ಅಲಿ ಹಾಗೂ ಶದಬ್ ಖಾನ್ ತಲಾ 1 ವಿಕೆಟ್ ಪಡೆದುಕೊಂಡಿದ್ದಾರೆ.

ಪಾಕಿಸ್ತಾನ ಪ್ಲೇಯಿಂಗ್ XI : ಮೊಹಮ್ಮದ್ ರಿಜ್ವಾನ್(ವಿಕೆಟ್ ಕೀಪರ್), ಬಾಬರ್ ಅಜಮ್(ನಾಯಕ), ಫಖರ್ ಜಮಾನ್, ಮೊಹಮ್ಮದ್ ಹಫೀಜ್, ಶೋಯೆಬ್ ಮಲಿಕ್, ಆಸಿಫ್ ಅಲಿ, ಇಮಾದ್ ವಾಸಿಂ, ಶಾದಾಬ್ ಖಾನ್, ಹಸನ್ ಅಲಿ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ
ಬೆಂಚ್: ಮೊಹಮ್ಮದ್ ನವಾಜ್, ಹೈದರ್ ಅಲಿ, ಸರ್ಫರಾಜ್ ಅಹ್ಮದ್, ಮೊಹಮ್ಮದ್ ವಾಸಿಂ ಜೂನಿಯರ್

ಅಫ್ಘಾನಿಸ್ತಾನ ಪ್ಲೇಯಿಂಗ್ XI : ಹಜರತುಲ್ಲಾ ಝಜೈ, ಮೊಹಮ್ಮದ್ ಶಹಜಾದ್ (ವಿಕೆಟ್ ಕೀಪರ್), ರಹಮಾನುಲ್ಲಾ ಗುರ್ಬಾಜ್, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ (ನಾಯಕ), ಅಸ್ಗರ್ ಅಫ್ಘಾನ್, ಗುಲ್ಬದಿನ್ ನೈಬ್, ರಶೀದ್ ಖಾನ್, ಕರೀಮ್ ಜನತ್, ನವೀನ್-ಉಲ್-ಹಕ್, ಮುಜೀಬ್ ಉರ್ ರಹ್ಮಾನ್

ಬೆಂಚ್: ಹಶ್ಮತುಲ್ಲಾ ಶಾಹಿದಿ, ಉಸ್ಮಾನ್ ಘನಿ, ಫರೀದ್ ಅಹ್ಮದ್, ಹಮೀದ್ ಹಸನ್

Story first published: Saturday, October 30, 2021, 9:58 [IST]
Other articles published on Oct 30, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X