ಟಿ20 ವಿಶ್ವಕಪ್: 2ನೇ ಪಂದ್ಯ, ಬಾಂಗ್ಲಾದೇಶ vs ಸ್ಕಾಟ್ಲೆಂಟ್, ಟಾಸ್ ವರದಿ, ಆಡುವ ಬಳಗ, Live ಸ್ಕೋರ್

ಟಿ20 ವಿಶ್ವಕಪ್‌ನ ಅರ್ಹತಾ ಸುತ್ತಿನ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶ ಹಾಗೂ ಸ್ಕಾಟ್ಲೆಂಟ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಬಾಂಗ್ಲಾದೇಶ ತಂಡ ಎದುರಾಳಿ ಸ್ಕಾಟ್ಲೆಂಡ್ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.
ಟಿ20 ವಿಶ್ವಕಪ್‌ಗೆ ಮುನ್ನ ತವರಿನಲ್ಲಿ ನಡೆದ ಸರಣಿಯಲ್ಲಿ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ನಂತಾ ತಂಡಗಳ ವಿರುದ್ಧ ಐತಿಹಾಸಿಕ ಸರಣಿ ಗೆಲುವು ಸಾಧಿಸಿ ಆತ್ಮವಿಶ್ವಾಸದಿಂದ ಬಂದಿದ್ದ ಬಾಂಗ್ಲಾದೇಶ ವಿಶ್ವಕಪ್‌ನ ಅರ್ಹತಾ ಸುತ್ತಿಗೂ ಮುನ್ನ ನಡೆದ ಅಭ್ಯಾಸ ಪಂದ್ಯಗಳಲ್ಲಿ ಸತತ ಎರಡು ಸೋಲು ಕಂಡಿದೆ. ಶ್ರೀಲಂಕಾ ವಿರುದ್ಧ ಮೊದಲ ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶ ಮೊದಲಿಗೆ ಬ್ಯಾಟಿಂಗ್ ನಡೆಸಿ ನಿಗದಿತ 20 ಓವರ್‌ಗಳಲ್ಲಿ 147-7 ವಿಕೆಟ್ ಕಳೆದುಕೊಂಡಿತ್ತು, ಇದನ್ನು ಬೆನ್ನಟ್ಟಿದ ಶ್ರೀಲಂಕಾ ತಂಡ ಇನ್ನೂ ಏಳು ಎಸೆತಗಳು ಬಾಕಿಯಿರುವಂತೆಯೇ ಗೆದ್ದು ಬೀಗಿತ್ತು.
ಇನ್ನು ಐರ್ಲೆಂಡ್ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ನಡೆಸಿದ ಐರ್ಲೆಂಡ್ ತಂಡ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 177 ರನ್‌ಗಳನ್ನು ಗಳಿಸಿತ್ತು. ಈ ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಬಾಂಗ್ಲಾದೇಶ 144 ರನ್‌ಗಳಿಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿತು. ಈ ಮೂಲಕ ಎರಡು ಅಭ್ಯಾಸ ಪಂದ್ಯಗಳಲ್ಲಿಯೂ ಬಾಂಗ್ಲಾದೇಶ ಸೋಲು ಕಂಡಿದೆ. ಮತ್ತೊಂದೆಡೆ ಸ್ಕಾಟ್ಲೆಂಡ್ ತಂಡ ಎರಡು ಅಭ್ಯಾಸ ಪಂದ್ಯಗಳಲ್ಲಿಯೂ ಗೆಲುವು ಸಾಧಿಸಿದೆ. ಮೊದಲ ಅಭ್ಯಾಸ ಪಂದ್ಯದಲ್ಲಿ ಸ್ಕಾಟ್ಲೆಂಡ್ ನದರ್ಲೆಂಡ್ಸ್ ವಿರುದ್ಧ ಗೆಲುವು ಸಾಧಿಸಿದ್ದರೆ ಎರಡನೇ ಪಂದ್ಯದಲ್ಲಿ ನಮೀಬಿಯಾ ವಿರುದ್ಧ ಗೆಲುವು ಸಾಧಿಸಿದೆ.
Live ಸ್ಕೋರ್ ಮಾಹಿತಿ:
ಬಾಂಗ್ಲಾದೇಶ ಆಡುವ ಬಳಗ: ಲಿಟನ್ ದಾಸ್, ಸೌಮ್ಯ ಸರ್ಕಾರ್, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್, ಮಹ್ಮದುಲ್ಲಾ (ನಾಯಕ), ಅಫೀಫ್ ಹುಸೇನ್, ನೂರುಲ್ ಹಸನ್ (ವಿಕೆಟ್ ಕೀಪರ್), ಮಹೇದಿ ಹಸನ್, ಮೊಹಮ್ಮದ್ ಸೈಫುದ್ದೀನ್, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರೆಹಮಾನ್
ಬೆಂಚ್: ಮೊಹಮ್ಮದ್ ನೈಮ್, ನಸುಮ್ ಅಹ್ಮದ್, ಶೊರಿಫುಲ್ ಇಸ್ಲಾಂ, ಶಮೀಮ್ ಹೊಸೇನ್
ಸ್ಕಾಟ್ಲೆಂಡ್ ಆಡುವ ಬಳಗ: ಜಾರ್ಜ್ ಮುನ್ಸೆ, ಕೈಲ್ ಕೊಯೆಟ್ಜರ್ (ನಾಯಕ), ಮ್ಯಾಥ್ಯೂ ಕ್ರಾಸ್ (ವಿಕೆಟ್ ಕೀಪರ್), ರಿಚಿ ಬೆರಿಂಗ್ಟನ್, ಕ್ಯಾಲಮ್ ಮ್ಯಾಕ್ಲಿಯೋಡ್, ಮೈಕೆಲ್ ಲೀಸ್ಕ್, ಕ್ರಿಸ್ ಗ್ರೀವ್ಸ್, ಮಾರ್ಕ್ ವ್ಯಾಟ್, ಜೋಶ್ ಡೇವಿ, ಸಫ್ಯಾನ್ ಷರೀಫ್, ಬ್ರಾಡ್ಲಿ ವೀಲ್
ಬೆಂಚ್: ಡೈಲನ್ ಬಡ್ಜ್, ಕ್ರೇಗ್ ವ್ಯಾಲೇಸ್, ಅಲಾಸ್ಡೇರ್ ಇವಾನ್ಸ್, ಹಮ್ಜಾ ತಾಹಿರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications