For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: 2ನೇ ಸೆಮಿಫೈನಲ್, ಪಾಕಿಸ್ತಾನ vs ಆಸ್ಟ್ರೇಲಿಯಾ, ಪ್ಲೇಯಿಂಗ್ XI, Live ಸ್ಕೋರ್

T20 world cup: 2nd Semi Final Match, Pakistan vs Australia, Live score and Playing XI

ಟಿ20 ವಿಶ್ವಕಪ್‌ನ ಎರಡನೇ ಸೆಮಿ ಫೈನಲ್ ಪಂದ್ಯ ಇಂದು ನಡೆಯುತ್ತಿದ್ದು ಈ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ತಂಡ ಮೊದಲಿಗೆ ಗುರಿ ನಿಗದು ಪಡಿಸುವ ಸವಾಲು ಸ್ವೀಕರಿಸಿದೆ.

ಈ ನಿರ್ಣಾಯಕ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ಎರಡು ತಂಡಗಳು ಕೂಡ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿದಿದೆ. ಎರಡು ತಂಡಗಳು ಕೂಡ ಫೈನಲ್ ಪಂದ್ಯದ ಮೇಲೆ ಕಣ್ಣಿಟ್ಟಿದ್ದು ಅದು ಸಾಧ್ಯವಾಗಬೇಕಾದರೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಭಾನುವಾರ ನ್ಯೂಜಿಲೆಂಡ್ ವಿರುದ್ಧ‍ ಫೈನಲ್ ಪಂದ್ಯದಲ್ಲಿ ಸೆಣೆಸಾಡಲಿರುವ ತಂಡ ಯಾವುದು ಎಂಬ ಪ್ರಶ್ನೆಗೆ ಕೆಲವೇ ಗಂಟೆಗಳಲ್ಲಿ ಉತ್ತರ ದೊರೆಯಲಿದೆ.

Live ಸ್ಕೋರ್‌ಕಾರ್ಡ್ ಹೀಗಿದೆ

1
51707

ಇನ್ನು ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ನಾಯಕ ಆರೋನ್ ಫಿಂಚ್ ಟಾಸ್ ಗೆದ್ದಿರುವುದು ಆಸಿಸ್ ತಂಡಕ್ಕೆ ದೊಡ್ಡ ಬಲ ದೊರೆತಂತಾಗಿದೆ. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿರುವ ಕಾರಣ ಈ ಮೈದಾನದಲ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿದ ತಂಡ ಗೆಲುವು ಸಾಧಿಸಿದ ಅತ್ಯುತ್ತಮ ದಾಖಲೆಯಿದೆ. ಈ ಹಿಂದಿನ 16 ಪಂದ್ಯಗಳ ಪೈಕಿ 15 ಪಂದ್ಯಗಳಲ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿದ ತಂಡ ಗೆದ್ದಿದ್ದರೆ ಮೊದಲು ಬ್ಯಾಟಿಂಗ್ ಮಾಡಿದ ತಂಡ ಕೇವಲ ಒಂದು ಬಾರಿ ಮಾತ್ರ ಗೆಲುವು ಸಾಧಿಸಿದೆ. ಆದರೆ ಪಾಕಿಸ್ತಾನ ತಂಡ ದುಬೈ ಅಂಗಳದಲ್ಲಿ ಅತ್ಯುತ್ತಮ ದಾಖಲೆ ಹೊಂದಿದೆ ಎಂಬುದು ಕೂಡ ಮರೆಯುವಂತಿಲ್ಲ.

ರೋಚಕ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಪಾಕಿಸ್ತಾನದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಅಜೇಯವಾಗಿದ್ದ ಪಾಕಿಸ್ತಾನ ತಂಡಕ್ಕೆ ಸೆಮಿಫೈನಲ್‌ನಲ್ಲಿ ಸೋಲಿನ ರುಚಿ ತೋರಿಸಿದ ಆಸ್ಟ್ರೇಲಿಯಾ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಈ ಮೂಲಕ ಚೊಚ್ಚಲ ಬಾರಿಗೆ ವಿಶ್ವಕಪ್ ಎತ್ತಿ ಹಿಡಿಯಲು ಒಂದೇ ಹೆಜ್ಜೆ ಬಾಕಿಯಿದೆ.

ಈ ಬಾರಿಯ ವಿಶ್ವಕಪ್‌ನಲ್ಲಿ ಆರಂಭದಿಂದಲೂ ಅದ್ಭುತ ಪ್ರದರ್ಶನದೊಂದಿಗೆ ಸತತ ಗೆಲುವು ಸಾಧಿಸುತ್ತಾ ಮುನ್ನುಗ್ಗಿದ್ದ ಪಾಕಿಸ್ತಾನ ಅದೇ ಆತ್ಮ ವಿಶ್ವಾಸದೊಂದಿಗೆ ಸೆಮಿಫೈನಲ್‌ಗೇರಿತ್ತು. ಆದರೆ ಪಾಕಿಸ್ತಾನದ ಗೆಲುವಿನ ಓಟಕ್ಕೆ ಆಸ್ಟ್ರೇಲಿಯಾ ತಡೆ ಹಾಕಿದೆ. ಸಾಕಷ್ಟು ರೋಚಕವಾಗಿ ನಡೆದ ಈ ಕದನದಲ್ಲಿ ಅಂತಿಮವಾಗಿ ಗೆಲುವಿನ ನಗು ಆಸ್ಟ್ರೇಲಿಯಾ ತಂಡದ ಪಾಲಾಗಿದೆ. ಮ್ಯಾಥ್ಯೂ ವೇಡ್, ಮಾರ್ಕಸ್ ಸ್ಟೋಯ್ನಿಸ್ ಹಾಗೂ ಡೇವಿಡ್ ವಾರ್ನರ್ ಈ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿದ್ದರು. ಬೌಲಿಂಗ್‌ನಲ್ಲಿ ಮಿಚೆಲ್ ಸ್ಟಾರ್ಕ್ ಹಾಗೂ ಆಡಂ ಜಂಪಾ ಪ್ರದರ್ಶನ ಕೂಡ ಆಸ್ಟ್ರೇಲಿಯಾ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದ್ದು ಮರೆಯುವಂತಿಲ್ಲ.

ಪಾಕಿಸ್ತಾನ ಪ್ಲೇಯಿಂಗ್ XI : ಮೊಹಮ್ಮದ್ ರಿಜ್ವಾನ್(ವಿಕೆಟ್ ಕೀಪರ್), ಬಾಬರ್ ಅಜಮ್(ನಾಯಕ), ಫಖರ್ ಜಮಾನ್, ಮೊಹಮ್ಮದ್ ಹಫೀಜ್, ಶೋಯೆಬ್ ಮಲಿಕ್, ಆಸಿಫ್ ಅಲಿ, ಶಾದಾಬ್ ಖಾನ್, ಇಮಾದ್ ವಾಸಿಂ, ಹಸನ್ ಅಲಿ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ

ಬೆಂಚ್: ಮೊಹಮ್ಮದ್ ನವಾಜ್, ಹೈದರ್ ಅಲಿ, ಮೊಹಮ್ಮದ್ ವಾಸಿಂ ಜೂನಿಯರ್, ಸರ್ಫರಾಜ್ ಅಹ್ಮದ್

ಆಸ್ಟ್ರೇಲಿಯಾ ಪ್ಲೇಯಿಂಗ್ XI : ಡೇವಿಡ್ ವಾರ್ನರ್, ಆರನ್ ಫಿಂಚ್ (ನಾಯಕ), ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
ಬೆಂಚ್: ಕೇನ್ ರಿಚರ್ಡ್ಸನ್, ಆಷ್ಟನ್ ಅಗರ್, ಮಿಚೆಲ್ ಸ್ವೆಪ್ಸನ್, ಜೋಶ್ ಇಂಗ್ಲಿಸ್

David Warner ಹೊಡೆದ 6 ಈಗ ಎಲ್ಲೆಡೆ ವೈರಲ್ | Oneindia Kannada

Story first published: Friday, November 12, 2021, 0:30 [IST]
Other articles published on Nov 12, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+