For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್ 2021: ಆಸ್ಟ್ರೇಲಿಯಾ vs ಬಾಂಗ್ಲಾದೇಶ, ಟಾಸ್ ರಿಪೋರ್ಟ್, Live ಸ್ಕೋರ್

 T20 world cup: 34th Match, Australia vs Bangladesh Live score and Playing XI

ಆಸ್ಟ್ರೇಲಿಯಾ ಹಾಗೂ ಬಾಂಗ್ಲಾದೇಶ ತಂಡಗಳ ಮಧ್ಯೆ ಇಂದು ಪಂದ್ಯ ನಡೆಯುತ್ತಿದೆ. ಬಾಂಗ್ಲಾದೇಶ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದೆ. ಆದರೆ ಮುಂದಿನ ಹಂತಕ್ಕೇರಲು ದೃಷ್ಟಿನೆಟ್ಟಿರುವ ಆಸ್ಟ್ರೇಲಿಯಾ ತಂಡಕ್ಕೆ ಈ ಒಂದ್ಯದ ಗೆಲುವು ಬಹಳ ಮುಖ್ಯವಾಗಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಟಾಸ್ ಗೆದ್ದಿದ್ದು ತಂಡ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಬಾಂಗ್ಲಾದೇಶ ಆಡಿದ ಎಲ್ಲಾ ಪಂದ್ಯಗಳಲ್ಲಿಯೂ ಸೋಲು ಕಂಡಿದ್ದು ಸೆಮಿಫೈನಲ್‌ಗೇರುವ ಅವಕಾಶವನ್ನು ಸಂಪೂರ್ಣವಾಗಿ ಕಳೆದುಕೊಂಡಿದೆ. ಇಂದು ತನ್ನ ಅಂತಿಮ ಪಂದ್ಯವನ್ನು ಆಡುತ್ತಿದ್ದು ಈ ಪಂದ್ಯದಲ್ಲಿ ಗೆದ್ದು ಟೂರ್ನಿಯನ್ನು ಮುಗಿಸುವ ಲೆಕ್ಕಾಚಾರ ನಡೆಸುತ್ತಿದೆ ಬಾಂಗ್ಲಾದೇಶ. ಆದರೆ ಆಸ್ಟ್ರೇಲಿಯಾ ತಂಡಕ್ಕೆ ಈ ಪಂದ್ಯದ ಗೆಲುವು ನಿರ್ಣಾಯಕವಾಗಿರುವ ಕಾರಣದಿಂದಾಗಿ ಬಾಂಗ್ಲಾದೇಶಕ್ಕೆ ಈ ಪಂದ್ಯ ಮತ್ತಷ್ಟು ಕಠಿಣವೆನಿಸಲಿದೆ.

Live ಸ್ಕೋರ್‌ಕಾರ್ಡ್ ಹೀಗಿದೆ

1
51697

ಮತ್ತೊಂದೆಡೆ ಆಸ್ಟ್ರೇಲಿಯಾ ತಂಡಕ್ಕೆ ಈ ಪಂದ್ಯದ ಗೆಲುವು ಬಹಳ ನಿರ್ಣಾಯಕವಾಗಿದೆ. ಆಡಿದ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಗೆದ್ದಿರುವ ಆರೋನ್ ಫಿಂಚ್ ಪಡೆ ನಾಲ್ಕು ಅಂಕಗಳನ್ನು ಸಂಪಾದಿಸಿದೆ. ಈ ಮೂಲಕ ಮೂರನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ ತಂಡ ರನ್‌ರೇಟ್‌ನಲ್ಲಿಯೂ ಹಿಂದುಳಿದಿದ್ದು ಇಂದಿನ ಪಂದ್ಯದಲ್ಲಿ ರನ್‌ರೇಟ್ ಹೆಚ್ಚಿಸುವತ್ತಲೂ ಗಮನಹರಿಸಬೇಕಿದೆ. ಹೀಗಾಗಿ ಈ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ.

ಇನ್ನು ಈ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡದಲ್ಲಿ ಒಂದು ಬದಲಾವಣೆ ಮಾಡಿಕೊಳ್ಳಲಾಗಿದೆ. ಆಶ್ಟನ್ ಅಗರ್ ಸ್ಥಾನಕ್ಕೆ ಮಿಚೆಲ್ ಮಾರ್ಶ್ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಉಳಿದಂತೆ ಈ ಹಿಂದಿನ ಪಂದ್ಯದಲ್ಲಿ ಆಡಿದ ಎಲ್ಲಾ ಆಟಗಾರರು ಕೂಡ ಕಣಕ್ಕಿಳಿದಿದ್ದಾರೆ. ಮತ್ತೊಂದೆಡೆ ಬಾಂಗ್ಲಾದೇಶ ತಂಡದಲ್ಲಿಯೂ ಒಂದು ಬದಲಾವಣೆ ಮಾಡಿಕೊಳ್ಳಲಾಗಿದೆ. ನಸುಮ್ ಬದಲಿಗೆ ಮುಸ್ತಫಿಜುರ್ ಸ್ಥಾನ ಪಡೆದುಕೊಂಡಿದ್ದಾರೆ.

ಆಸ್ಟ್ರೇಲಿಯಾ ಪ್ಲೇಯಿಂಗ್ XI : ಡೇವಿಡ್ ವಾರ್ನರ್, ಆರೋನ್ ಫಿಂಚ್ (ನಾಯಕ), ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪೊರ್), ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್

Team Indiaಗೆ ಸಿಕ್ಕೇಬಿಡ್ತು ಸೆಮಿಫೈನಲ್ ಗೆ ಎಂಟ್ರಿಯಾಗೋ ಅವಕಾಶ | Oneindia Kannada

ಬಾಂಗ್ಲಾದೇಶ ಪ್ಲೇಯಿಂಗ್ XI : ಮೊಹಮ್ಮದ್ ನಯಿಮ್, ಲಿಟನ್ ದಾಸ್ (ವಿಕೆಟ್ ಕೀಪರ್), ಸೌಮ್ಯ ಸರ್ಕಾರ್, ಮುಶ್ಫಿಕರ್ ರಹೀಮ್, ಮಹಮ್ಮದುಲ್ಲಾ (ನಾಯಕ), ಅಫೀಫ್ ಹೊಸೈನ್, ಶಮೀಮ್ ಹೊಸೈನ್, ಮಹೇದಿ ಹಸನ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹಮಾನ್

Story first published: Thursday, November 4, 2021, 15:40 [IST]
Other articles published on Nov 4, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+