For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್ 2021: ನ್ಯೂಜಿಲೆಂಡ್ vs ಅಫ್ಘಾನಿಸ್ತಾನ, ಟಾಸ್ ರಿಪೋರ್ಟ್, Live ಸ್ಕೋರ್

 T20 world cup: 40th Match, New Zealand vs Afghanistan Live score and Playing XI

ಸಾಕಷ್ಟು ಕುತೂಹಲ ಮೂಡಿಸಿರುವ ನ್ಯೂಜಿಲೆಂಡ್ ಹಾಗೂ ಅಫ್ಘಾನಿಸ್ತಾನ ವಿರುದ್ಧದ ಪಂದ್ಯ ಆರಂಭವಾಗಿದೆ. ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಮೂಲಕ ನಿರ್ಣಾಯಕ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಮೊದಲಿಗೆ ಬ್ಯಾಟಿಂಗ್ ನಡೆಸಿ ಎದುರಾಳಿಗೆ ರನ್ ಬೆನ್ನಟ್ಟುವ ಸವಾಲು ಪಡೆದುಕೊಂಡಿದೆ.

ಇನ್ನು ಈ ಹಿಂದಿನ ಎರಡು ಪಂದ್ಯಗಳಲ್ಲಿ ಆಡುವ ಬಳಗದಿಂದ ಹೊರಗುಳಿದಿದ್ದ ಮುಜೀಬ್ ಉರ್ ರೆಹ್ಮಾನ್ ನಿರೀಕ್ಷೆಯಂತೆಯೇ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಗಾಯದ ಕಾರಣದಿಂದಾಗಿ ಈ ಹಿಂದಿನ ನಮೀಬಿಯಾ ಹಾಗೂ ಭಾರತ ವಿರುದ್ಧದ ಪಂದ್ಯದಿಂದ ಮುಜೀಬ್ ಉರ್ ರೆಹ್ಮಾನ್ ಹೊರಗುಳಿದಿದ್ದರು. ಮುಜೀಬ್ ಆಡುವ ಬಳಗಕ್ಕೆ ಸೇರ್ಪಡೆಯಾಗಿರುವುದು ತಂಡದ ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ. ಕಳೆದ ಪಂದ್ಯದಲ್ಲಿ ಆಡಿದ್ದ ಶರಫುದ್ದೀನ್ ಈ ಪಂದ್ಯದಲ್ಲಿ ಮುಜೀಬ್‌ಗಾಗಿ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಇನ್ನು ನ್ಯೂಜಿಲೆಂಡ್ ತಂಡದಲ್ಲಿ ಈ ಪಂದ್ಯಕ್ಕಾಗಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ.

Live ಸ್ಕೋರ್ ಕಾರ್ಡ್ ಹೀಗಿದೆ:

1
51703

ಆಡಿದ ನಾಲ್ಕು ಪಂದ್ಯಗಳ ಪೈಕಿ 3ರಲ್ಲಿ ಗೆಲುವು ಸಾಧಿಸಿರುವ ನ್ಯೂಜಿಲೆಂಡ್ ತಂಡ ಇಂದಿನ ಈ ಪಂದ್ಯದಲ್ಲಿ ಗೆಲುವು ಸಾಧಿಸುವ ಹುಮ್ಮಸ್ಸಿನಲ್ಲಿದೆ. ನ್ಯೂಜಿಲೆಂಡ್ ತಂಡ ಗೆಲುವು ಸಾಧಿಸಿದರೆ ಟೀಮ್ ಇಂಡಿಯಾದ ಎಲ್ಲಾ ಕನಸುಗಳು ಹಾಗೂ ಲೆಕ್ಕಾಚಾರಗಳು ಕೂಡ ಭಗ್ನವಾಗುತ್ತದೆ. ಇಂದಿನ ಪಂದ್ಯದ ಗೆಲುವು ನ್ಯೂಜಿಲೆಂಡ್ ತಂಡವನ್ನು ಸೆಮಿಫೈನಲ್‌ಗೆ ನಿರಾಯಾಸವಾಗಿ ತಲುಪಿಸಲಿದೆ. ಭಾರತ ಹಾಗೂ ಅಫ್ಘಾನಿಸ್ತಾನ ಎರಡು ತಂಡಗಳ ಕನಸು ಕೂಡ ಭಗ್ನವಾಗಲಿದೆ.

ಭಾರತ ತಂಡ ಸೆಮಿಫೈನಲ್ ಹಂತಕ್ಕೇರಬೇಕಾದರೆ ಇಂದು ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅಫ್ಘಾನಿಸ್ತಾನ ಗೆಲುವು ಸಾಧಿಸಬೇಕಿದೆ. ಪ್ರತಿಭಾನ್ವಿತ ಆಟಗಾರರನ್ನು ಹೊಂದಿದ್ದರೂ ಕೂಡ ನ್ಯೂಜಿಲೆಂಡ್ ತಂಡದ ಸಾಮರ್ಥ್ಯದ ಮುಂದೆ ಅಫ್ಘಾನಿಸ್ತಾನ ಮೇಲುಗೈ ಸಾಧಿಸುವ ಸಾಧ್ಯತೆ ತೀರಾ ಕಡಿಮೆಯಿದೆ. ಹೀಗಾಗಿಯೇ ಟೀಮ್ ಇಂಡಿಯಾ ಅಭಿಮಾನಿಗಳು ಈ ಪಂದ್ಯದಲ್ಲಿ ಪವಾಡ ನಡೆಯುವ ನಿರೀಕ್ಷೆಯಲ್ಲಿದ್ದಾರೆ. ಅಪ್ಘಾನಿಸ್ತಾನ ತಂಡ ಗೆದ್ದರೆ ಭಾರತ, ನ್ಯೂಜಿಲೆಂಡ್ ಹಾಗೂ ಅಫ್ಘಾನಿಸ್ತಾನ ತಂಡಗಳ ಪೈಕಿ ರನ್‌ರೇಟ್ ಲೆಕ್ಕಾಚಾರದಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಎಂಬುದು ಕೂಡ ಮಹತ್ವ ಪಡೆಯಲಿದೆ.

ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾರತದ ಸೆಮಿ ಫೈನಲ್ ಕನಸಿಕೆ ಮತ್ತೊಮ್ಮೆ ಅಡ್ಡಿಯಾಗಿದೆ. ಈ ಗೆಲುವಿನೊಂದಿಗೆ ನ್ಯೂಜಿಲೆಂಡ್ ಗ್ರೂಫ್ 2ರ ಎರಡನೇ ತಂಡವಾಗಿ ಸೆಮಿಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ.

ಭಾರತ ಸೆಮಿಫೈನಲ್‌ಗೆ ಪ್ರವೇಶ ಪಡೆಯಬೇಕಿದ್ದರೆ ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಅಫ್ಘಾನಿಸ್ತಾನ ತಂಡಕ್ಕೆ ಶರಣಾಗಲೇಬೇಕಿತ್ತು. ಹಾಗಿದ್ದರೆ ಮಾತ್ರವೇ ಭಾರತದ ಸೆಮಿಫೈನಲ್ ಕನಸು ನನಸಾಗಲು ಸಾಧ್ಯವಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ನ್ಯೂಜಿಲೆಂಡ್ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 8 ವಿಕೆಟ್‌ಗಳ ಅಂತರದ ಭರ್ಜರಿ ಜಯವನ್ನು ಸಾಧಿಸಿದೆ.

ಅಫ್ಘಾನಿಸ್ತಾನ ನೀಡಿದ 125 ರನ್‌ಗಳ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ ಮೊದಲ ವಿಕೆಟ್‌ಗೆ ಹೇಳಿಕೊಳ್ಳುವಂತಾ ಉತ್ತಮ ಆರಂಬ ಪಡೆಯಲು ಸಾಧ್ಯವಾಗಲಿಲ್ಲ. ಡೇರ್ಯಲ್ ಮಿಚೆಲ್ 17 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ನಂತರ ತಂಡದ ಮೊತ್ತ 57 ರನ್‌ಗಳಾಗಿದ್ದಾಗ ಮಾರ್ಟಿನ್ ಗಪ್ಟಿಲ್ ಕೂಡ ವಿಕೆಟ್ ಕಳೆದುಕೊಂಡರು. ಆದರೆ ಅದಾದ ಬಳಿಕ ಕಿವೀಸ್ ನಾಯಕ ಹಾಗೂ ಡೆವೋನ್ ಕಾನ್ವೆ ಮುರಿಯದ ಮೂರನೇ ವಿಕೆಟ್‌ಗೆ 68 ರನ್‌ಗಳ ಅಜೇಯ ಜೊತೆಯಾಟ ದಾಖಲಿಸುವ ಮೂಲಕ ತಂಡಕ್ಕೆ ಗೆಲುವನ್ನು ತಂದಿತ್ತರು. ಈ ಮೂಲಕ ನ್ಯೂಜಿಲೆಂಡ್ ಸೆಮಿಫೈನಲ್‌ಗೆ ತಾನು ಪ್ರವೇಶ ಪಡೆದಿದ್ದಲ್ಲದೆ ಭಾರತ ಹಾಗೂ ಅಫ್ಘಾನಿಸ್ತಾನ ಎರಡು ತಂಡಗಳಿಗೂ ಕೂಡ ಮನೆಯ ಹಾದಿ ತೋರಿಸಿದೆ.

ನ್ಯೂಜಿಲೆಂಡ್ ಆಡುವ ಬಳಗ: ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಕೇನ್ ವಿಲಿಯಮ್ಸನ್ (ನಾಯಕ), ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಟಿಮ್ ಸೌಥಿ, ಇಶ್ ಸೋಧಿ, ಟ್ರೆಂಟ್ ಬೋಲ್ಟ್

ಬೆಂಚ್: ಟಾಡ್ ಆಸ್ಟಲ್, ಕೈಲ್ ಜೇಮಿಸನ್, ಟಿಮ್ ಸೀಫರ್ಟ್, ಮಾರ್ಕ್ ಚಾಪ್ಮನ್

ಅಫ್ಘಾನಿಸ್ತಾನ ಆಡುವ ಬಳಗ: ಹಜರತುಲ್ಲಾ ಝಜೈ, ಮೊಹಮ್ಮದ್ ಶಹಜಾದ್ (ವಿಕೆಟ್ ಕೀಪರ್), ರಹಮಾನುಲ್ಲಾ ಗುರ್ಬಾಜ್, ನಜೀಬುಲ್ಲಾ ಝದ್ರಾನ್, ಗುಲ್ಬದಿನ್ ನೈಬ್, ಮೊಹಮ್ಮದ್ ನಬಿ (ನಾಯಕ), ಕರೀಮ್ ಜನತ್, ರಶೀದ್ ಖಾನ್, ನವೀನ್-ಉಲ್-ಹಕ್, ಹಮೀದ್ ಹಸನ್, ಮುಜೀಬ್ ಉರ್ ರಹಮಾನ್
ಆಡುವ ಬಳಗ: ಶರಫುದ್ದೀನ್ ಅಶ್ರಫ್, ಹಷ್ಮತುಲ್ಲಾ ಶಾಹಿದಿ, ಫರೀದ್ ಅಹ್ಮದ್, ಉಸ್ಮಾನ್ ಘನಿ

Story first published: Sunday, November 7, 2021, 19:35 [IST]
Other articles published on Nov 7, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+