ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್ 2021: ಅಬ್ಬರಿಸಿದ ಶೋಯೆಬ್ ಮಲಿಕ್, ಅಜೇಯವಾಗಿ ಸೆಮಿಫೈನಲ್‌ಗೆ ಕಾಲಿಟ್ಟ ಪಾಕಿಸ್ತಾನ

T20 world cup: 41st Match, Pakistan won by 72 runs against Scotland

ಪಾಕಿಸ್ತಾನ ಕ್ರಿಕೆಟ್ ತಂಡ ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಸೂಪರ್ 12 ಹಂತದಲ್ಲಿ ಒಂದೂ ಸೋಲನ್ನು ಕಾಣದೆ ಸೆಮಿಫೈನಲ್‌ಗೆ ಪ್ರವೇಶ ಪಡೆದ ಏಕೈಕ ತಂಡ ಎಂಬ ಹೆಗ್ಗಳಿಕೆಯೊಂದಿಗೆ ಪಾಕಿಸ್ತಾನ ತಂಡ ಈ ಹಂತವನ್ನು ಯಶಸ್ವಿಯಾಗಿ ಮುಗಿಸಿದೆ. ಭಾನುವಾರ ನಡೆದ ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅಮೋಘ ಜಯ ದಾಖಲಿಸುವ ಮೂಲಕ ಈ ಸಾಧನೆ ಮಾಡಿ ಬೀಗಿದೆ ಪಾಕಿಸ್ತಾನ.

ಮೊದಲಿಗೆ ಬ್ಯಾಟಿಂಗ್ ನಡೆಸಿದ ಪಾಕಿಸ್ತಾನ ನಾಯಕ ಬಾಬರ್ ಅಜಂ ಹಾಗೂ ಅನುಭವಿ ಆಟಗಾರ ಶೋಯೆಬ್ ಮಲಿಕ್ ಭರ್ಜರಿ ಬ್ಯಾಟಿಂಗ್‌ನಿಂದಾಗಿ 189 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸುವಲ್ಲಿ ಯಶಸ್ವಿಯಾಯಿತು. ಇದನ್ನು ಬೆನ್ನಟ್ಟಿದ ಸ್ಕಾಟ್ಲೆಂಟದ ತಂಡ ನಿಗದಿತ 20 ಓವರ್‌ಗಳಲ್ಲಿ ಕೇವಲ 117 ರನ್‌ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಪಾಕಿಸ್ತಾನ ಸತತ ನಾಲ್ಕನೇ ಜಯವನ್ನು ಗಳಿಸಿದೆ.

ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ನಡೆಸಿದ ಪಾಕಿಸ್ತಾನ ತಂಡಕ್ಕೆ ಮೊದಲಿಗೆ ನಾಯಕ ಬಾಬರ್ ಅಜಂ ಆಸರೆಯಾದರು. 47 ಎಸೆತಗಳಲ್ಲಿ ಬಾಬರ್ ಅಜಂ 66 ರನ್‌ಗಳ ಕೊಡುಗೆ ನೀಡುವ ಮೂಲಕ ತಂಡಕ್ಕೆ ಮತ್ತೊಮ್ಮೆ ನೆರವಾದರು. ರಿಜ್ವಾನ್ 15 ರನ್‌ಗಳಿಗೆ ವಿಕೆಟ್ ಕಳೆದುಕೊಂಡರೆ ಫಕರ್ ಜಮಾನ್ 8 ರನ್‌ಗೆ ವಿಕೆಟ್ ಕಳೆದುಕೊಂಡಿದ್ದರು. ಆದರೆ ಅನುಭವಿ ಮೊಹಮ್ಮದ್ ಹಫೀಜ್ 19 ಎಸೆತಗಳಲ್ಲಿ 31 ರನ್ ಬಾರಿಸಿ ಮಿಂಚಿದರು. ಆದರೆ ಪಾಕಿಸ್ತಾನ ತಂಡದ ರನ್ ಮತ್ತಷ್ಟು ವೇಗ ಪಡೆದುಕೊಂಡಿದ್ದು ಅನುಭವಿ ಶೋಯೆಬ್ ಮಲಿಕ್ ಕ್ರೀಸ್‌ಗೆ ಇಳಿದ ನಂತರ.

ಶೋಯೆಬ್ ಮಲಿಕ್ ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸುವ ಮೂಲಕ ಈ ಬಾರಿಯ ಟಿ20 ವಿಶ್ವಕಪ್‌ಗೆ ತನ್ನ ಆಯ್ಕೆಯನ್ನು ಮತ್ತೊಮ್ಮೆ ಬಲವಾಗಿ ಸಮರ್ಥನೆ ಮಾಡಿಕೊಂಡಿದ್ದಾರೆ. ಕೇವಲ 18 ಎಸೆತಗಳನ್ನು ಎದುರಿಸಿದ ಶೋಯೆಬ್ ಮಲಿಕ್ 6 ಸಿಕ್ಸರ್ ಹಾಗೂ 1 ಬೌಂಡರಿ ನೆರವಿನಿಂದ 54 ರನ್‌ಗಳ ಕೊಡುಗೆ ನೀಡಿದರು. ಈ ಮೂಲಕ ಪಾಕಿಸ್ತಾನ ತಂಡದ ಬೃಹತ್ ಮೊತ್ತಕ್ಕೆ ಮಲಿಕ್ ಕಾರಣರಾದರು. ಶೋಯೆಬ್ ಮಲಿಕ್ ಅವರ ಈ ಪ್ರದರ್ಶನ ಪಾಕಿಸ್ತಾನ ತಂಡದ ಮಧ್ಯಮ ಕ್ರಮಾಂಕ ಮತ್ತಷ್ಟು ಬಲಿಷ್ಠವಾಗಿದೆ.

ಇನ್ನು ಪಾಕಿಸ್ತಾನ ತಂಡ ನೀಡಿದ 190 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಸ್ಕಾಟ್ಲೆಂಡ್ ತಂಡ ಪಾಕ್ ಬೌಲರ್‌ಗಳ ದಾಳಿಗೆ ತತ್ತರಿಸಿತು. ಆರಂಭದಿಂದಲೇ ಪಾಕಿಸ್ತಾನದ ಬೌಲರ್‌ಗಳು ಸ್ಕಾಟ್ಲೆಂಡ್ ವಿರುದ್ಧ ನಿರೀಕ್ಷಿತ ಯಶಸ್ಸು ಸಾಧಿಸುತ್ತಾ ಸಾಗಿದರು. ಮಧ್ಯಮ ಕ್ರಮಾಂಕದ ಆಟಗಾರ ರಿಚಿ ಬೆರಿಂಗ್ಟನ್ ಮಾತ್ರ ಪಾಕ್ ಬೌಲಿಂಗ್ ದಾಳಿಯನ್ನು ದಿಟ್ಟವಾಗಿ ಎದುರಿಸಿದರೂ ಅವರ ಏಕಾಂಗಿ ಹೋರಾಟಕ್ಕೆ ಮತ್ತೊಂದು ತುದಿಯಿಂದ ಬೆಂಬಲ ದೊರೆಯದ ಕಾರಣ ಸ್ಕಾಟ್ಲೆಂಡ್ ತಂಡ ಅಂತಿಮವಾಗಿ ನಿಗದಿತ 20 ಓವರ್‌ಗಳಲ್ಲಿ 117 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಸ್ಕಾಟ್ಲೆಂಡ್ ಈ ಬಾರಿಯ ಟಿ20 ವಿಶ್ವಕಪ್‌ನ ಸೂಪರ್ 12 ಹಂತದಲ್ಲಿ ಒಂದೂ ಗೆಲವುಉ ಸಾಧಿಸದೆ ಟೂರ್ನಿಯಿಂದ ಹೊರಬಿದ್ದಿದೆ.

ಪಾಕಿಸ್ತಾನ ಆಡುವ ಬಳಗ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ಮೊಹಮ್ಮದ್ ಹಫೀಜ್, ಶೋಯೆಬ್ ಮಲಿಕ್, ಆಸಿಫ್ ಅಲಿ, ಶಾದಾಬ್ ಖಾನ್, ಇಮಾದ್ ವಾಸಿಮ್, ಹಸನ್ ಅಲಿ, ಹಾರಿಸ್ ರೌಫ್, ಶಾಹೀನ್ ಅಫ್ರಿದಿ

ಬೆಂಚ್: ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ಹೈದರ್ ಅಲಿ, ಸರ್ಫರಾಜ್ ಅಹ್ಮದ್

ಟ್ರೋಫಿ ಗೆಲ್ಲದೆ ನಿರಾಸೆಯಿಂದ ವಿರಾಟ್ ಯುಗ ಮುಕ್ತಾಯ | Oneindia Kannada

ಸ್ಕಾಟ್ಲೆಂಡ್ ಆಡುವ ಬಳಗ: ಜಾರ್ಜ್ ಮುನ್ಸೆ, ಕೈಲ್ ಕೋಟ್ಜರ್ (ನಾಯಕ), ಮ್ಯಾಥ್ಯೂ ಕ್ರಾಸ್ (ವಿಕೆಟ್ ಕೀಪರ್), ರಿಚಿ ಬೆರಿಂಗ್ಟನ್, ಡೈಲನ್ ಬಡ್ಜ್, ಮೈಕೆಲ್ ಲೀಸ್ಕ್, ಕ್ರಿಸ್ ಗ್ರೀವ್ಸ್, ಮಾರ್ಕ್ ವ್ಯಾಟ್, ಹಮ್ಜಾ ತಾಹಿರ್, ಸಫ್ಯಾನ್ ಷರೀಫ್, ಬ್ರಾಡ್ಲಿ ವೀಲ್
ಬೆಂಚ್: ಜೋಶ್ ಡೇವಿ, ಕ್ರೇಗ್ ವ್ಯಾಲೇಸ್, ಕ್ಯಾಲಮ್ ಮ್ಯಾಕ್ಲಿಯೋಡ್, ಅಲಾಸ್ಡೇರ್ ಇವಾನ್ಸ್

Story first published: Monday, November 8, 2021, 15:44 [IST]
Other articles published on Nov 8, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X