For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ನಮೀಬಿಯಾ ವಿರುದ್ಧ ಗೆಲುವಿನೊಂದಿಗೆ ಭಾರತ ನಿರ್ಗಮನ

T20 world cup: 42nd Match, India won by 9 wickets against Namibia
ನಮೀಬಿಯ ವಿರುದ್ಧ ಗೆದ್ದ ಮೇಲೆ ನಾಯಕನಾಗಿ ಕೊಹ್ಲಿಯ ಕೊನೆಯ ಮಾತು | Oneindia Kannada

ಟಿ20 ವಿಶ್ವಕಪ್‌ನ ಸೂಪರ್ 12 ಹಂತದ ಅಂತಿಮ ಪಂದ್ಯದಲ್ಲಿ ಭಾರತ 9 ವಿಕೆಟ್‌ಗಳ ಅಂತರದ ಭಾರೀ ಗೆಲುವು ಸಾಧಿಸಿ ಟೂರ್ನಿಯಿಂದ ನಿರ್ಗಮಿಸಿದೆ. ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಭಾರತ ಎಲ್ಲಾ ವಿಭಾಗಗಳಲ್ಲಿಯೂ ಅದ್ಭುತ ಪ್ರದರ್ಶನ ನೀಡುವ ಮೂಲಕ ಸುಲಭ ಗೆಲುವು ಸಾಧಿಸಿದೆ. ಈಗಾಗಲೇ ಸೆಮಿಫೈನಲ್‌ಗೇರುವ ಅರ್ಹತೆ ಕಳೆದುಕೊಮಡಿದ್ದ ಕಾರಣ ಭಾರತಕ್ಕೆ ಈ ವಿಶ್ವಕಪ್‌ನಲ್ಲಿ ಇದು ಅಂತಿಮ ಪಂದ್ಯವಾಗಿತ್ತು.

ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಹೀಗಾಗಿ ಮೊದಲಿಗೆ ಬ್ಯಾಟಿಂಗ್ ಮಾಡಲು ಇಳಿದ ನಮೀಬಿಯಾ ಮೊದಲ ವಿಕೆಟ್‌ಗೆ 33 ರನ್‌ಗಳ ಸಾಧಾರಣ ಆರಂಭವನ್ನು ಪಡೆಯಿತು. ಆದರೆ ಅದಾದ ನಂತರ ಹಠಾತ್ ಕುಸಿತ ಕಂಡಿತು ನಮೀಬಿಯಾ. 47 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ನಮೀಬಿಯಾ ಪರವಾಗಿ ಡೀವಿಡ್ ವೈಸ್ 26 ರನ್‌ಗಳ ಕೊಡುಗೆ ನೀಡಿದರು. ಉಳಿದಂತೆ ಆರಂಭಿಕ ಆಟಗಾರ ಬಾರ್ಡ್ ಗಳಿಸಿದ 21 ರನ್ ಹೈಯೆಸ್ಟ್ ಸ್ಕೋರ್ ಆಗಿದೆ. ಭಾರತೀಯ ಬೌಲರ್‌ಗಳ ಅದ್ಭುತ ದಾಳಿಯ ಹೊರತಾಗಿಯೂ ನಮೀಬಿಯಾ 20 ಓವರ್‌ಗಳ ಆಟವನ್ನು ಪೂರ್ಣಗೊಳಿಸಿದ್ದು 132 ರನ್‌ಗಳನ್ನು ಗಳಿಸಿತು.

ಭಾರತದ ಪರವಾಗಿ ಸ್ಪಿನ್ನರ್‌ಗಳಾದ ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಅದ್ಭುತ ಬೌಲಿಂಗ್ ದಾಳಿ ನಡೆಸುವಲ್ಲಿ ಯಶಸ್ವಿಯಾದರು. ಆರ್ ಅಶ್ವಿನ್ ನಾಲ್ಕು ಓವರ್‌ಗಳಲ್ಲಿ 20 ರನ್‌ಗಳನ್ನು ನೀಡಿ 3 ವಿಕೆಟ್ ಕಬಳಿಸಿದರೆ ರವೀಂದ್ರ ಜಡೇಜಾ ನಾಲ್ಕು ಓವರ್‌ಗಳ ತಮ್ಮ ಕೋಟಾದಲ್ಲಿ ಕೇವಲ 16 ರನ್‌ಗಳಿಸಿ 3 ವಿಕೆಟ್ ಪಡೆದು ಸಂಭ್ರಮಿಸಿದರು. ವೇಗಿ ಜಸ್ಪ್ರೀತ್ ಬೂಮ್ರಾ ಕೂಡ 2 ವಿಕೆಟ್ ಪಡೆದುಕೊಂಡರು. ಇನ್ನು ಈ ವಿಶ್ವಕಪ್‌ನಲ್ಲಿ ಮೊದಲ ಬಾರಿಗೆ ಅವಕಾಶ ಪಡೆದ ರಾಹುಲ್ ಚಹರ್ ಯಾವುದೇ ವಿಕೆಟ್ ಪಡೆಯುವಲ್ಲಿ ವಿಫಲವಾದರು.

ಇನ್ನು ನಮೀಬಿಯಾ ತಂಡ ನೀಡಿದ 133 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತಕ್ಕೆ ಮತ್ತೊಮ್ಮೆ ಅದ್ಭುತ ಆರಂಭ ದೊರೆಯಿತು. ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ 86 ರನ್‌ಗಳ ಜೊತೆಯಾಟವನ್ನು ನೀಡಿದರು. 37 ಎಸೆತಗಳಲ್ಲಿ 56 ರನ್‌ಗಳಿಸಿದ ರೋಹಿತ್ ಶರ್ಮಾ ಫ್ರೈಲಿಂಕ್‌ಗೆ ವಿಕೆಟ್ ಒಪ್ಪಿಸಿದರು. ನಮೀಬಿಯಾ ಬೌಲರ್‌ಗಳು ಸಾಧಿಸಿದ ಏಕೈಕ ಯಶಸ್ಸು ಇದಾಗಿತ್ತು. ನಂತರ ಕೆಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಗೆಲುವಿನ ಪ್ರಕ್ರಿಯೆ ಪೂರ್ಣಗೊಳಿಸಿದರು. ಕೆಎಲ್ ರಾಹುಲ್ ಅಜೇಯ 54 ರನ್‌ಗಳಿಸಿದರೆ ಸೂರ್ಯಕುಮಾರ್ ಯಾದವ್ 25 ರನ್‌ಗಳಿಸಿ ಔಟಾಗದೆ ಉಳಿದುಕೊಂಡರು. ಭಾರತ ಇನ್ನೂ 28 ಎಸೆತಗಳು ಬಾಕಿಯಿರುವಂತೆಯೇ 9 ವಿಕೆಟ್‌ಗಳ ಅಂತರದ ಬೃಹತ್ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಭಾರತ (ಪ್ಲೇಯಿಂಗ್ XI): ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ(ನಾಯಲ), ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ರಾಹುಲ್ ಚಾಹರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ

ನಮೀಬಿಯಾ (ಪ್ಲೇಯಿಂಗ್ XI): ಸ್ಟೀಫನ್ ಬಾರ್ಡ್, ಮೈಕೆಲ್ ವ್ಯಾನ್ ಲಿಂಗೆನ್, ಕ್ರೇಗ್ ವಿಲಿಯಮ್ಸ್, ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಜೇನ್ ಗ್ರೀನ್ (ವಿಕೆಟ್ ಕೀಪರ್), ಡೇವಿಡ್ ವೈಸ್, ಜಾನ್ ಫ್ರಿಲಿಂಕ್, ಜೆಜೆ ಸ್ಮಿಟ್, ಜಾನ್ ನಿಕೋಲ್ ಲಾಫ್ಟಿ-ಈಟನ್, ರೂಬೆನ್ ಟ್ರಂಪೆಲ್ಮನ್, ಬರ್ನಾರ್ಡ್ ಸ್ಕೋಲ್ಟ್ಜ್

Story first published: Tuesday, November 9, 2021, 11:04 [IST]
Other articles published on Nov 9, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+