ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ಟೀಮ್ ಇಂಡಿಯಾದ ಈ ಮೂವರು ವಿಶ್ವದ ಅತ್ಯುತ್ತಮ ಆಟಗಾರರು ಎಂದ ಚೋಪ್ರ

T20 world cup: Aakash Chopra praises Indian top 3 said best in the world

ಟಿ20 ವಿಶ್ವಕಪ್‌ನಲ್ಲಿ ಭಾರತ ಎರಡು ಅಭ್ಯಾಸ ಪಂದ್ಯಗಳಲ್ಲಿಯೂ ಭರ್ಜರಿಯಾಗಿ ಸಿದ್ಧತೆ ನಡೆಸಿದ್ದು ವಿಶ್ವಕಪ್‌ನ ನಿಜವಾದ ಹೋರಾಟಕ್ಕೆ ಸಜ್ಜಾಗಿದೆ. ಈ ಹಂತದಲ್ಲಿ ಭಾರತಕ್ಕೆ ಪಾಕಿಸ್ತಾನ ಎದುರಾಳಿಯಾಗಿರುವುದು ಕ್ರಿಕೆಟ್ ಪ್ರೇಮಿಗಳ ಕಾತರವನ್ನು ಹೆಚ್ಚುವಂತೆ ಮಾಡಿದೆ. ಇನ್ನು ಪಾಕಿಸ್ತಾನದ ವಿರುದ್ಧದ ಸೂಪರ್ 12 ಹಂತದ ಪಂದ್ಯಕ್ಕೂ ಮುನ್ನ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಕಾಮೆಂಟೇಟರ್ ಆಕಾಶ್ ಚೋಪ್ರ ಭಾರತೀಯ ಕ್ರಿಕೆಟ್ ತಂಡದ ಅಗ್ರ ಮೂವರು ಬ್ಯಾಟ್ಸ್‌ಮನ್‌ಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಈ ಸಂದರ್ಭದಲ್ಲಿ ಚೋಪ್ರ ಈ ಮೂವರು ಆಟಗಾರರ ವಿಶ್ವದ ಅತ್ಯುತ್ತಮ ಆಟಗಾರರು ಎಂದು ಬಣ್ಣಿಸಿದ್ದಾರೆ.

ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಆಕಾಶ್ ಚೋಪ್ರ ಟೀಮ್ ಇಂಡಿಯಾದ ಆರಂಭಿಕರಾದ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿಯ ಬಗ್ಗೆ ಹೇಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡುತ್ತಾ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

"ನಮ್ಮ ಅಗ್ರ ಮೂವರು ಬ್ಯಾಟ್ಸ್‌ಮನ್‌ಗಳು ವಿಶ್ವದ ಅತ್ಯುತ್ತಮ ಆಟಗಾರರು. ಇದನ್ನು ನಾನು ಭಾರತೀಯ ಎಎಂಬ ಕಾರಣಕ್ಕಾಗಿ ಹೇಳುತ್ತಿಲ್ಲ. 2016ರ ನಂತರದ ಬ್ಯಾಟಿಂಗ್ ಅಂಕಿಅಂಶಗಳನ್ನು ನೀವು ತೆಗೆದರೆ ಖಂಡಿತಾ 2204 ರನ್‌ಗಳಿಸಿರುವ ಬಾಬರ್ ಅಜಂ ಈ ಪಟ್ಟಿಯಲ್ಲಿ ಮೊದಲಿದ್ದಾರೆ. ಆದರೆ ಟೀಮ್ ಇಂಡಿಯಾದ ಆರಂಭಿಕರಾದ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ 1500ಕ್ಕೂ ಅಧಿಕ ರನ್‌ಗಳಿಸಿದ್ದಾರೆ. ಮತ್ತೊಂದು ಪ್ರಮುಖವಾದ ಸಂಗತಿಯೆಂದರೆ ಈ ಮೂವರು ಆಟಗಾರರು ಕೂಡ ಹೆಚ್ಚಿನ ಪಂದ್ಯಗಳನ್ನು ಆಡಿಲ್ಲ. ಅವರು ಎಲ್ಲಾ ಅಂತಾರಾಷ್ಟ್ರೀಯ ಟಿ20 ಪ೦ದ್ಯಗಳಲ್ಲಿ ಆಡಿಲ್ಲ. ಅವರಿಗಾಗಿ ಭಾರತೀಯ ತಂಡ ಸರಣಿಗಳನ್ನು ಕೂಡ ಆಯ್ಕೆ ಮಾಡಿಲ್ಲ. ಹಾಗಿದ್ದರು ಕೂಡ ಅವರು 1500ಕ್ಕೂ ಅಧಿಕ ರನ್‌ಗಳನ್ನು ಗಳಿಸಿದ್ದಾರೆ. ಅವರು ವಿಶ್ವದಲ್ಲಿಯೇ ಅತ್ಯುತ್ತಮರು. ಇದನ್ನು ನಾವು ಒಂದು ಬಾರಿ ಮಾತ್ರವೇ ಹೇಳಿದರೆ ಸಾಕಾಗುವುದಿಲ್ಲ" ಎಂದು ಆಕಾಶ್ ಚೋಪ್ರ ಟೀಮ್ ಇಂಡಿಯಾದ ಅಗ್ರ ಮೂವರು ಬ್ಯಾಟ್ಸ್‌ಮನ್‌ಗಳ ಪ್ರದರ್ಶನದ ಬಗ್ಗೆ ಭಾರೀ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಟೀಮ್ ಇಂಡಿಯಾದ ಆರಂಭಿಕರಾದ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಇಬ್ಬರು ಕೂಡ ಅತ್ಯುತ್ತಮವಾದ ಫಾರ್ಮ್‌ನಲ್ಲಿದ್ದಾರೆ. ಆಡಿದ ಎರಡು ಪಂದ್ಯಗಳಲ್ಲಿ ಇಬ್ಬರು ಕೂಡ ತಲಾ ಒಂದೊಂದು ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಇನ್ನು ಕೆಎಲ್ ರಾಹುಲ್ ಈ ಬಾರಿಯ ಐಪಿಎಲ್‌ನಲ್ಲಿಯೂ ಅಮೋಘ ಪ್ರದರ್ಶನ ನೀಡಿದ್ದು 62.60 ಸರಾಸರಿಯಲ್ಲಿ 626 ರನ್‌ಗಳಿಸಿದ್ದಾರೆ.

ಆದರೆ ನಾಯಕ ವಿರಾಟ್ ಕೊಹ್ಲಿ ಮಾತ್ರ ಸ್ವಲ್ಪ ಕಳೆಗುಂದಿದಂತಿದ್ದಾರೆ. ಅದರಲ್ಲೂ ಮಧ್ಯಮ ಓವರ್‌ಗಳಲ್ಲಿ ವಿರಾಟ್ ಬ್ಯಾಟ್‌ನಿಂದ ಸರಾಗವಾಗಿ ರನ್ ಹರಿದುಬರುತ್ತಿಲ್ಲ. ಐಪಿಎಲ್‌ನಲ್ಲಿಯೂ ವಿರಾಟ್ ಕೊಹ್ಲಿ ಈ ಸಮಸ್ಯೆಯನ್ನು ಎದುರಿಸಿದ್ದರು. ಇದು ಮೊದಲ ಅಭ್ಯಾಸ ಪಂದ್ಯದಲ್ಲಿಯೂ ಮುಂದುವರಿದಿತ್ತು. ಆದರೆ ನಾಯಕ ವಿರಾಟ್ ಕೊಹ್ಲಿ ಯಾವ ಕ್ಷಣದಲ್ಲಿಯಾದರೂ ಸಿಡಿಯುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂಬುದು ಎದುರಾಳಿಗೂ ಅರಿವಿದೆ.

ಇನ್ನು ಇದೇ ಸಂದರ್ಭದಲ್ಲಿ ಆಕಾಶ್ ಚೋಪ್ರ ಟೀಮ್ ಇಂಡಿಯಾದ ಒಟ್ಟಾರೆ ಪ್ರದರ್ಶನದ ಬಗ್ಗೆಯೂ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. 2016ರ ಬಳಿಕದ ಅಂಕಿಅಂಶಗಳನ್ನು ಉಲ್ಲೇಖಿಸಿರುವ ಆಕಾಶ್ ಚೋಪ್ರ ಈ ಅವಧಿಯಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿದೆ ಎಂದಿದ್ದಾರೆ. ಈ ಅವಧಿಯಲ್ಲಿ ಭಾರತ 88 ಪಂದ್ಯಗಳಲ್ಲಿ ಆಡಿದ್ದು ಇದರಲ್ಲಿ 60 ಪಂದ್ಯಗಳಲ್ಲಿ ಗೆದ್ದಿದೆ. ಭಾರತದ ಗೆಲುವಿನ ಸರಾಸರಿ 70.5. 50ಕ್ಕೂ ಹೆಚ್ಚು ಪಂದ್ಯಗಳನ್ನಾಡಿರುವ ತಂಡಗಳ ಪೈಕಿ ಇದು ಅತ್ಯುತ್ತಮ ಸಾಧನೆ ಎಂದಿದ್ದಾರೆ ಆಕಾಶ್ ಚೋಪ್ರ.

ಟೀಮ್ ಇಂಡಿಯಾ ಬ್ಯಾಟಿಂಗ್ ಹೀಗೇ ಇದ್ರೆ ಈ ಸಲ T20 ವಿಶ್ವಕಪ್ ಟ್ರೋಫಿ ನಮ್ದೇ... | Oneindia Kannada

ಭಾರತ ಸಂಪೂರ್ಣ ಸ್ಕ್ವಾಡ್ ಹೀಗಿದೆ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಾಹರ್, ವರುಣ್ ಚಕ್ರವರ್ತಿ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ
ಮೀಸಲು ಆಟಗಾರರು: ಶ್ರೇಯಸ್ ಅಯ್ಯರ್, ದೀಪಕ್ ಚಾಹರ್, ಅಕ್ಷರ್ ಪಟೇಲ್

Story first published: Thursday, October 21, 2021, 15:23 [IST]
Other articles published on Oct 21, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X