T20 World Cup: ಅಭಿಷೇಕ್ ಶರ್ಮಾ ಸೇರಿ 5 ಯುವ ಆಟಗಾರರ ಆಕರ್ಷಣೆ
ಫೆಬ್ರವರಿ 7 ರಿಂದ ಭಾರತ ಹಾಗೂ ಶ್ರೀಲಂಕಾ ಟಿ20 ವಿಶ್ವಕಪ್ ಆಯೋಜಿಸಲಿವೆ. ಈ ಟೂರ್ನಿಯಲ್ಲಿ ಹಲವು ಸ್ಟಾರ್ ಆಟಗಾರರು ಅಖಾಡಕ್ಕೆ ಇಳಿಯಲಿದ್ದಾರೆ. ಈ ವೇಳೆ ಅಭಿಮಾನಿಗಳ ಕಣ್ಣುಗಳ ಯುವ ಆಟಗಾರರ ಮೇಲೆ ನೆಟ್ಟಿದೆ. ಈ ಬಾರಿಯ ವಿಶ್ವಕಪ್‌ನಲ್ಲಿ ಈ ಯುವ ಆಟಗಾರರ ಮೇಲೆ ಎಲ್ಲ ಅಭಿಮಾನಿಗಳ ಗಮನ ಕೇಂದ್ರಿ ಕರಿತವಾಗಿದೆ. ಹಾಗಿದ್ದರೆ ಆ ಪ್ಲೇಯರ್ಸ್ ಯಾರು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಟಿ20 ವಿಶ್ವಕಪ್‌ನಲ್ಲಿ ಅಭಿಮಾನಿಗಳ ಕಣ್ಣು ಕದ್ದ ಪ್ಲೇಯರ್‌ಗಳಲ್ಲಿ ಇಂಗ್ಲೆಂಡ್ ತಂಡದ ಆಲ್‌ರೌಂಡರ್ ಜಾಕೋಬ್ ಬೆಥೆಲ್ ಒಬ್ಬರು. 22 ವರ್ಷದ ಯುವ ಆಟಗಾರ ಜಾಕೋಬ್ ಈಗಾಗಲೇ ಇಂಗ್ಲೆಂಡ್ ಪರ 22 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅಲ್ಲದೆ 27ರ ಸರಾಸರಿಯಲ್ಲಿ 414 ರನ್ ಕಲೆ ಹಾಕಿದ್ದು, 4 ವಿಕೆಟ್ ಕಬಳಿಸಿದ್ದಾರೆ. ಇವರಿಗೆ ಐಪಿಎಲ್‌ನಲ್ಲಿ ಆರ್‌ಸಿಬಿ ಪರ ಆಡಿದ ಅನುಭವ ಇದೆ.

ಈ ಪಟ್ಟಿಯಲ್ಲಿ ಕಾಣಿಸಿಕೊಳ್ಳುವ ಆಸ್ಟ್ರೇಲಿಯಾದ ಯುವ ಆಟಗಾರ ಕೂಪರ್ ಕಾನೋಲಿ ಸಹ ಒಬ್ಬರು. ಪರ್ತ್ ಸ್ಕಾರ್ಚರ್ಸ್ ತಂಡ ಬಿಗ್ ಬ್ಯಾಷ್ ಲೀಗ್ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಸಫಲವಾಗಿದೆ. ಈ ಲೀಗ್‌ನಲ್ಲಿ ಇವರಿಗೆ ಅಮೂಲ್ಯ ಆಟಗಾರರಾಗಿದ್ದಾರೆ. ಇವರು ಈಗಾಗಲೇ ಆಸ್ಟ್ರೇಲಿಯಾ ಪರ ಪಂದ್ಯ ಆಡಿದ್ದು ಭರವಸೆ ಮೂಡಿಸಿದ್ದಾರೆ.
ಡೆವಾಲ್ಡ್ ಬ್ರೆವಿಸ್
ದಕ್ಷಿಣ ಆಫ್ರಿಕಾದ ಬೇಬಿ ಎಬಿ ಎಂದೇ ಖ್ಯಾತಿ ಪಡೆದಿದ್ದ ಡೆವಾಲ್ಡ್ ಬ್ರೆವಿಸ್ ಈಗಾಗಲೇ ವಿಶ್ವ ಕ್ರಿಕೆಟ್‌ನಲ್ಲಿ ತಮ್ಮ ಹೆಜ್ಜೆ ಗುರುತುಗಳನ್ನು ಮೂಡಿಸಿದ್ದಾರೆ. ಇವರು ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಆಧಾರವಾಗಬಲ್ಲ ಪ್ಲೇಯರ್. ಇವರಿಗೆ ಎಸ್‌ಎ20 ಹಾಗೂ ಐಪಿಎಲ್‌ನಲ್ಲಿ ಆಡಿದ ಅನುಭವ ಸಹ ಇದೆ. ಇನ್ನು ಡೆತ್ ಓವರ್‌ಗಳಲ್ಲಿ ರನ್ ವೇಗಕ್ಕೆ ಚುರುಕು ಮುಟ್ಟಿಸಬಲ್ಲ ಕ್ಷಮತೆ ಇವರದ್ದಾಗಿದೆ.
ವರುಣ್ ಚಕ್ರವರ್ತಿ
ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಎಕ್ಸ್ ಫ್ಯಾಕ್ಟರ್ ಎಂದೇ ಬಿಂಬಿತವಾಗಿರುವ ಸ್ಪಿನ್ ಬೌಲರ್ ವರುಣ್ ಚಕ್ರವರ್ತಿ ಸ್ಪಿನ್ ಬೌಲಿಂಗ್ ಮೂಲಕ ಎದುರಾಳಿಗಳನ್ನು ಕಾಡಬಲ್ಲರು. ಇವರು ಸ್ಥಿರ ಪ್ರದರ್ಶನವನ್ನು ನೀಡಿದಲ್ಲಿ ಭಾರತ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳಬಹುದು. ಇವರು ಭಾರತ ಹಾಗೂ ಶ್ರೀಲಂಕಾದಂತಹ ಸ್ಪಿನ್ ಪಿಚ್‌ಗಳಲ್ಲಿ ಮಾರಕವಾಗಬಹುದು. ಸದ್ಯ ಇವರು ವಿಶ್ವದ ನಂಬರ್ 1 ಟಿ20 ಬೌಲರ್ ಆಗಿದ್ದಾರೆ.
ಅಭಿಷೇಕ್ ಶರ್ಮಾ
ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಎದುರಾಳಿಗಳಿಗೆ ಕಾಟ ನೀಡಬಲ್ಲ ಆಟಗಾರ. ಇವರು ಪವರ್ ಪ್ಲೇನಲ್ಲಿ ರನ್‌ಗಳನ್ನು ಕಲೆ ಹಾಕಿ ಅಬ್ಬರಿಸಿದ್ದಾರೆ. ಅಭಿಷೇಕ್ ತಾವು ಎದುರಿಸುವ ಮೊದಲ ಎಸೆತದಿಂದಲೇ ಸ್ಫೋಟಕ ಬ್ಯಾಟಿಂಗ್ ನಡೆಸುವ ಕ್ಷಮತೆ ಹೊಂದಿದ್ದಾರೆ. ಇವರು ಈಗಾಗಲೇ ಟಿ20 ಕ್ರಿಕೆಟ್‌ನಲ್ಲಿ 1,267 ರನ್ ಕಲೆ ಹಾಕಿದ್ದಾರೆ. ಅಲ್ಲದೆ ಇವರು ಐಸಿಸಿ ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನವನ್ನು ಹೊಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications