
ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಪಂದ್ಯಗಳು ಶನಿವಾರದಿಂದ ಆರಂಭವಾಗಲಿದೆ. ಮೊದಲ ದಿನ ಎರಡು ಪಂದ್ಯಗಳು ನಡೆಯಲಿದ್ದು ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಲಿದ್ದು ಕುತೂಹಲ ಮೂಡಿಸಿದೆ. ಬಲಿಷ್ಠ ಇಂಗ್ಲೆಂಡ್ ತಂಡದ ವಿರುದ್ಧ ಪ್ರತಿಭಾನ್ವಿತ ಆಟಗಾರರನ್ನು ಒಳಗೊಂಡಿರುವ ಅಫ್ಘಾನಿಸ್ತಾನ ತಂಡ ಯಾವ ರೀತಿಯಾಗಿ ಪ್ರದರ್ಶನ ನೀಡಲಿದ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಇಂಗ್ಲೆಂಡ್ ತಂಡವನ್ನು ಜೋಸ್ ಬಟ್ಲರ್ ಈ ಟೂರ್ನಿಯಲ್ಲಿ ಮುನ್ನಡೆಸುತ್ತಿದ್ದು ಅಲೆಕ್ಸ್ ಹೇಲ್ಸ್, ಮೊಯೀನ್ ಅಲಿ ಮತ್ತು ಲಿಯಾಮ್ ಲಿವಿಂಗ್ಸ್ಟನ್ ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನದೊಂದಿಗೆ ಭರವಸೆ ಮೂಡಿಸಿದ್ದರೆ ಬೌಲಿಂಗ್‌ಲ್ಲಿ ಕ್ರಿಸ್ ಜೋರ್ಡನ್, ಮಾರ್ಕ್ ವುಡ್ ಹಾಗೂ ಕ್ರಿಸ್ ವೋಕ್ಸ್ ಬೌಲಿಂಗ್‌ನಲ್ಲಿ ಮಿಂಚಲು ಸಿದ್ದವಾಗಿದ್ದಾರೆ. ಮತ್ತೊಂದೆಡೆ ಅಫ್ಘಾನಿಸ್ತಾನ ತಂಡವನ್ನು ಆಲ್‌ರೌಂಡರ್ ಮೊಹಮ್ಮದ್ ನಬಿ ಮುನ್ನಡೆಸುತ್ತಿದ್ದು ರಹಮಾನುಲ್ಲಾ ಗುರ್ಬಾಜ್, ನಜಿಬುಲ್ಲಾ ಝದ್ರಾನ್, ಮತ್ತು ಹಜರತುಲ್ಲಾ ಝಜೈ ಈ ತಂಡದ ನಿರ್ಣಾಯಕ ಬ್ಯಾಟರ್‌ಗಳಾಗಿದ್ದಾರೆ. ಇನ್ನು ಬೌಲಿಂಗ್ ವಿಭಾಗದಲ್ಲಿ ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್ ಮತ್ತು ನವೀನ್-ಉಲ್-ಹಕ್ ತಂಡಕ್ಕೆ ಬೌಲಿಂಗ್‌ನಲ್ಲಿ ಬಲವಾಗಿದ್ದಾರೆ.
ಹವಾಮಾನ ವರದಿ, ಪಿಚ್ ರಿಪೋರ್ಟ್, ಪಂದ್ಯದ ಸಮಯ
ಹವಾಮಾನ ವರದಿ: ಅಫ್ಘಾನಿಸ್ತಾನ ಹಾಗೂ ಇಂಗ್ಲೆಂಡ್ ವಿರುದ್ಧದ ಪಂದ್ಯ ಪರ್ತ್‌ನಲ್ಲಿರುವ ಪರ್ತ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿಲ್ಲ ಎಂದು ಹವಾಮಾನ ವರದಿ ತಿಳಿಸುತ್ತಿದೆ.
ಪಿಚ್ ವರದಿ: ಪರ್ತ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಪಿಚ್ ವೇಗಿಗಳಿಗೆ ನೆರವು ನೀಡುವ ಸಾರ್ಧಯತೆಯಿದೆ. ಇನ್ನು ಬ್ಯಾಟರ್‌ಗಳು ಕೂಡ ಈ ಪಿಚ್‌ನ ಲಾಭವನ್ನು ಪಡೆಯುವ ನಿರೀಕ್ಷೆಯಿದೆ. ಇನ್ನು ಸ್ಪಿನ್ನರ್‌ಗಳಿಗೆ ಕೂಡ ಬೆಂಬಲ ದೊರೆಯುವ ಸಾಧ್ಯತೆಯಿದೆ.
ಪಂದ್ಯದ ಸಮಯ: ಅಫ್ಘಾನಿಸ್ತಾನ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಪಂದ್ಯ ಭಾರತೀಯ ಕಾಲಮಾನ ಸಂಜೆ 4.30ಕ್ಕೆ ಆರಂಭವಾಗಲಿದೆ. 4 ಗಂಟೆಗೆ ಈ ಪಂದ್ಯದ ಟಾಸ್ ಪ್ರಕ್ರಿಯೆ ನಡೆಯಲಿದೆ.
ಇಂಗ್ಲೆಂಡ್ ಸಂಭಾವ್ಯ ಆಡುವ ಬಳಗ: ಜೋಸ್ ಬಟ್ಲರ್ (ನಾಯಕ), ಅಲೆಕ್ಸ್ ಹೇಲ್ಸ್, ಡೇವಿಡ್ ಮಲಾನ್, ಮೊಯಿನ್ ಅಲಿ, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್ಸ್ಟೋನ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ಬೆನ್ ಸ್ಟೋಕ್ಸ್, ಮಾರ್ಕ್ ವುಡ್, ಕ್ರಿಸ್ ವೋಕ್ಸ್
ಅಫ್ಘಾನಿಸ್ತಾನ ಸಂಭಾವ್ಯ ಆಡುವ ಬಳಗ: ಮೊಹಮ್ಮದ್ ನಬಿ (ನಾಯಕ), ನಜೀಬುಲ್ಲಾ ಝದ್ರಾನ್, ರಹಮಾನುಲ್ಲಾ ಗುರ್ಬಾಜ್, ಅಜ್ಮತುಲ್ಲಾ ಒಮರ್ಜಾಯ್, ಫರೀದ್ ಅಹ್ಮದ್ ಮಲಿಕ್, ಫಝಲ್ ಹಕ್ ಫಾರೂಕಿ, ಹಜರತುಲ್ಲಾ ಝಝೈ, ಇಬ್ರಾಹಿಂ ಝದ್ರಾನ್, ಮುಜೀಬ್ ಉರ್ ರೆಹಮಾನ್, ನವೀನ್ ಉಲ್ ಹಕ್, ರಶೀದ್ ಖಾನ್
ಅಫ್ಘಾನಿಸ್ತಾನ ಸಂಪೂರ್ಣ ಸ್ಕ್ವಾಡ್: ಅಜ್ರತುಲ್ಲಾ ಝಜೈ, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ದರ್ವಿಶ್ ರಸೂಲಿ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ (ನಾಯಕ), ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್, ನವೀನ್-ಉಲ್-ಹಕ್, ಫಜಲ್ಹಕ್ ಫಾರೂಕಿ, ಫರೀದ್ ಅಹ್ಮದ್ ಮಲಿಕ್, ಉಸ್ಮಾನ್ ಘನಿ, ಖೈಸ್ ಅಹ್ಮದ್, ಮೊಹಮ್ಮದ್ ಸಲೀಮ್ ಸಫಿ
ಇಂಗ್ಲೆಂಡ್ ಸಂಪೂರ್ಣ ಸ್ಕ್ವಾಡ್: ಜೋಸ್ ಬಟ್ಲರ್(ವಿಕೆಟ್ ಕೀಪರ್/ ನಾಯಕ), ಅಲೆಕ್ಸ್ ಹೇಲ್ಸ್, ಡೇವಿಡ್ ಮಲಾನ್, ಬೆನ್ ಸ್ಟೋಕ್ಸ್, ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ಮಾರ್ಕ್ ವುಡ್, ಟೈಮಲ್ ಮಿಲ್ಸ್, ಫಿಲಿಪ್ ಸಾಲ್ಟ್, ಹ್ಯಾರಿ ಬ್ರೂಕ್