Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಅಫ್ಘಾನಿಸ್ತಾನಕ್ಕೆ ಐರ್ಲೆಂಡ್ ಸವಾಲು: ಸಂಭಾವ್ಯ ತಂಡ, ಹವಾಮಾನ ವರದಿ ಹಾಗೂ ಪಿಚ್ ರಿಪೋರ್ಟ್

T20 World Cup Afghanistan vs Ireland: pitch report weather forecast and Probable XI details

ವಿಶ್ವಕಪ್‌ನಲ್ಲಿ ಶುಕ್ರವಾರ ಅಫ್ಘಾನಿಸ್ತಾನ ಹಾಗೂ ಐರ್ಲೆಂಡ್ ತಂಡಗಳು ಮುಖಾಮುಖಿಯಾಗಲಿದ್ದು ಮೆಲ್ಬರ್ನ್ ತಂಡ ಈ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಅಫ್ಘಾನಿಸ್ತಾನ ತಂಡ ಈ ಬಾರಿಯ ವಿಶ್ವಕಪ್ ಟೂರ್ನಿಯ ಸೂಪರ್ ೧೨ ಹಂತದಲ್ಲಿ ಈವರೆಗೂ ಗೆಲುವಿನ ರುಚಿ ಕಂಡಿಲ್ಲ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸೋಲು ಅನುಭವಿಸಿದ ಬಳಿಕ ಎರಡನೇ ಪಂದ್ಯ ಮಳೆಗೆ ಆಹುತಿಯಾಗಿದೆ. ಹೀಗಾಗಿ ಶುಕ್ರವಾರದ ಪಂದ್ಯದಲ್ಲಿ ಗೆದ್ದು ಟೂರ್ನಿಯಲ್ಲಿ ಹೋರಾಟ ಪ್ರದರ್ಶಿಸುವ ಇರಾದೆಯಲ್ಲಿದೆ ಮೊಹಮ್ಮದ್ ನಬಿ ಪಡೆ.

ಇನ್ನು ಮತ್ತೊಂದೆಡೆ ಐರ್ಲೆಂಡ್ ತಂಡ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರೀ ಅಂತರದಲ್ಲಿ ಸೋಲು ಅನುಭವಿಸಿತ್ತು. ಆದರೆ ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಡಕ್ವರ್ತ್ ಲೂಯೀಸ್ ನಿಯಮದಲ್ಲಿ 5 ರನ್‌ಗಳ ಅಂತರದಿಂದ ಗೆಲುವು ಸಾಧಿಸಿದೆ.

ಪಂದ್ಯದ ಸಮಯ ನೇರಪ್ರಸಾರ ಮಾಹಿತಿ: ಐರ್ಲೆಂಡ್ ಹಾಗೂ ಅಫ್ಘಾನಿಸ್ತಾನ ತಂಡಗಳು ಶುಕ್ರವಾರ ಮೆಲ್ನರ್ನ್ ಕ್ರಿಕೆಟ್ ಗ್ರೌಂಡ್(ಎಂಸಿಜಿ)ಯಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಬೆಳಿಗ್ಗೆ 9:30ಕ್ಕೆ ಆರಂಭವಾಗಲಿದ್ದು ಮಧ್ಯಾಹ್ನ 9 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಹಾಟ್‌ಸ್ಟಾರ್ ಹಾಗೂ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಈ ಪಂದ್ಯದ ನೇರಪ್ರಸಾರವನ್ನು ವೀಕ್ಷಿಸಬಹುದಾಗಿದೆ.

ಹವಾಮಾನ ವರದಿ: ಪಂದ್ಯದ ದಿನ ಮೆಲ್ಬರ್ನ್‌ನಲ್ಲಿ 13 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶವಿರಲಿದೆ ಎಂದು ಹವಾಮಾನ ವರದಿ ಮಾಹಿತಿ ನೀಡುತ್ತಿದೆ. ಇನ್ನು ಪಂದ್ಯದ ದಿನ ಮಳೆಯಾಗುವ ಸಾಧ್ಯತೆ ಶೇಕಡಾ 18ರಷ್ಟಿದೆ.
ಪಿಚ್ ರಿಪೋರ್ಟ್: ಈ ಮೆಲ್ಬರ್ನ್ ಪಿಚ್‌ನಲ್ಲಿ ಬ್ಯಾಟ್ ಹಾಗೂ ಬೌಲಿಂಗ್ ವಿಭಾಗಕ್ಕೆ ಸಮತೋಲಿತವಾಗಿ ನೆರವು ನೀಡಲಿದೆ. ಪಂದ್ಯದ ಆರಂಭಿಕ ಹಂತದಲ್ಲಿ ವೇಗಿಗಳಿಗೆ ಬೌನ್ಸ್ ನೆರವು ನೀಡಲಿದೆ. ಆದರೆ ಈ ಅಂಗಳದಲ್ಲಿ ಸ್ಪಿನ್ನರ್‌ಗಳಿಗೆ ಯಶಸ್ಸು ಅಷ್ಟಕ್ಕಷ್ಟೇ ಎನ್ನುವಂತಿದೆ ಈ ಹಿಂದಿನ ದಾಖಲೆಗಳು

ಅಫ್ಘಾನಿಸ್ತಾನ ಸಂಭಾವ್ಯ ಆಡುವ ಬಳಗ: ಹಜರತುಲ್ಲಾ ಝಜೈ, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ಉಸ್ಮಾನ್ ಘನಿ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ (ನಾಯಕ), ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ಫರೀದ್ ಅಹ್ಮದ್ ಮಲಿಕ್/ನವೀನ್-ಉಲ್-ಹಕ್ ಎಫ್.

ಐರ್ಲೆಂಡ್ ಸಂಭಾವ್ಯ ಆಡುವ ಬಳಗ: ಪಾಲ್ ಸ್ಟಿರ್ಲಿಂಗ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಲೋರ್ಕನ್ ಟಕರ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಗರೆಥ್ ಡೆಲಾನಿ, ಮಾರ್ಕ್ ಅಡೇರ್, ಫಿಯಾನ್ ಹ್ಯಾಂಡ್, ಬ್ಯಾರಿ ಮೆಕಾರ್ಥಿ, ಜೋಶುವಾ ಲಿಟಲ್

ಅಫ್ಘಾನಿಸ್ತಾನ ಸಂಪೂರ್ಣ ಸ್ಕ್ವಾಡ್: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಮೊಹಮ್ಮದ್ ನಬಿ (ನಾಯಕ), ಹಜರತುಲ್ಲಾ ಝಜೈ, ಇಬ್ರಾಹಿಂ ಝದ್ರಾನ್, ಉಸ್ಮಾನ್ ಘನಿ, ನಜೀಬುಲ್ಲಾ ಝದ್ರಾನ್, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ಫರೀದ್ ಅಹ್ಮದ್ ಮಲಿಕ್, ಫಝಲ್ಹಕ್ ಫಾರೂಕಿ, ಮೊಹಮ್ಮದ್ ಸಲೀಮ್ ಸಫಿ, ದರ್ವಿಶ್ ರಸೂಲಿ, ನವೀನ್-ಉಲ್-ಹಕ್, ಕೈಸ್ ಅಹ್ಮದ್

ಐರ್ಲೆಂಡ್ ಸಂಪೂರ್ಣ ಸ್ಕ್ವಾಡ್: ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಲೋರ್ಕನ್ ಟಕರ್ (ವಿಕೆಟ್ ಕೀಪರ್), ಪಾಲ್ ಸ್ಟಿರ್ಲಿಂಗ್, ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಗರೆಥ್ ಡೆಲಾನಿ, ಮಾರ್ಕ್ ಅಡೈರ್, ಬ್ಯಾರಿ ಮೆಕಾರ್ಥಿ, ಫಿಯಾನ್ ಹ್ಯಾಂಡ್, ಜೋಶುವಾ ಲಿಟಲ್, ಸಿಮಿ ಸಿಂಗ್, ಕಾನರ್ ಓಲ್ಫರ್ಟ್, ಗ್ರಹಾಂ ಹ್ಯೂಮ್, ಸ್ಟೀಫನ್ ಡೊಹೆನಿ

Story first published: Thursday, October 27, 2022, 20:32 [IST]
Other articles published on Oct 27, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+